ಬೆಂಗಳೂರು: ನಗರದಲ್ಲಿ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಮತ್ತೆ ಇಬ್ಬರು ಗರ್ಭಿಣಿಯರಿಗೆ ಕೊರೊನಾ ಸೋಂಕು ಕಂಡು ಬಂದಿದೆ.

ಮಧ್ಯಾಹ್ನ ಪಾದರಾಯನಪುರದ ಗರ್ಭಿಣಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಇದೀಗ ಅದೇ ವ್ಯಾಪ್ತಿಯ ಮತ್ತೊಬ್ಬ ಗರ್ಭಿಣಿಗೆ ಸೋಂಕು ಕಾಣಿಸಿಕೊಂಡಿದೆ. ಪಾದರಾಯನಪುರ 10ನೇ ಕ್ರಾಸ್ ನಿವಾಸಿ 19 ವರ್ಷದ 8 ತಿಂಗಳು ಗರ್ಭಿಣಿಗೆ ಸೋಂಕು ತಗುಲಿದೆ. ಮಹಿಳೆಯ ಪತಿ (ರೋಗಿ 706)ಗೆ ಸಾಮೂಹಿಕ ಪರೀಕ್ಷೆಯಲ್ಲಿ ಕೊರೊನಾ ಸೋಂಕು ತಗುಲಿದ್ದು ಪತ್ತೆಯಾಗಿತ್ತು. ಪತಿಯ ಸಂಪರ್ಕದಲ್ಲಿದ್ದರಿಂದಾಗಿ ಸೋಂಕು ತಗುಲಿದೆ. ಮಹಿಳೆ ಹೊಟ್ಟೆ ನೋವು ಎಂದು ನಗರದ ವಾಣಿ ವಿಲಾಸ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆ ಸಿಬ್ಬಂದಿ ಮುನ್ನೆಚ್ಚರಿಕೆ ಕ್ರಮವಾಗಿ ಮಹಿಳೆಯ ಗಂಟಲು ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದರು. ಇದೀಗೆ ಮಹಿಳೆಗೆ ಕೊರೊನಾ ತಗುಲಿದ್ದು ಖಚಿತವಾಗಿದೆ. ವಾಣಿ ವಿಲಾಸ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ಮೇ.18ರಿಂದ ಸಾರಿಗೆ ಸಂಚಾರ ಆರಂಭ?

ಮೇ.18ರಿಂದ ಸಾರಿಗೆ ಸಂಚಾರ ಆರಂಭ? ಬೆಂಗಳೂರು: ಮೇ.18ರಿಂದ ಸಾರಿಗೆ ಸಂಚಾರ ಸಂಪೂರ್ಣವಾಗಿ ಪ್ರಾರಂಭವಾಗಲಿದೆ ಎನ್ನಲಾಗುತ್ತಿದೆ. ಮೇ.17ಕ್ಕೆ…

ರಾಜ್ಯದಲ್ಲಿ ಕೋವಿಡ್ ಕರ್ಪ್ಯೂ! ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳೇನು?

ಈಗಾಗಲೇ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಲಾಕ್ ಡೌನ್ ಮಾದರಿಯಲ್ಲೆ ರಾಜ್ಯ ಸರ್ಕಾರ ಕೋವಿಡ್ ಕರ್ಪ್ಯೂ ಘೋಷಿಸಿದೆ. ಸಚಿವ ಸಂಪುಟದಲ್ಲಿ ಈ ನಿರ್ಧಾರ ತೆಗೆದುಕೊಂಡು ಇನ್ನು ಹಲವು ನಿರ್ಧಾರಗಳನ್ನು ಸಂಪುಟ ಸಭೆಯಲ್ಲಿ ಸರ್ಕಾರ ತೆಗೆದುಕೊಂಡಿದೆ.

ಚೀನಾ ಟೆನ್ಷನ್: ಸೇನಾಧಿಕಾರಿ, ಇಬ್ಬರು ಸೈನಿಕರು ಬಲಿ!

ದೆಹಲಿ: ಚೀನಾ ಮತ್ತು ಭಾರತೀಯ ಯೋಧರ ನಡುವಿನ ಮುಖಾಮುಖಿಯಲ್ಲಿ ಲಡಾಖ್ ನ ಗಾಲ್ವಾನ್ ನಲ್ಲಿ ಒಬ್ಬ…