ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ನ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಂಟೈನ್ ಮೆಂಟ್ ತಂತ್ರ ಬಲಪಡಿಸುವ ಕುರಿತು ಮತ್ತು ಆರ್ಥಿಕ ಚಟುವಚಿಕೆ ಆರಂಭಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಎಲ್ಲ ರಾಜ್ಯಗಳ ಸಿಎಂಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಚರ್ಚಿಸಿದರು.

ದೇಶಾದ್ಯಂತ 54 ದಿನಗಳ ಲಾಕ್ ಡೌನ್ ಮೇ. 17ಕ್ಕೆ ಅಂತ್ಯವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಐದನೇ ಬಾರಿ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಚರ್ಚಿಸಿದರು. ಮೇ. 4 ರ ನಂತರ ದೇಶದಲ್ಲಿ ದೊಡ್ಡ ಪ್ರಮಾಣದ ವಲಸೆ ಕಾರ್ಮಿಕರು ನಗರಗಳಿಂದ ಗ್ರಾಮೀಣ ಪ್ರದೇಶಕ್ಕೆ ಹೋಗಿದ್ದು, ವಲಸೆ ಕಾರ್ಮಿಕರಿಂದ ಉಂಟಾದ ಸಮಸ್ಯೆಗಳ ಕುರಿತು ಚರ್ಚಿಸಿದರು.

ಕೊರೊನಾ ವೈರಸ್ ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ಯಾವುದೇ ಕಾರಣಕ್ಕೆ ಹಿಂದೆ ಸರಿಯಬಾರದು. ಇಲ್ಲಿಯವರೆಗೂ ತೆಗೆದುಕೊಂಡಿರುವ ಕಠಿಣ ಕ್ರಮಗಳನ್ನೇ ಮುಂದುವರೆಸಬೇಕು ಎಂದು ಪ್ರಧಾನಿ ಮೋದಿ ಎಲ್ಲ ರಾಜ್ಯಗಳ ಸಿಎಂಗಳಿಗೆ ಸಲಹೆ ನೀಡಿದ್ದಾರೆ.

ದೇಶದಲ್ಲಿ ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸುವ ಕುರಿತು ಪ್ರಮುಖವಾಗಿ ಸಭೆಯಲ್ಲಿ ಚರ್ಚಿಸಲಾಯಿತು. ಕೊರೋನಾ ವಿರುದ್ಧದ ಹೋರಾಟದಲ್ಲಿ ಭಾರತ ಯಶಸ್ಸು ಕಂಡಿದ್ದು, ಸಾಮಾಜಿಕ ಅಂತರದಂತಹ ಕ್ರಮಗಳನ್ನು ತೆಗೆದುಕೊಳ್ಳದಿದ್ದಲ್ಲಿ ಮತ್ತಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಪ್ರಧಾನಿ ಎಚ್ಚರಿಸಿದ್ದಾರೆ.

ಸಭೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You May Also Like

ಗದಗನಲ್ಲಿ ಮತ್ತೆ ಮೂವರಿಗೆ ಕೊರೋನಾ ಸೋಂಕು ದೃಢ

ಗದಗ: ಈಗಾಗಲೇ ಗದಗ ಜಿಲ್ಲೆಯಲ್ಲಿ ಕೊರೋನಾ ಸೋಂಕು ದೃಢಪಟ್ಟ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದರು. ಇದರಿಂದ…

ಜಗತ್ತಿನಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 2.33 ಲಕ್ಷ

ಲಂಡನ್ : ಜಗತ್ತಿನಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದೆ. ಈ ಮಹಾಮಾರಿಗೆ 2.33 ಲಕ್ಷ ಜನ ಬಲಿಯಾಗಿದ್ದಾರೆ.…

ವಾಟ್ಸಾಪ್ ಬಳಕೆದಾರರಿಗೆ ಇನ್ಮೂಂದೆ ಹೆಚ್ಚಿನ ಬದ್ರತೆ

ವಾಟ್ಸ್ ಆಪ್ ವೆಬ್ ಮತ್ತು ಡೆಸ್ಕ್ ಟಾಪ್ ಹೊಸ ಮತ್ತು ಉತ್ತಮ ಭದ್ರತಾ ವೈಶಿಷ್ಟö್ಯಗಳೊಂದಿಗೆ ಅಪ್ ಡೇಟ್ ಆಗಲಿದೆ. ಹೊಸ ಅಪ್ ಡೇಟ್ ಪ್ರಕಾರ, ಬಳಕೆದಾರರು ಲಾಗಿನ್ ಆಗುವ ಮುನ್ನ ಡೆಸ್ಕ್ ಟಾಪ್ ಆಪ್‌ನಲ್ಲಿ ಫಿಂಗರ್ ಪ್ರಿಂಟ್ ಅಥವಾ ಫೇಸ್ ಐಡಿಯನ್ನು ದೃಢೀಕರಿಸಬೇಕಾಗುತ್ತದೆ. ಹೊಸದಾಗಿ ಪರಿಚಯಿಸಲಾದ ಈ ವೈಶಿಷ್ಟö್ಯವು ಖಾತೆಗೆ ಹೆಚ್ಚುವರಿ ರಕ್ಷಣೆ ಒದಗಿಸುತ್ತದೆ.

ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಾರ್ಮಿಕರು!

ನಮ್ಮನ್ನು ಊರಿಗೆ ಕಳುಹಿಸಿ ಎಂದು ಸುಮಾರು 700 ವಲಸೆ ಕಾರ್ಮಿಕರು ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿರುವ ಘಟನೆ ಕೇರಳದಲ್ಲಿ ನಡೆದಿದೆ.