ತಿರುವನಂತಪುರಂ: ನಮ್ಮನ್ನು ಊರಿಗೆ ಕಳುಹಿಸಿ ಎಂದು ಸುಮಾರು 700 ವಲಸೆ ಕಾರ್ಮಿಕರು ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿರುವ ಘಟನೆ ಕೇರಳದಲ್ಲಿ ನಡೆದಿದೆ.

ಕೇರಳದ ಅಕ್ಕಲಂ ಬಳಿಯ ಒರುವತಿಲ್ಕೋಟದಲ್ಲಿ ಭಾನುವಾರ ತಡರಾತ್ರಿ ಕಾರ್ಮಿಕರು ಸೇರಿಕೊಂಡು ನಮ್ಮನ್ನು ಊರಿಗೆ ಕಳುಹಿಸಲು ವ್ಯವಸ್ಥೆ ಮಾಡಿ ಎಂದು ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನೆ ನಿಲ್ಲಿಸುವಂತೆ ಪೊಲೀಸರು ಮನವಿ ಮಾಡಿದ್ದರು. ಇದರಿಂದ ರೊಚ್ಚಿಗೆದ್ದ ಕಾರ್ಮಿಕರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ನಮ್ಮ ಬಳಿ ಊಟ ತಿನ್ನಲು ದುಡ್ಡು ಇಲ್ಲ, ಮಾಡಲು ಕೆಲಸವಿಲ್ಲ ನಮ್ಮನ್ನು ಊರಿಗೆ ಕಳುಹಿಸಿಕೊಡಿ ಎಂದು ಒತ್ತಾಯ ಮಾಡಿದ್ದಾರೆ. ಮಾ. 24ರಿಂದ ಕೊರೊನಾ ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್ ಡೌನ್ ಹೇರಿದ್ದರಿಂದಾಗಿ ಇವರಿಗೆ ತಿನ್ನಲೂ ಏನು ಇಲ್ಲದಂತಾಗಿದೆ. ಗಲಾಟೆ ಹೆಚ್ಚಾಗುತ್ತಿದ್ದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜಮಾವಣೆಗೊಂಡ ಪೊಲೀಸರು ಊರಿಗೆ ಕಳುಹಿಸಿಕೊಡುವ ಭರವಸೆ ನೀಡಿದ ಮೇಲೆ ಪ್ರತಿಭಟನೆಯನ್ನು ಕಾರ್ಮಿಕರು ನಿಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು ಎಲ್ಲೆಲ್ಲಿ ಕೊರೊನಾ ನಂಟು!

ಗದಗ: ಬಳ್ಳಾರಿ ಜಿಲ್ಲೆಯ ಹಡಗಲಿ ತಾಲ್ಲೂಕಿನ ಕೋಲಾರಗಟ್ಟಿ ಗ್ರಾಮದ ನಿವಾಸಿ 3 ವರ್ಷದ ಹೆಣ್ಣು ಮಗು…

ಗೋರಸೇನಾ ರಾಜ್ಯಾಧ್ಯಕ್ಷ ರವಿಕಾಂತ ಒತ್ತಾಯ: ಲಂಬಾಣಿ ಸಮಾಜದ ಅಪ್ರಾಪ್ತ ಬಾಲಕಿ ಹತ್ಯೆಗೈದ ಆರೋಪಿಗಳನ್ನು ಗಲ್ಲಿಗೇರಿಸಲು ಆಗ್ರಹ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹುರಗಲವಾಡಿ ಗ್ರಾಮದಲ್ಲಿ ಗುಳೆಹೋದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಘಟನೆ ಅತ್ಯಂತ ಖಂಡನಾರ್ಹ. ಲಂಬಾಣಿ ಸಮಾಜದವರು ಬಹಳಷ್ಟು ಸ್ವಾಭಿಮಾನಿಗಳು. ಆದರೆ ತುತ್ತಿನ ಚೀಲ ತುಂಬಿಕೊಳ್ಳಲು ಗುಳೆಹೋಗುವುದು ನಮಗೆ ಅನಿವಾರ್ಯವಾಗಿದೆ. ಆದರೆ ಗುಳೆಹೋದಂತಹ ಸಂದರ್ಭದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ದುಷ್ಟರನ್ನು ಗಲ್ಲಿಗೇರಿಸಬೇಕು ಎಂದು ಗೋರಸೇನಾ ರಾಜ್ಯಾಧ್ಯಕ್ಷ ರವಿಕಾಂತ ಅಂಗಡಿ ಆಗ್ರಹಿಸಿದರು.

ತಮ್ಮ ಊರುಗಳತ್ತ ಮುಖ ಮಾಡಿದ ಬೆಂಗಳೂರಿಗರು – ಎಲ್ಲೆಡೆ ಟ್ರಾಫಿಕ್ ಜಾಮ್!

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸ್ಫೋಟವಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ನಾಳೆ ಕರ್ಫ್ಯೂ…