ನವದೆಹಲಿ: ಲಾಕ್ ಡೌನ್ ನಿಂದಾಗಿ ಬಡವರ ತೊಂದರೆ ನೀಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದೆ.

ಕೊರೊನಾ ಸಂಕಷ್ಟ ಮತ್ತು ಲಾಕ್ ಡೌನ್ ನಿಂದ ತೊಂದರೆಗೆ ಸಿಲುಕಿದ ದೇಶದ ಬಡವರ ಕಷ್ಟ ನಿವಾರಣೆಗಾಗಿ ಕೇಂದ್ರ ಶೀಘ್ರದಲ್ಲೇ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದೆ ಎಂದು ಹೇಳಲಾಗುತ್ತಿದೆ.

ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಜನತೆಗೆ ಈಗಾಗಲೇ ಕೇಂದ್ರ ಸರ್ಕಾರವು ರೂ. 1.7 ಲಕ್ಷ ಕೋಟಿ ಮೊತ್ತದ ಪ್ಯಾಕೇಜ್ ಘೋಷಣೆ ಮಾಡಿತ್ತು . ಇದರ ಬೆನ್ನಲ್ಲೇ ಆರ್ಥಿಕತೆಯ ಸುಧಾರಣೆಗೆ ಸರ್ಕಾರ ಮುಂದಿನ ವಾರ ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಮತ್ತೊಂದು ಪ್ಯಾಕೇಜ್ ಘೋಷಣೆ ಸಂಬಂಧ ಕಳೆದ ಶನಿವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತುಕತೆ ನಡೆಸಿದ್ದು, ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲು ಪ್ರಧಾನಿ ಕಾರ್ಯಾಲಯ ಸಿದ್ಧತೆ ನಡೆಸುತ್ತಿದೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *

You May Also Like

ಮತ್ತೆ ಪ್ರವಾಹ.. ಉತ್ತರ ಕರ್ನಾಟಕಕ್ಕೆ ಮತ್ತೆ ಸಂಕಷ್ಟ

ಹಳೆ ಗಾಯ ಇನ್ನೂ ಮಾಸಿಲ್ಲ. ಈಗ ಮತ್ತೆ ನಾಡಿನ ಜನರಿಗೆ ಜಲಾಘಾತ ಒಕ್ಕರಿಸಿದೆ. ಜಲಸ್ಫೋಟಕ್ಕೆ ಉತ್ತರ ಕರ್ನಾಟಕದ ಹಲವು ಗ್ರಾಮಗಳ ಸಾವಿರಾರೂ ಎಕರೆ ಬೆಳೆ ಜೊತೆಗೆ ಅವರ ಬದುಕು ಮತ್ತೆ ನೀರು ಪಾಲಾಗಿದೆ. ರಕ್ಕಸ ಪ್ರವಾಹಕ್ಕೆ ಎಲ್ಲವೂ ಕಳೆದುಕೊಂಡು ಕಣ್ಣೀರು ಹಾಕುತ್ತಿರುವ ಜನರ ಕಥೆ ಕೇಳಿದಾಗ ಕರಳು ಕಿತ್ತು ಬರುತ್ತೆ. ಮನೆಯ ಬಾಗಿಲಿಗೆ ಮತ್ತೆ ನದಿಗಳು ಭೇಟಿ ನೀಡಿವೆ. ಬದುಕನ್ನೇ ನಲುಗಿಸಿಬಿಟ್ಟಿವೆ. ರಸ್ತೆ, ಹೊಲ ಗದ್ದೆ, ಮನೆ ಮಠಗಳು ನೀರು ಪಾಲಾಗುತ್ತಿವೆ.

9 ರಿಂದ 12ನೇ ತರಗತಿಗಳು ಸದ್ಯದಲ್ಲಿ ಆಗಲಿವೆ ಓಪನ್!

ಬೆಂಗಳೂರು : ಹೈಸ್ಕೂಲ್ ಹಾಗೂ ಪದವಿ ಪೂರ್ವ ಕಾಲೇಜು ತೆರೆಯುವ ಸಿದ್ಧತೆ ರಾಜ್ಯದಲ್ಲಿ ನಡೆದಿದೆ. ಮುಂದಿನ ತಿಂಗಳಿನಿಂದ ಒಂಭತ್ತರಿಂದ 12ನೇ ತರಗತಿಯವರೆಗೆ ತರಗತಿಗಳನ್ನು ಆರಂಭಿಸಲು ಸದ್ಯ ಖಾಸಗಿ ಶಾಲಾ ಆಡಳಿತ ಮಂಡಳಿಗಳು ಒಪ್ಪಿಗೆ ಸೂಚಿಸಿವೆ.

ಆದರ್ಶ ವಿದ್ಯಾಲಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ತಾಲೂಕಿನ ಇಟಗಿಯ ಸರಕಾರಿ ಆದರ್ಶ ವಿದ್ಯಾಲಯಕ್ಕೆ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‌ಲೈನ್‌ದಲ್ಲಿ ಅರ್ಜಿ ಸಲ್ಲಿಸುವ ದಿನಾಂಕವನ್ನು 17.03.2021 ರವರೆಗೆ ವಿಸ್ತರಿಸಲಾಗಿದೆ.

ಕೊರೊನಾ ವಾರಿಯರ್ಸ್ ಗೆ ಸಿಗದ ಸಂಬಳ!

ಕೊರೊನಾ ವಿರುದ್ಧ ಆರೋಗ್ಯ ಇಲಾಖೆ ಸಿಬ್ಬಂದಿಗಳು ಹೋರಾಡುತ್ತಿದ್ದಾರೆ. ಆದರೆ, ಇವರ ಸಂಬಳಕ್ಕೆ ಕತ್ತರಿ ಹಾಕಿರುವುದು ಬೆಳಕಿಗೆ ಬಂದಿದೆ.