ಮುಂಬಯಿ: ಮಹಾರಾಷ್ಟ್ರದಲ್ಲಿ ಕೊರೊನಾ ಮಹಾಮಾರಿ ಮಿತಿ ಮೀರಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಹೀಗಾಗಿ ರಾಜ್ಯದ ಜನತೆಯಲ್ಲಿ ಆತಂಕ ಮನೆ ಮಾಡಿದೆ.

ಈ ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 1089 ಹೊಸ ಕೊವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 19,063ಕ್ಕೆ ಏರಿಕೆಯಾಗಿದೆ. ವಾಣಿಜ್ಯ ನಗರಿ ಮುಂಬಯಿನಲ್ಲಿಯೇ 748 ಹೊಸ ಪ್ರಕರಣಗಳು ವರದಿಯಾಗಿದ್ದು, ಮಹಾ ರಾಜಧಾನಿಯ ಸೋಂಕಿತರ ಸಂಖ್ಯೆ 11,967ಕ್ಕೆ ಏರಿಕೆಯಾಗಿದೆ.

ನಗರದಲ್ಲಿ ಮಹಾಮಾರಿಗೆ ಮತ್ತೆ 25 ಜನ ಬಲಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಮುಂಬಯಿನಲ್ಲಿ ಸಾವಿನ ಸಂಖ್ಯೆ 462ಕ್ಕೆ ಏರಿಕೆಯಾಗಿದೆ. ರಾಜ್ಯಾದ್ಯಂತ ಒಟ್ಟು 35 ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 731ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಜೂಜಾಟ: ಹತ್ತು ಜನರ ಬಂಧನ

ರೋಣ: ಇಲ್ಲಿನ ಬಿಸಿಎಂ ಹಾಸ್ಟೇಲ್ ಸಮೀಪದಲ್ಲಿರುವ ರಸ್ತೆಯ ಬದಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಹತ್ತು ಜನರನ್ನು ರೋಣ ಪೋಲಿಸರು ಬಂಧಿಸಿದ್ದಾರೆ, ಬಂಧಿತರಿಂದ 21,160 ರೂ, ವಶಪಡಿಸಿಕೊಳ್ಳಲಾಗಿದೆ.

ರಾಜ್ಯಸಭಾ ಚುನಾವಣೆ: ಸಂಘ ನಿಷ್ಟರಿಗೆ ಮಣೆ ಕಮಲದಲ್ಲಿ ಅಸಂತೋಷ..!

ಬೆಂಗಳೂರು: ಇತ್ತಿಚೆಗಷ್ಟೆ ಶಾಸಕ ಉಮೇಶ್ ಕತ್ತಿ ತಮ್ಮ ಸಹೋದರ ರಮೇಶ್ ಕತ್ತಿಗೆ ರಾಜ್ಯಸಭೆಗೆ ಕಳಿಸಬೇಕು ಎಂದು…

ತರಬೇತಿಗೆ ಅರ್ಜಿ ಆಹ್ವಾನ

ಕೌಶಲ್ಯಾಭಿವೃದ್ಧಿ , ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಂಸ್ಥೆಯಾದ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ ( ಸಿಡಾಕ) ಧಾರವಾಡ ಹಾಗೂ ಸಿಡಾಕ್ ಜಿಲ್ಲಾ ಕಚೇರಿ ಗದಗ ಇವರ ಸಹಯೋಗದಲ್ಲಿ ಉದ್ಯಮ ಕ್ಷೇತ್ರದಲ್ಲಿ ಆಸಕ್ತಿ ಇರುವ ಅಬ್ಯರ್ಥಿಗಳಿಗೆ 30 ದಿನಗಳ ಉಚಿತ ಬ್ಯೂಟಿಷಿಯನ್ ಹಾಗೂ ಕಾಸ್ಮೆಟಾಲಜಿ ಕೌಶಲ್ಯಾಧಾರಿತ ಉದ್ಯಮಶೀಲತಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ನಿವೃತ್ತ ಪ್ರಾಚಾರ್ಯ ಡಿ.ಡಿ. ಕಡೇಮನಿ ನಿಧನ

ಗದಗ: ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯರು ಮತ್ತು ನೆಲ್ಸನ್…