ಬೀಜಿಂಗ್: ಕೊರೊನಾಗೆ ಜನ್ಮ ಸಿಕ್ಕಿದ್ದ ವುಹಾನ್ ನಗರದಲ್ಲಿ ಮತ್ತೆ ಕೊರೊನಾ ಕಾಣಿಸಿಕೊಂಡಿದೆ. ಇದರಿಂದಾಗಿ ಮತ್ತೆ ವಿಶ್ವದಲ್ಲಿ ಆತಂಕ ಮನೆ ಮಾಡಿದೆ.

ನಗರದ ಒಂದೇ ಕಾಂಪೌಂಡಿನಲ್ಲಿ ವಾಸಿಸುತ್ತಿದ್ದ ಐವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಸದ್ಯ ಆ ಜಾಗವನ್ನು ಕ್ಲಸ್ಟರ್ ಎಂದು ಗುರುತಿಸಲಾಗಿದೆ. ಒಂದು ತಿಂಗಳ ಹಿಂದೆ ವುಹಾನ್ ನಗರದಲ್ಲಿ ಲಾಕೌಡೌನ್ ತೆರೆಯಲಾಗಿತ್ತು. ಈಗ ಮತ್ತೆ 5 ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕ್ಲಸ್ಟರ್ ರಚಿಸಲಾಗಿದೆ.

ಈ ಹಿಂದೆ ಏಪ್ರಿಲ್ 3 ರಂದು ವುಹಾನ್ ನಗರದಲ್ಲಿ ಕೊನೆಯದಾಗಿ ಸೋಂಕು ಕಾಣಿಸಿಕೊಂಡಿತ್ತು. ಆದಾದ ಬಳಿಕ ಮತ್ತೆ ಸದ್ಯ ಐವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಜಾಗವನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

ಶುಕ್ರವಾರ ಚೀನಾ ಸರ್ಕಾರ ಸಿನಿಮಾ ಮಂದಿರ, ಮ್ಯೂಸಿಯಂಗಳನ್ನು ತೆರೆಯಲು ಅನುಮತಿ ನೀಡಲಾಗುವುದು ಎಂದು ಹೇಳಿತ್ತು. ಈ ಎಲ್ಲ ಪ್ರದೇಶಗಳಲ್ಲಿ ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಕ್ವಾರಂಟೈನ್ ಗೆ ಒಳಪಡಿಸಲು ಸೋಂಕಿತ ಮಹಿಳೆ ಸಂಪರ್ಕಕ್ಕೆ ಸಿಗುತ್ತಿಲ್ಲ: ಡಿಸಿ ಸುಂದರೇಶ್ ಬಾಬು

ಮಹಿಳೆ ಕ್ವಾರಂಟೈನ್ ನಿಂದ ತಪ್ಪಿಸಿಕೊಂಡಿದ್ದಾಳೆ ಎಂದು ಏಕಾಏಕಿ ಹೇಳಬಾರದು. ಅವರನ್ನು ಕ್ವಾರಂಟೈನ್ ಗೆ ಒಳಪಡಿಸಲೆಂದೇ ಸಂಪರ್ಕಿಸಿದಾಗ ಆ ವಿಳಾಸದಲ್ಲಿ ಅವರಿಲ್ಲ. ಸ್ವಲ್ಪ ಕಾಯುವ ತಾಳ್ಮೆ ಇರಲಿ.

ಪಾಕ್, ಅಪ್ಘಾನಿಸ್ತಾನ ರಾಷ್ಟ್ರಗಳ ಮುಂದೆ ಕೊರೊನಾ ವಿಷಯದಲ್ಲಿ ನಾವು ಸೋತಿದ್ದೇವೆ – ರಾಹುಲ್

ನವದೆಹಲಿ : ಕೊರೊನಾ ವಿಷಯದಲ್ಲಿ ನಾವು ಸೋಲು ಕಂಡಿದ್ದೇವೆ. ನಮ್ಮ ಶತೃ ರಾಷ್ಟ್ರ ಪಾಕ್ ವಿರುದ್ಧ ನಮಗೆ ಮುಖಭಂಗವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಭಾರಿ ಮಳೆಗೆ ಹಾರಿ ಹೋದ ಮೇಲ್ಛಾವಣಿ

ಹಾವೇರಿ: ಜಿಲ್ಲೆಯಾದ್ಯಂತ ಬಿರುಗಾಳಿ ಸಮೇತ ಮಳೆ ಹಿನ್ನೆಲೆ ಬಿರುಗಾಳಿ ಹೊಡೆತಕ್ಕೆ ಸರ್ಕಾರಿ ಶಾಲೆಯ ಚಾವಣಿ ಹಾರಿ…