ಹುಬ್ಬಳ್ಳಿ: ಬಾಗಲಕೋಟೆ ಮೂಲದ ಗರ್ಭಿಣಿ ಮಹಿಳೆಗೆ ಕೊರೋನಾ ದೃಢಪಟ್ಟಿದ್ದು,ಗರ್ಭಿಣಿಯ ಜೀವ ರಕ್ಷಣೆಗಾಗಿ ಗರ್ಭಪಾತ ಮಾಡುವುದು ಅನಿವಾರ್ಯವಾಗಿತ್ತು. ಈ ಹಿನ್ನಲೆಯಲ್ಲಿ ಇಂದು ಕಿಮ್ಸ್ ಆಸ್ಪತ್ರೆಯ ವೈದ್ಯರು ಗರ್ಭಿಣಿ ಸಂಬಂಧಿಕರ ಒಪ್ಪಿಗೆಯ ಹಾಗೂ ತಜ್ಞರ ಸಲಹೆ ಮೇರೆಗೆ ಯಶಸ್ವಿಯಾಗಿ ಗರ್ಭಪಾತ ಮಾಡಿಸಿದ್ದಾರೆ‌.

ಇಲ್ಲಿಯ ಕಿಮ್ಸ್ ನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಕೊರೊನಾ ಸೋಂಕಿತ ಗರ್ಭಿಣಿಗೆ ಗರ್ಭಪಾತ ಮಾಡಲಾಗಿದೆ. ಮಹಿಳೆ ಆರೋಗ್ಯ ಸ್ಥಿರವಾಗಿದೆ. ಢಾಣಕಶಿರೂರ ಮೂಲದ 23 ವರ್ಷದ ಈ ಮಹಿಳೆ ಕೊರೋನಾ ಕಾರಣದಿಂದ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದಳು. ಅಲ್ಲದೆ ದೇಹದಲ್ಲಿ ಸೋಡಿಯಮ್ ಅಂಶ ಕಡಿಮೆಯಾಗಿ ಸುಸ್ತಾಗಿದ್ದಳು.

ಅಲ್ಸರ್ ಉಂಟಾಗಿ ಊಟ ಮಾಡಲು ಆಗುತ್ತಿರಲಿಲ್ಲ, ಹಿಮೋಗ್ಲೋಬಿನ್ ಕಡಿಮೆಯಾಗಿ ರಕ್ತ ನೀಡಲಾಗಿತ್ತು. ಹೀಗಾಗಿ ಮಹಿಳೆ ಉಳಿಸಿಕೊಳ್ಳಲು ಗರ್ಭಪಾತ ಅನಿವಾರ್ಯವಾಗಿತ್ತು. ಇದಕ್ಕಾಗಿ ವಿಶೇಷ ತಂಡ ರಚನೆ ಮಾಡಿ ಮಹಿಳೆ ಕುಟುಂಬಕ್ಕೆ ಅಗತ್ಯತೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಮಾತ್ರೆಗಳನ್ನು ನೀಡುವ ಮೂಲಕ ಗರ್ಭಪಾತ ಮಾಡಲಾಗಿದೆ. ಮಹಿಳೆ ಆರೋಗ್ಯ ಸ್ಥಿರವಾಗಿದೆ ಎಂದು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಐಪಿಎಲ್ ಬೆಟ್ಟಿಂಗ್: ಗದಗನಲ್ಲಿ ಏಳು ಜನರ ಬಂಧನ

ಐಪಿಎಲ್ ಬೆಟ್ಟಿಂಗ್ ಗೆ ಸಂಬಂಧಿಸಿದಂತೆ ಪೊಲೀಸರು 7 ಜನರನ್ನು ಬಂಧಿಸಿದ ಘಟನೆ ಗದಗ ನಗರದಲ್ಲಿ ನಡೆದಿದೆ.

ಕೊರೊನಾಕ್ಕೆ ಹೆದರಿ ಆತ್ಮಹತ್ಯೆ – ವರದಿ ನೆಗೆಟಿವ್!

ಬೀದರ್ : ತನಗೆ ಕೊರೊನಾ ವೈರಸ್ ಬಂದಿದೆ ಎಂದು ಆತಂಕಗೊಂಡ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆದರೆ, ಆತನ ಕೊರೊನಾ ವರದಿ ಮಾತ್ರ ನೆಗೆಟಿವ್ ಬಂದಿದೆ.

ಸಮಾಜ ಸಂಘಟನೆಗೆ ಕೈ ಜೋಡಿಸಿ: ಬಸವರಾಜ

ಉತ್ತರಪ್ರಭ ಸುದ್ದಿಶಿರಹಟ್ಟಿ: ರಾಜ್ಯ ವೀರಶೈವ ಲಿಂಗಾಯಿತ ಪಂಚಮಸಾಲಿ ಸಂಘ ತಾಲೂಕು ಘಟಕ ಆಶ್ರಯದಲ್ಲಿ ತಾಲೂಕಿನ ಕಡಕೋಳ…

ರಾಜ್ಯದಲ್ಲಿಂದು 2000 ಗಡಿ ದಾಟಿದ ಸೋಂಕಿತರ ಸಂಖ್ಯೆ: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 2062 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 28877…