ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಒಳಗಾದವರ ಪೈಕಿ ಪುರುಷರ ಸಂಖ್ಯೆಯೇ ಹೆಚ್ಚಾಗಿದೆ. ರಾಜ್ಯದಲ್ಲಿ ಇಲ್ಲಿಯವರೆಗೂ 858 ಜನರಿಗೆ ಸೋಂಕು ತಗುಲಿದೆ. ಈ ಪೈಕಿ ಪುರುಷರೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿಗೆ ಒಳಗಾಗಿದ್ದಾರೆ. ಹೆಣ್ಮಕ್ಕಳೇ ಸ್ಟ್ರಾಂಗ್ ಗುರು ಎಂಬುವುದನ್ನು ಮಹಿಳೆಯರು ಮತ್ತೊಮ್ಮೆ ಸಾರಿದ್ದಾರೆ.

ಸೋಂಕಿತರಲ್ಲಿನ 858 ಜನರ ಪೈಕಿ 550 ಜನ ಪುರುಷರು ಹಾಗೂ 308 ಜನ ಮಹಿಳೆಯರು ಇದ್ದಾರೆ. ಈ ಮೂಲಕ ಕೊರೊನಾ ಮಹಾಮಾರಿಗೆ ಅತೀ ಹೆಚ್ಚು ಪರುಷರೇ ತುತ್ತಾಗಿದ್ದಾರೆ. ಮನೆಯಲ್ಲಿಯೇ ಇರುವ ಮಹಿಳೆಯರು ಸೇಫ್ ಆಗಿದ್ದಾರೆ.

ಇಂದು ರಾಜ್ಯದಲ್ಲಿ 10 ಜನರಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆ ಕಂಡಿದೆ. ಬೆಳಗ್ಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ, ದಾವಣಗೆರೆ 3, ಬೀದರ್ 2, ಬಾಗಲಕೋಟೆ 2, ಕಲಬುರಗಿ 1, ಹಾವೇರಿ 1 ಮತ್ತು ವಿಜಯಪುರದಲ್ಲಿ 1 ಹೊಸ ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿದೆ.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರ ಪೊಲೀಸರ ಕಾರ್ಯಾಚರಣೆ: ಕುರಿ, ಮೇಕೆ ಕಳ್ಳರು ಅಂದರ್..!

ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕು ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಮೇಕೆ ಹಾಗೂ ಕುರಿ ಕಳ್ಳತನ ಪ್ರಕರಣಗಳು ಕಂಡು ಬಂದಿದ್ದವು. ಘಟನೆ ಗ್ರಾಮೀಣ ಭಾಗದ ಜನರ ನಿದ್ದೆಗೆಡಿಸಿತ್ತು. ಆದರೆ ಕೊನೆಗೂ ಕಳ್ಳರನ್ನು ಸೆರೆ ಹಿಡಿಯುವಲ್ಲಿ ಲಕ್ಷ್ಮೇಶ್ವರ ಪೊಲೀಸರು ಯಶಸ್ವಿಯಾಗಿದ್ದಾರೆ.

ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕು: ಪರಬ

ಕಾಡು ಬೆಳೆಸಿ ನಾಡು ಉಳಿಸಿ ಎಂಬ ವಾಖ್ಯೆದಂತೆ ಪ್ರತಿಯೊಬ್ಬರು ಗಿಡಗಳನ್ನು ಬೆಳೆಸಿ ಉತ್ತಮವಾದ ಆರೋಗ್ಯವನ್ನು ಪಡೆದುಕೊಳ್ಳುವುದರ ಜೊತೆಗೆ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಪಪಂ ಅಧ್ಯಕ್ಷ ಪರಮೇಶ ಪರಬ ಹೇಳಿದರು.

ಗಜೇಂದ್ರಗಡ: ರೋಜಗಾರ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ

ಸಮೀಪದ ಲಕ್ಕಲಕಟ್ಟಿ ಗ್ರಾಮ ಪಂಚಾಯತಿಯ ಲಕ್ಕಲಕಟ್ಟಿ ತಾಂಡಾಕ್ಕೆ ತಾಂಡಾ ರೋಜಗಾರ ಮಿತ್ರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಶನಿವಾರವೂ ಶಿಕ್ಷಣ ಇಲಾಖೆಗೆ ರಜೆ

ಎರಡು ಮತ್ತು ನಾಲ್ಕನೇ ಶನಿವಾರ ಮಾತ್ರ ಶಿಕ್ಷಣ ಇಲಾಖೆ ನೌಕರರಿಗೆ ರಜೆ ಘೋಶಿಸಲಾಗಿತ್ತು. ಆದರೆ ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆ ತಿಂಗಳ ಎಲ್ಲ ಶನಿವಾರವೂ ರಜೆ ಘೋಷಣೆ ಮಾಡಿದೆ.