ಸತ್ತಲ್ಲಿ 20 ಜನರಿರಬೇಕು…ಮದ್ಯಕ್ಕೆ ಮಾತ್ರ ಸಾವಿರ ಜನರಿದ್ದರೂ ಸೈ!!

ಮುಂಬಯಿ: ಅಂತ್ಯ ಸಂಸ್ಕಾರಕ್ಕೆ 20 ಜನರ ಸೇರುವಂತಿಲ್ಲ. ಆದರೆ, ಮದ್ಯದಂಗಡಿಯ ಮುಂದೆ 1 ಸಾವಿರ ಜನರು ನಿಲ್ಲಬಹುದೇ ಎಂದು ಕೇಂದ್ರ ಸರ್ಕಾರದ ವಿರುದ್ಧ ಶಿವಸೇನೆ ಟೀಕೆ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಶಿವಸೇನೆ ನಾಯಕ ಸಂಜಯ್ ರಾವತ್, ಮದ್ಯ ಮಾರಾಟ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ಸಡಿಲಿಸಿರುವುದರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವ್ಯಕ್ತಿ ಸಾವನ್ನಪ್ಪಿದ ಬಳಿಕ ಆತನ ಅಂತ್ಯ ಸಂಸ್ಕಾರಕ್ಕೆ 20 ಜನರು ಹೊರತುಪಡಿಸಿ ಅದಕ್ಕಿಂತಲೂ ಹೆಚ್ಚು ಜನರು ಸೇರಿವಂತಿಲ್ಲ ಎಂದು ಆದೇಶಿಸಲಾಗಿದೆ. ಆದರೆ, ಮದ್ಯದ ಅಂಗಡಿಗಳ ಮುಂದೆ ಪ್ರತೀನಿತ್ಯ 1 ಸಾವಿರ ಜನರು ನಿಲ್ಲುತ್ತಿದಾರೆ. ವ್ಯಕ್ತಿಯಲ್ಲಿನ ಶಕ್ತಿ ಅದಾಗಲೇ ಹೊರಟು ಹೋಗಿರುತ್ತದೆ. ಆದರೆ, ಮದ್ಯದಂಗಡಿಗಳಲ್ಲಿ ಶಕ್ತಿ ಇರುವುದರಿಂದ 1 ಸಾವಿರ ಜನರು ಸೇರಲು ಅನುಮತಿ ನೀಡಲಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

Exit mobile version