ಧಾರವಾಡ : ಸರ್ಕಾರಿ ಆಸ್ಪತ್ರೆಯಲ್ಲಿನ ಸಿಬ್ಬಂದಿ ಕೊರೊನಾ ವಿರುದ್ಧ ಹಗಲಿರುಳು ದುಡಿಯುತ್ತಿದ್ದಾರೆ. ಆದರೆ, ಖಾಸಗಿ ವೈದ್ಯರು ಅನ್ಯ ಕಾಯಿಲೆಗಳಿಗೆ ಚಿಕಿತ್ಸೆ ನೀಡಬೇಕು. ಒಂದು ವೇಳೆ ಚಿಕಿತ್ಸೆ ನೀಡಲು ನಿರಾಕರಿಸಿದರೆ ಅವರ ವೈದ್ಯಕೀಯ ನೋಂದಣಿ ರದ್ದುಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.

ವೈದ್ಯರು ತಮ್ಮ ವೃತ್ತಿಗೆ ವಿರುದ್ಧವಾಗಿ ನಡೆದುಕೊಳ್ಳಬಾರದು. ಕೆಪಿಎಂಇ ಕಾಯ್ದೆ ಅಡಿ ನೋಂದಣಿಯಾಗಿರುವ ಖಾಸಗಿ ವೈದ್ಯರು ತಮ್ಮ ಆಸ್ಪತ್ರೆಗಳನ್ನು ತೆರೆದು ಕೊರೊನಾ ಅಲ್ಲದ ಇನ್ನಿತರ ಕಾಯಿಲೆಗಳಿಗೆ ಚಿಕಿತ್ಸೆ ನೀಡಬೇಕು ಎಂದು ಹೇಳಿದ್ದಾರೆ.

ಖಾಸಗಿ ವೈದ್ಯರು ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ ಮತ್ತು ಸಾಮಾನ್ಯ ಕಾಯಿಲೆಗಳಿಗೆ ಚಿಕಿತ್ಸೆ ನೀಡುತ್ತಿಲ್ಲ ಎಂಬ ದೂರುಗಳು ಬರುತ್ತಿವೆ. ಶೀಘ್ರದಲ್ಲೇ ಸಭೆ ನಡೆಸಿ ಚಿಕಿತ್ಸೆ ನೀಡದ ಖಾಸಗಿ ವೈದ್ಯರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಖಾಸಗಿ ವೈದ್ಯರು ತಮ್ಮ ಆಸ್ಪತ್ರೆಗಳನ್ನು ತೆರೆದು ಜನರ ಸಾಮಾನ್ಯ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಇದರಿಂದ ಸರ್ಕಾರಿ ಆಸ್ಪತ್ರೆಗಳ ವೈದ್ಯರ ಮೇಲಿನ ಒತ್ತಡ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್ ನಿಧನ

ಮುಂಬೈ: ಬಾಲಿವುಡ್ ನ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್ ನಿಧನ ಹೊಂದಿದ್ದಾರೆ. ಕಿಡ್ನಿ ವೈಫಲ್ಯದಿಂದ…

ಜಕ್ಕಲಿಯಲ್ಲಿ ಟೆಂಗಿನ ಮರಕ್ಕೆ ಸಿಡಿಲು!

ಟೆಂಗಿನ ಮರಕ್ಕೆ ಸಿಡಿಲು ಬಡಿದು ದಗದಗ ಹೊತ್ತಿ ಉರಿದ ಘಟನೆ ನರೇಗಲ್ಲ ಸಮೀಪದ ಜಕ್ಕಲಿ ಗ್ರಾಮದಲ್ಲಿ ನಡೆದಿದೆ.

ನಾಳೆ ಕಾಂಗ್ರೆಸ್ ನಿಂದ ಶಿವಮೊಗ್ಗ ಚಲೋ ಆರಂಭ

ಕಾಂಗ್ರೆಸ್ ನಾಯಕರ ಮೇಲೆ ಬಿಜೆಪಿ ನೀಡುತ್ತಿರುವ ಕಿರುಕುಳವನ್ನು ಖಂಡಿಸಿ ಮಾ.13 ರಂದು ಮದ್ಯಾಹ್ನ 1ಕ್ಕೆ ಶಿವಮೊಗ್ಗ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ನಾಯಕ ಡಿ.ಕೆ ಶಿವಕುಮಾರ ಅವರು ತಮ್ಮ ಟ್ವಿಟರ್ ಮೂಲಕ ತಿಳಿಸಿದ್ದಾರೆ.

ರಾಜ್ಯದಲ್ಲಿಂದು 397 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 397 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 10118…