ಶಿವಮೊಗ್ಗ : ಕರ್ನಾಟಕಕ್ಕೆ ಕೊರೊನಾ ಎಂಟ್ರಿ ಕೊಟ್ಟರೂ ಶಿವಮೊಗ್ಗ ಜಿಲ್ಲೆಯಲ್ಲಿ ಮಾತ್ರ ಅದರ ಆಟ ನಡೆದಿರಲಿಲ್ಲ. ಆದರೆ, ಒಂದೇ ದಿನ 8 ಪ್ರಕರಣಗಳು ದಾಖಲಾಗಿದ್ದು, ಜನರು ಆತಂಕದಲ್ಲಿ ಇದ್ದಾರೆ.
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ ಸೋಂಕು ಪತ್ತೆಯಾಗಿರುವುದನ್ನು ದೃಢಪಡಿಸಿದ್ದಾರೆ. 21 ಜನ ತಬ್ಲಿಘಿಗಳು ಸೇರಿದಂತೆ 136 ಜನರ ಪರೀಕ್ಷಾ ವರದಿ ನೆಗೆಟಿವ್ ಬಂದಿತ್ತು. ಅವರನ್ನು ಶಿವಮೊಗ್ಗ ಜಿಲ್ಲೆಯ ಹೊಳಲ್ಕೆರೆ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.
ನಿನ್ನೆ 9 ಮಂದಿ ಗುಜರಾತ್ ನ ಅಹಮದಾಬಾದ್ ನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದರು. ಈ ಪೈಕಿ 8 ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಇವರೆಲ್ಲಾ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ತವರು ಕ್ಷೇತ್ರ ಶಿಕಾರಿಪುರದವರೇ ಆಗಿದ್ದಾರೆ. ಸದ್ಯ 8 ಜನ ಕೊರೊನಾ ಸೋಂಕಿತರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ಪರೀಕ್ಷೆ ಬರೆಯುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ವ್ಯವಸ್ಥೆ!

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಕಲ್ಪಿಸಿದೆ.…

ರೈತರು ಬೆಳೆಗೆ ಬೆಳೆ ಮಾರಾಟಕ್ಕೆ ಡಿಕೆಶಿ ಮನವಿ

ಬೆಂಗಳೂರು : ಕೊರೊನಾ ವೈರಸ್ ಹರಡುವ ಭೀತಿಯಿಂದಾಗಿ ಸದ್ಯ ಮೇ. 17ರ ವರೆಗೆ ಲಾಕ್ ಡೌನ್…

ದೇಶದಲ್ಲಿ 131 ಕೋಟಿ ಜನಸಂಖ್ಯೆಯಲ್ಲಿ 1 ಕೋಟಿ ಕೊರೋನಾ ಟೆಸ್ಟ್!

ನವದೆಹಲಿ: ಒಂದೇ ದಿನ ದೇಶದಲ್ಲಿ 24,248 ಜನರಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೇ, ಮಹಾಮಾರಿಗೆ 425 ಜನರು…

ಕೊಡಗಾನೂರ ವೀರಭದ್ರೇಶ್ವರ ರಥೋತ್ಸವ

ಸಮೀಪದ ಕೊಡಗಾನೂರ ಗ್ರಾಮದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ರಥೋತ್ಸವ ಭಕ್ತರ ಹರ್ಷೊದ್ಘಾರದ ಮಧ್ಯೆ ಶನಿವಾರ ಸಂಜೆ ಸಂಭ್ರಮದಿಂದ ನಡೆಯಿತು.