ಯಾವ ಯಾವ ದೇಶದಲ್ಲಿ ಕೊರೊನಾ ಸ್ಥಿತಿ ಹೇಗಿದೆ ಗೊತ್ತಾ?

ನವದೆಹಲಿ: ಕೊರೊನಾ ವೈರಸ್ ಇಡೀ ವಿಶ್ವವನ್ನೇ ಕಂಗಾಲಾಗುವಂತೆ ಮಾಡಿದೆ. ಇಲ್ಲಿಯವರೆಗೂ 2.48 ಲಕ್ಷ ಜನರನ್ನು ಇಲ್ಲಿಯವರೆಗೂ ವೈರಸ್ ಬಲಿ ಪಡೆದಿದೆ. ನಮ್ಮ ದೇಶವೂ ಇದಕ್ಕೆ ಹೊರತಲ್ಲ. ಭಾರತದಲ್ಲಿ ಪಾಸಿಟಿವ್ ಪ್ರಕರಣ 62 ಸಾವಿರ ದಾಟಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ 62,808ಕ್ಕೆ ಏರಿಕೆಯಾಗಿದೆ. 19,301 ಜನ ಗುಣಮುಖರಾಗಿದ್ದು, 2,101 ಜನ ಸಾವನ್ನಪ್ಪಿದ್ದಾರೆ. ಸೋಂಕಿತ ಪ್ರಕರಣದ ದೇಶಗಳ ಪಟ್ಟಿಯಲ್ಲಿ ಭಾರತ 14 ನೇ ಸ್ಥಾನದಲ್ಲಿದೆ. ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 13.47 ಲಕ್ಷ ತಲುಪಿದೆ. 80 ಸಾವಿರಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ.

ಸೋಂಕಿತ ಪ್ರಕರಣಗಳಲ್ಲಿ ಎರಡನೇ ಸ್ಥಾನದಲ್ಲಿ ಸ್ಪೇನ್ ಇದ್ದು 2.62 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. 26,400ಕ್ಕೂ ಹೆಚ್ಚು ಮಂದಿ ಕೊರೊನಾಗೆ ಇಲ್ಲಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಸಂಖ್ಯೆಯಲ್ಲಿ ಇದು ನಾಲ್ಕನೇ ಸ್ಥಾನದಲ್ಲಿದೆ.

ಸೋಂಕಿತರ ಪಟ್ಟಿಯಲ್ಲಿ ಇಟಲಿ ಮೂರನೇ ಸ್ಥಾನದಲ್ಲಿದೆ. ಅಲ್ಲದೇ, ಮೃತಪಟ್ಟವರ ಸಂಖ್ಯೆಯಲ್ಲಿಯೂ ಇದು ಮೂರನೇ ಸ್ಥಾನದಲ್ಲಿದೆ. 2.18 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. 30,300ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.

ಯುಕೆಯಲ್ಲಿ 2.15 ಲಕ್ಷ ಜನರಿಗೆ ಸೋಂಕು ತಗುಲಿದೆ. 31,500ಕ್ಕೂ ಹೆಚ್ಚು ಜನ ಸ ವನ್ನಪ್ಪಿದ್ದಾರೆ. ಈ ರಾಷ್ಟ್ರ ಸೋಂಕಿತರ ಪಟ್ಟಿಯಲ್ಲಿ 4 ನೇ ಸ್ಥಾನದಲ್ಲಿದ್ದರೆ. ಮೃತಪಟ್ಟವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

ಕರ್ನಾಟಕ ರಾಜ್ಯದಲ್ಲಿಯೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಸದ್ಯ ಸೋಂಕಿತರ ಸಂಖ್ಯೆ 794ಕ್ಕೆ ಏರಿಕೆಯಾಗಿದೆ. 386 ಜನ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೂ ಒಟ್ಟು 30 ಜನರನ್ನು ಕೊರೊನಾ ಬಲಿ ಪಡೆದಿದೆ. ಸೋಂಕಿತ ಪ್ರಕರಣಗಳ ಪಟ್ಟಿಯಲ್ಲಿ ರಾಜ್ಯ 13ನೇ ಸ್ಥಾನದಲ್ಲಿದೆ.

Exit mobile version