ಬೆಳಗಾವಿ: ಕೊರೊನಾದಿಂದ ಗುಣಮುಖರಾಗಿ ಮನೆಗೆ ತೆರಳಿದ್ದ ವೃದ್ಧರೊಬ್ಬರಲ್ಲಿ ಮತ್ತೆ ಕೊರೊನಾ ವೈರಸ್ ಕಂಡು ಬಂದಿದೆ.

60 ವರ್ಷದ ವೃದ್ಧನಲ್ಲಿ ಮತ್ತೆ ಸೋಂಕು ಕಾಣಿಸಿಕೊಂಡಿದೆ. ಇದರಿಂದಾಗಿ ರಾಜ್ಯದಲ್ಲಿ ಕೊರೊನಾದ ಎರಡನೇ ಅಲೆ ಶುರುವಾಗಿದೆಯೇ ಎಂಬ ಪ್ರಶ್ನೆ ಮನೆ ಮಾಡುತ್ತಿದೆ. ಕುಡುಚಿ ಪಟ್ಟಣದ 60 ವರ್ಷದ ವೃದ್ಧ (ರೋಗಿ 298) 10 ದಿನಗಳ ಹಿಂದೆ ಗುಣಮುಖರಾಗಿ ಆಸ್ಪತ್ರೆಯಿಂದ ಹೊರ ಬಂದಿದ್ದರು. ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ ವೃದ್ಧನಿಗೆ ಸೋಂಕು ಕಾಣಿಸಿಕೊಂಡಿದೆ.

ಸದ್ಯ ಮತ್ತೆ ವೃದ್ಧನನ್ನು ಬೆಳಗಾವಿ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೃದ್ಧನಿಗೆ 45 ವರ್ಷದ ವ್ಯಕ್ತಿಯಿಂದ (ರೋಗಿ 245) ಸೋಂಕು ತಗುಲಿತ್ತು. ವೃದ್ಧ ಮತ್ತು ರೋಗಿ 245 ತಬ್ಲಿಘಿಗಳಾಗಿದ್ದು, ದೆಹಲಿಯಿಂದ ಹಿಂದಿರುಗಿದ್ದರು.

Leave a Reply

Your email address will not be published. Required fields are marked *

You May Also Like

ಅಭಿನವ ಅನ್ನದಾನ ಶ್ರೀ ಗಳ ದರ್ಶನ ಪಡೆದ ಸಿಎಂ ಬೊಮ್ಮಾಯಿ ಹಾಗೂ ಸಚಿವ ಸಿ,ಸಿ,ಪಾಟೀಲ

ಲಿಂಗೈಕ್ಯ ಶ್ರೀ ಗಳ ದರ್ಶನ ಪಡೆದ ಮುಖ್ಯಮಂತ್ರಿ ಮಾತನಾಡಿ ತ್ರಿವಿಧ ದಾಸೋಹಿಗಳು ಅನ್ನ ಅಕ್ಷರ ನೀಡುವ ಮೂಲಕ ಶೈಕ್ಷಣಿಕವಾಗಿ ಧಾರ್ಮಿಕವಾಗಿ ನಾಡಿಗೆ ಕೊಟ್ಟ ಕೊಡುಗೆ ತುಂಬಾ ದೊಡ್ಡದು ಎಂದು ಹೇಳಿದರು.

ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದಿಂದ ಖಂಡನೆ

ರಾಜ್ಯ ಸರ್ಕಾರ ಶೇ.30ರಷ್ಟು ಖಾಸಗಿ ಶಾಲಾ ಶುಲ್ಕ ಕಡಿತಗಿಳಿಸಿದ್ದನ್ನು ಖಂಡಿಸಿ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪದವಿಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಸದ್ಯಕ್ಕಿಲ್ಲ

ಅವಧಿ ಪೂರ್ಣಗೊಳ್ಳುವ ವಿಧಾನ ಪರಿಷತ್ ಸ್ಥಾನಗಳಿಗೆ ನಡೆಸಬೇಕಿದ್ದ ಚುನಾವಣೆಯನ್ನು ಸದ್ಯಕ್ಕೆ ನಡೆಸದಿರುವ ಬಗ್ಗೆ ಚುನಾವಣಾ ಆಯೋಗ ಆದೇಶಿಸಿದೆ.