ಬೆಂಗಳೂರು: ಲಾಕ್ ಡೌನ್ ಆರಂಭವಾಗುತ್ತಿದ್ದಂತೆ ಬೆಂಗಳೂರಿನಿಂದ ಕಾಲ್ಕಿತ್ತ ಜನರು ಸದ್ಯ ಮತ್ತೆ ನಗರದತ್ತ ಮುಖ ಮಾಡುತ್ತಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗುತ್ತಿದೆ.

ಜನರು ಹೆಚ್ಚಾಗಿ ಬರುತ್ತಿರುವ ಕಾರಣ ನೆಲಮಂಗಲ ಟೋಲ್ ಗೇಟ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಂಗಳೂರಿನಲ್ಲಿ ಲಾಕ್ಡೌಿನ್ ಸಡಿಲಿಕೆ ಹಿನ್ನೆಲೆಯಲ್ಲಿ ಕಾರ್ಖಾನೆಗಳು ಸೇರಿದಂತೆ ಖಾಸಗಿ ಸಂಸ್ಥೆ, ಕಂಪನಿಗಳು ಆರಂಭಗೊಂಡಿವೆ. ಹೀಗಾಗಿ ತಮ್ಮ ಉದ್ಯೋಗಿಗಳಿಗೆ ಕೆಲಸಕ್ಕೆ ಹಾಜರಾಗುವಂತೆ ಕಂಪನಿಗಳು ನೊಟೀಸ್ ನೀಡಿದ್ದರಿಂದಾಗಿ ಜನರು ತಮ್ಮ ಸ್ವಂತ ವಾಹನಗಳಲ್ಲಿ ಬೆಂಗಳೂರು ನಗರವನ್ನು ಪ್ರವೇಶಿಸುತ್ತಿದ್ದಾರೆ.

ಲಾಕ್ಡೌನ್ ಆದ ಬಳಿಕ ಇದೇ ಮೊದಲ ಬಾರಿಗೆ ನೆಲಮಂಗಲದ ನವಯುಗ ಟೋಲ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ. ಜನರು ಯಾವ ಭಾಗಗಳಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಮಾಹಿತಿ ಮಾತ್ರ ಲಭ್ಯವಾಗಿಲ್ಲ. ಕಂಟೈನ್ಮೆಂಂಟ್ ಝೋನ್ ನಲ್ಲಿಯ ಜನರು ಬೆಂಗಳೂರಿಗೆ ಬಂದರೆ ಹೇಗೆ ಎಂಬ ಆತಂಕ ಶುರುವಾಗಿದೆ. ಒಂದು ವೇಳೆ ಜನರಿಂದಾಗಿ ಮತ್ತೆ ಕೊರೊನಾ ಹೆಚ್ಚಾದರೆ ಹೇಗೆ ಎಂಬ ಆತಂಕವೂ ಮನೆ ಮಾಡುತ್ತಿದೆ.

Leave a Reply

Your email address will not be published. Required fields are marked *

You May Also Like

ಎನ್ ಆರ್ ಬಿ ಸಿ 5ಎ ಕೆನಾಲ್ ಯೋಜನೆ: ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡುವಂತೆ ಒತ್ತಾಯ

ರಾಯಚೂರು: ಎನ್ ಆರ್ ಬಿ ಸಿ 5 ಕೆನಾಲ್ ಯೋಜನೆಯ ಕ್ರಿಯಾ ಯೋಜನೆಯನ್ನು ಸಚಿವ ಸಂಪುಟದಲ್ಲಿ…

ಪ್ರಜಾ ಪ್ರಭುತ್ವ ಭದ್ರ ತಳಹದಿ ಡಾ ಬಿ ಆರ್ ಅಂಬೇಡ್ಕರವರು ರಚಿಸಿದ ಸಂವಿಧಾನ : ಸಂತೋಷ ಪಾಟೀಲ.

ಉತ್ತರ ಪ್ರಭ ಸುದ್ದಿರೋಣ : ತಾಲೂಕಾ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ತಾಲೂಕಾ ಆಡಳಿತದವತಿಯಿಂದ 73 ನೇ ಗಣರಾಜ್ಯೋತ್ಸವದ…

ಸರ್ಕಾರ ಗಂಭೀರ ನಿರ್ಧಾರ ತೆಗೆದುಕೊಳ್ಳದಿದ್ರೆ ಜನ ಆಸ್ಪತ್ರೆಗಳಲ್ಲಿ ಸಾವೀಗೀಡಾಗಬೇಕಾದೀತು : ಶಾಸಕ ಎಚ್.ಕೆ.ಪಾಟೀಲ್

ರಾಜ್ಯದಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ಆಕ್ಸಿಜನ್ ನ ಅಭಾವಿದೆ. ಆಕ್ಸಿಜನ್ ಕುರಿತಂತೆ ಗಂಭೀರವಾದ, ದೃಢವಾದ ತಕ್ಷಣದ ಹೆಜ್ಜೆಗಳನ್ನಿಡದೇ ಹೋದರೆ ಜನ ಆಸ್ಪತ್ರೆಗಳಲ್ಲಿ ಬಾರೀ ಸಂಖ್ಯೆಯಲ್ಲಿ ಸಾವೀಗೀಡಾಗಬೇಕಾದ ಪ್ರಸಂಗ ಬಂದೀತು ಎಂದು ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ್ ಸರ್ಕಾರವನ್ನು ಎಚ್ಚರಿಸಿದ್ದಾರೆ.

ಗಣೇಶೋತ್ಸವ ಆಚರಣೆ ಮಾರ್ಗಸೂಚಿಗಳು: ನಿಯಮ ಪಾಲನೆಗೆ ಡಿಸಿ ಸೂಚನೆ

ಗಣೇಶೋತ್ಸವ ಆಚರಿಸುವ ಸಂಬಂಧ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಗಳನ್ನು ನೀಡಿದ್ದು, ಅವುಗಳನ್ನು ಸಾರ್ವಜನಿಕರು ಪಾಲಿಸುವ ಮೂಲಕ ಸರಳ ಗಣೇಶೋತ್ಸವ ಆಚರಿಸುವಂತೆ ಜಿಲ್ಲಾಧಿಕಾರಿ ಎಂ ಸುಂದರೇಶ್ ಬಾಬು ಆದೇಶ ಹೊರಡಿಸಿದ್ದಾರೆ.