ಚೆನ್ನೈ: ನಟಿ ನಯನತಾರಾ ಲವ್ ಸ್ಟೋರಿಗಳ ಮೂಲಕವೇ ಹೆಚ್ಚು ಸುದ್ದಿಯಾದವರು. ತಮ್ಮ ಹಿಂದಿನ ಲವ್ ಸ್ಟೋರಿಗಳನ್ನು ಮರೆತು ಇದೀಗ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ಲಿವಿಂಗ್ ರಿಲೇಷನ್ ಶಿಪ್ ನಲ್ಲಿದ್ದಾರೆ. ಈ ಸಂದರ್ಭದಲ್ಲಿ ಮತ್ತೊಂದು ಶಾಕಿಂಗ್ ನ್ಯೂಸ್ ನೀಡಿದ್ದಾರೆ.

ನಯನತಾರಾ ತಮ್ಮ ವಿಭಿನ್ನ ಹಾಗೂ ಹಿಟ್ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ ನಟಿ. ಇವರು ವಿವಾದಗಳಿಂದಲೂ ದೂರವಿಲ್ಲ. ತಮ್ಮ ವೈಯಕ್ತಿಕ ಜೀವನದ ಕುರಿತು ಸಾಕಷ್ಟು ಸುದ್ದಿಯಾಗಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಸೂಪರ್ ಸಿನಿಮಾದಲ್ಲಿ ನಟಿಸುವ ಮೂಲಕ ಕನ್ನಡದಲ್ಲಿಯೂ ಜನಪ್ರಿಯತೆ ಗಳಿಸಿದ್ದಾರೆ. ದಕ್ಷಿಣ ಭಾರತದ ಜನಪ್ರಿಯ ನಟಿಯರಲ್ಲಿ ಒಬ್ಬರು, ತೆಲುಗು, ತಮಿಳು, ಮಲಯಾಳಂ ಸೇರಿದಂತೆ ವಿವಿಧ ಭಾಷೆಗಳಲ್ಲಿ ನಟಿಸಿದ್ದಾರೆ.

ಅಲ್ಲದೆ ಸೌತ್ ಸಿನಿರಂಗದಲ್ಲಿ ಅಧಿಕ ಸಂಭಾವನೆ ಪಡೆಯುವ ನಟಿ ಎಂದೂ ಹೆಸರು ಮಾಡಿಕೊಂಡಿದ್ದಾರೆ. ಇತ್ತೀಚೆಗೆ ನಯನತಾರಾ ವೈಯುಕ್ತಿಕ ಜೀವನದ ಬಗ್ಗೆ ಹೆಚ್ಚು ಚರ್ಚೆಯಾಗಿತ್ತು. ತಮ್ಮ ಹಿಂದಿನ ಪ್ರೀತಿ ಪ್ರೇಮದ ಬಗ್ಗೆ ಮಾತನಾಡಿ ಸುದ್ದಿಯಾಗಿದ್ದರು. ಡ್ಯಾನ್ಸರ್ ಪ್ರಭುದೇವ, ನಟ ಸಿಂಬು ಜೊತೆಗಿನ ಪ್ರೇಮ್ ಕಹಾನಿ ಬಗ್ಗೆ ನಯನತಾರಾ ಬಹಿರಂಗ ಹೇಳಿಕೆ ನೀಡಿದ್ದರು. ಇದರ ಮಧ್ಯೆ ಸದ್ಯ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಕುರಿತು ಬ್ರೇಕಿಂಗ್ ನ್ಯೂಸ್ ಒಂದು ಹೊರ ಬಿದ್ದಿದೆ.

ಶೀಘ್ರದಲ್ಲಿಯೇ ಈ ಜೋಡಿ ವಿವಾಹ ಸಹ ಆಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಹೀಗಾಗಿಯೇ ತಮ್ಮ ಸಂಬಂಧವನ್ನು ಬಹಿರಂಗವಾಗಿ ಘೋಷಿಸಿದ್ದಾರೆ. ಅಲ್ಲದೆ ಇಬ್ಬರೂ ಜೊತೆಯಾಗಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯ ಸರ್ಕಾರಿ ನೌಕರರ ಡಿಎ ಗೆ ಕತ್ತರಿ..!

ಲಾಕ್‌ಡೌನ್ ಪರಿಣಾಮ ಸರ್ಕಾರದ ಬೊಕ್ಕಸಕ್ಕೆ ಭಾರಿ ಪೆಟ್ಟು ನೀಡಿದೆ. ಇದರಿಂದಾಗಿ ಸರ್ಕಾರ ಕೂಡ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಈ ಕಾರಣದಿಂದ ರಾಜ್ಯ ಸರ್ಕಾರ ನೌಕರರ ಡಿಎಗೆ ಕತ್ತರಿ ಹಾಕಲಿದೆ..?

ಎಮ್.ಎಲ್.ಎ ಸಾಹೇಬರೆ ಮಾಸ್ಕ್ ಹಾಕ್ಕೊಳ್ಳಿ ಪ್ಲೀಸ್..!

ಶಾಸಕರಾಗಿ ಜನರ ಆರೋಗ್ಯದ ಬಗ್ಗೆ ಇಷ್ಟೊಂದು ಕಾಳಜಿ ವಹಿಸಿದರಲ್ಲ ಎನ್ನುವುದು ನಿಜವಾಗಿಯೂ ಪ್ರಶಂಸನೀಯವೇ. ಆದರೆ ಯಾವುದನ್ನು ಪಾಲನೆ ಮಾಡುವ ಕುರಿತು ಶಾಸಕರು ಮಾತನಾಡುತ್ತಿದ್ದರೋ ಅದನ್ನೇ ಶಾಸಕರು ಮರೆತಿದ್ದರು.

ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್ ನಿಧನ

ಮುಂಬೈ: ಬಾಲಿವುಡ್ ನ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್ ನಿಧನ ಹೊಂದಿದ್ದಾರೆ. ಕಿಡ್ನಿ ವೈಫಲ್ಯದಿಂದ…