ಕೋಲಾರ: ಲಾಕ್ಡೌನ್ ಸಡಿಲಿಕೆ ಮಾಡಿದ್ದರಿಂದಾಗಿ ಹಾಗೂ ಗಡಿ ರಾಜ್ಯಗಳಲ್ಲಿ ಪತ್ತೆಯಾಗಿರುವ ಕೊರೊನಾ ಪ್ರರಕಣಗಳ ಸಂಖ್ಯೆಯಿಂದಾಗಿ ಜಿಲ್ಲೆಯ ಜನರದಲ್ಲಿ ಆತಂಕ ಮನೆ ಮಾಡಿದ್ದು, ಇಲ್ಲ ಕೂಡ ಕೊರೊನಾ ಭಯ ಕಾಡುತ್ತಿದೆ.
ರಾಜ್ಯದಲ್ಲಿನ ಹಸಿರು ವಲಯಗಳಲ್ಲಿ ಕೋಲಾರ ಕೂಡ ಒಂದು. ಆದರೆ, ಇದರ ಸುತ್ತಮುತ್ತ ಡೇಂಜರ್ ಜೋನ್ ಗಳಿವೆ. ಜಿಲ್ಲೆಯ ನೆರೆಯ ಆಂಧ್ರಪ್ರದೇಶ ಹಾಗೂ ತಮಿಳುನಾಡಿನ ಸುತ್ತಲೂ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಆಂಧ್ರದ ಗಡಿ ಭಾಗವಾದ ಚಿತ್ತೂರು ಜಿಲ್ಲೆಯ ವಿ.ಕೋಟೆ ಬಳಿ ಐದು ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ನಮ್ಮ ರಾಜ್ಯದ ಗಡಿಗೆ ಕೇವಲ ಒಂದು ಕಿ.ಮೀ ದೂರದ ಪ್ರದೇಶದಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ಅಲ್ಲದೇ, ಸೋಂಕಿತ ವ್ಯಕ್ತಿ ಕೋಲಾರ ಜಿಲ್ಲೆಯ ಗಡಿಯ ಮೂರು ಹೋಬಳಿ ಕೇಂದ್ರದಲ್ಲಿ ಓಡಾಡಿರುವ ಟ್ರಾವಲ್ ಹಿಸ್ಟರಿ ಹೊಂದಿದ್ದಾನೆ. ಜಿಲ್ಲೆಯ ಮೂರು ಹೋಬಳಿಗಳ ರೈತರಿಂದ ತರಕಾರಿ ಖರೀದಿ ಮಾಡಿ, ನಂತರ ಅವರಿಗೆ ಹಣ ಕೊಡಲು ಸೋಂಕಿತ ವ್ಯಕ್ತಿ ಬಂದು ಹೋಗಿರುವುದಾಗಿ ತಿಳಿದು ಬಂದಿದೆ. ಮಾಲೂರು ಮೂಲದ ವ್ಯಕ್ತಿ ಗುಜರಾತ್ನ ಗೋದ್ರಾದಿಂದ ಕೋಲಾರಕ್ಕೆ ಬರುತ್ತಿದ್ದ 15 ಜನರ ಪೈಕಿ ಒಬ್ಬರಲ್ಲಿ ಕೊರೊನಾ ಸೋಂಕು ಖಚಿತವಾಗಿದೆ. ಸೋಂಕಿತನಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದು, ಆತನ ಪ್ರಥಮ ಸಂಪರ್ಕದಲ್ಲಿದ್ದವರನ್ನು ಬೆಂಗಳೂರಿನಲ್ಲೇ ಕ್ವಾರಂಟೈನ್ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ನಗರ ಜಿಲ್ಲೆಗಳನ್ನು ಒಂದು ವಲಯವನ್ನಾಗಿ ಮಾಡಿ ಜನರ ಓಡಾಟಕ್ಕೆ ವಿನಾಯಿತಿ ನೀಡಿರುವುದು ಮತ್ತೊಂದು ರೀತಿಯ ಆತಂಕಕ್ಕೆ ಕಾರಣವಾಗಿದೆ. ಸೋಂಕಿತ ವ್ಯಕ್ತಿಗಳು ಗ್ರೀನ್ ಝೋನ್ ಪ್ರದೇಶದಲ್ಲಿ ಸೋಂಕು ಹರಡುವ ಭೀತಿ ಎಲ್ಲರಲ್ಲೂ ಹೆಚ್ಚಾಗಿದೆ.