ಬೆಂಗಳೂರು: ಲಾಕ್ ಡೌನ್ ನಿಂದಾಗಿ ರಾಜ್ಯದ ಜನತೆ ಸಂಕಷ್ಟ ಎದುರಿಸುತ್ತಿದ್ದು, ಹೀಗಾಗಿ ರಾಜ್ಯಕ್ಕೆ ರೂ. 50,000ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ಕೇಂದ್ರಕ್ಕೆ ಒತ್ತಾಯಿಸಬೇಕು. ಕೊರೋನಾ ನಿಯಂತ್ರಣಕ್ಕಾಗಿ ಮುಖ್ಯಮಂತ್ರಿ ಪರಿಹಾರ ನಿಧಿ ಖಾತೆಯ ಖರ್ಚು ವೆಚ್ಚದ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂದು ಪ್ರತಿಪಕ್ಷಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ.

ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ವಿವಿಧ ಪಕ್ಷಗಳ ಮುಖಂಡರನ್ನು ಒಳಗೊಂಡ ನಿಯೋಗವು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಹಲವು ಬೇಡಿಕೆಗಳ ಹಕ್ಕೊತ್ತಾಯದ ಫತ್ರವನ್ನು ಸಲ್ಲಿಸಿತು. ಇದೇ ವೇಳೆ ಕೊರೋನಾ ಪರಿಸ್ಥಿತಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು.

ಮನುಕುಲವನ್ನು ಮಾರಣಾಂತಿಕವಾಗಿ ಕಾಡುತ್ತಿರುವ ಕೊರೋನಾ ಸೋಂಕು ವಿಶ್ವವ್ಯಾಪಿ ಹರಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ರಾಜ್ಯ ಸರ್ಕಾರ ಆಗ್ರಹಿಸಬೇಕು. ಪಿಎಂ ಕೇರ್ಸ್ ನಿಧಿಗೆ ರಾಜ್ಯದಿಂದ ಸುಮಾರು ರೂ. 3,000 ಕೋಟಿ ಗಿಂದ ಹೆಚ್ಚು ಹಣ ಹೋಗಿದೆ. ಈ ಕುರಿತು ಯಾವುದೇ ಮಾಹಿತಿ ಇಲ್ಲ. ಹೀಗಾಗಿ ಪಿಎಂ ಕೇರ್ಸ್ ನಿಧಿಗೆ ಹೋಗಿರುವ ಹಣವನ್ನು ಹಿಂತಿರುಗಿಸುವಂತೆ ರಾಜ್ಯ ಸರ್ಕಾರ ಒತ್ತಾಯಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಲಾಕ್ ಡೌನ್ ನಿಂದಾಗಿ ರಾಜ್ಯಕ್ಕೆ ಎದುರಾಗಿರುವ ನಷ್ಟ ಎದುರಿಸಲು ರಾಜ್ಯ ಸರ್ಕಾರ ಕೇಂದ್ರದಿಂದ ರೂ.50,000 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ಕೇಳಬೇಕು. ಪ್ರಸ್ತುತ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ರೂ. 1,610 ಕೋಟಿ ಪ್ಯಾಕೇಜ್ ಕೆಲವು ಸಂಕಷ್ಟದಲ್ಲಿರುವ ಜನರಿಗೆ ಮಾತ್ರ ಸಹಾಯಕವಾಗಲಿದೆ. ಈ ಪರಿಹಾರ ಅವೈಜ್ಞಾನಿಕವಾದದ್ದು ಎಂದು ತಿಳಿಸಿದ್ದಾರೆ.

ವಿಧಾನಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಜೆಡಿಎಸ್ ರಾಜ್ಯಾಧ್ಯಕ್ಷ ಡಾ.ಎಂ.ಪಿ.ನಾಡಗೌಡ, ಸಿಪಿಎಂ ನಾಯಕ ಜಿಎನ್.ನಾಗರಾಜ್, ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವು ನಾಯಕರು ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ಕರ‍್ಣಿಕೋತ್ಸವದಲ್ಲಿ ಗೊರವಯ್ಯ ನುಡಿದ ಭವಿಷ್ಯವೇನು.?

ಹಾವನೂರ ಗ್ರಾಮದಲ್ಲಿ ಭಾನುವಾರ ಮೈಲಾರಲಿಂಗೇಶ್ವರ ಕರ‍್ಣಿಕೋತ್ಸವದಲ್ಲಿ ಸವನಿಧಿ ಆಯಿತಲೇ ಪರಾಕ್ ಎಂದು ಗೊರವಯ್ಯ ಕರ‍್ಣಿಕ ನುಡಿದನು.

ಜನ ಮೈಮರೆಯದೆ ಮಾರ್ಗಸೂಚಿ ಪಾಲಿಸಿ; ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು: ಮೇ 30-ಕೋವಿಡ್ ಪಾಸಿಟೀವ್ ಪ್ರಮಾಣ ಕಡಿಮೆಯಾಗಿದೆ ಎಂದು ಜನರು ಮೈಮರೆಯದೆ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಲಹೆ ಮಾಡಿದ್ದಾರೆ.

ವೋಟ್ ಹಾಕಿದರೆ ಮಾತ್ರ ಲಸಿಕೆ ಕೊಟ್ಟು ಪ್ರಾಣ ಉಳಿಸುತ್ತೀರಾ? ಎಂದು ಬಿಜೆಪಿಯನ್ನೇ ಪ್ರಶ್ನಿಸಿದ ವಿಶ್ವನಾಥ್!

ಮೈಸೂರು : ವೋಟ್ ಹಾಕಿ ಉಳಿಸಿದರೆ ಮಾತ್ರ ಜನರನ್ನ ಬದುಕಿಸುತ್ತೀರಾ ಎಂದು ಪ್ರಶ್ನೆ ಮಾಡುವ ಮೂಲಕ ತಮ್ಮ ಪಕ್ಷದ ನಿರ್ಧಾರವನ್ನೇ ಬಿಜೆಪಿ ಶಾಸಕ ಎಚ್. ವಿಶ್ವನಾಥ್ ಪ್ರಶ್ನಿಸಿದ್ದಾರೆ.

16ನೇ ವಯಸ್ಸಿಗೆ ಟಿಕ್ ಟಾಕ್ ಸ್ಟಾರ್ ಈ ನಿರ್ಧಾರ ಕೈಗೊಂಡಿದ್ದೇಕೆ?

ನವದೆಹಲಿ : ಟಿಕ್ಟಾಲಕ್ ಸ್ಟಾರ್ ಸಿಯಾ ಕಕ್ಕರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಹಲವು ಅನುಮಾನಗಳಿಗೆ ದಾರಿ…