ಶಿವಮೊಗ್ಗ : ಕರ್ನಾಟಕಕ್ಕೆ ಕೊರೊನಾ ಎಂಟ್ರಿ ಕೊಟ್ಟರೂ ಶಿವಮೊಗ್ಗ ಜಿಲ್ಲೆಯಲ್ಲಿ ಮಾತ್ರ ಅದರ ಆಟ ನಡೆದಿರಲಿಲ್ಲ. ಆದರೆ, ಒಂದೇ ದಿನ 8 ಪ್ರಕರಣಗಳು ದಾಖಲಾಗಿದ್ದು, ಜನರು ಆತಂಕದಲ್ಲಿ ಇದ್ದಾರೆ.
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ ಸೋಂಕು ಪತ್ತೆಯಾಗಿರುವುದನ್ನು ದೃಢಪಡಿಸಿದ್ದಾರೆ. 21 ಜನ ತಬ್ಲಿಘಿಗಳು ಸೇರಿದಂತೆ 136 ಜನರ ಪರೀಕ್ಷಾ ವರದಿ ನೆಗೆಟಿವ್ ಬಂದಿತ್ತು. ಅವರನ್ನು ಶಿವಮೊಗ್ಗ ಜಿಲ್ಲೆಯ ಹೊಳಲ್ಕೆರೆ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.
ನಿನ್ನೆ 9 ಮಂದಿ ಗುಜರಾತ್ ನ ಅಹಮದಾಬಾದ್ ನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದರು. ಈ ಪೈಕಿ 8 ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಇವರೆಲ್ಲಾ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ತವರು ಕ್ಷೇತ್ರ ಶಿಕಾರಿಪುರದವರೇ ಆಗಿದ್ದಾರೆ. ಸದ್ಯ 8 ಜನ ಕೊರೊನಾ ಸೋಂಕಿತರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ರೈತರಿಗೆ ಕಿರುಕುಳ: ಆ. 10 ರಂದು ಅಧಿಕಾರಿಗಳ ವಿರುದ್ಧ ಸತ್ಯಗ್ರಹ

ಉತ್ತರಪ್ರಭ ಸುದ್ದಿ: ಗದಗ ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಪಟ್ಟಾ ಇತರಣೆ ಮಾಡದೇ ಇರುವುದು…

ಕಲಾವಿದರಿಗೆ ಆರ್ಥಿಕ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಗದಗ: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕರೋನಾ ವೈರಸ್‌ನ ಎರಡನೇ ಅಲೆಯ ತೀವ್ರತೆಯನ್ನು ನಿಯಂತ್ರಿಸಲು ರಾಜ್ಯದ ಎಲ್ಲ ರೀತಿಯ ಚಟುವಟಿಕೆಗಳನ್ನು ನಿರ್ಭಂದಿಸಿ ಲಾಕಡೌನ್ ಘೋಷಿಸಲಾಗಿದ್ದು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು ಮತ್ತು ಕಲಾತಂಡಗಳ ಪ್ರತಿ ಫಲಾನುಭವಿಗಳಿಗೆ ತಲಾ 3,000 ರೂ.ಗಳಂತೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಲಾಗಿದೆ.

ಕುರಿ ಹಿಂಡಿನ ಮೇಲೆ ಹರಿದ ಕಾರು : 8 ಕುರಿಗಳು ಸಾವು, 6 ಗಂಭೀರ

ನಿಡಗುಂದಿ: ರಸ್ತೆ ದಾಟುತ್ತಿದ್ದ ಕುರಿ ಹಿಂಡಿನ ಮೇಲೆ ಆಕಸ್ಮಿಕವಾಗಿ ಕಾರು ಹರಿದ ಪರಿಣಾಮ 8 ಕುರಿಗಳು…

ಕೊರೊನಾ ಕಂಟಕದಲ್ಲಿ ಗದಗ ಜಿಲ್ಲೆ: ಇಂದು 30 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 30 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 585 ಕ್ಕೆ…