ಬೆಂಗಳೂರು: ಪ್ರಧಾನಿ ಮೋದಿ ಅವರು ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಇಂದು ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಕೂಡ ಭಾಗವಹಿಸಿ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ.

ಗ್ರೀನ್ ಝೋನ್‌ಗಳಲ್ಲಿಯೂ ಕೊರೊನಾ ಪ್ರಕರಣಗಳು ಕಂಡು ಬರುತ್ತಿದ್ದು, ಮೂರನೇ ಹಂತದ ಲಾಕ್‌ಡೌನ್‌ನಲ್ಲಿ ವಿಧಿಸಲಾಗಿರುವ ನಿಯಮಗಳೇ ಮೇ 17ರ ನಂತರವೂ ಮುಂದುವರಿಯಲಿ ಎಂದು ಸಿಎಂ ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಈಗಲೇ ಲಾಕ್‌ಡೌನ್ ಸಡಿಲಿಕೆ ಮಾಡುವುದು ಬೇಡ. ರಾಜ್ಯಕ್ಕೆ ಮತ್ತಷ್ಟು ವಿನಾಯಿತಿ ಅಗತ್ಯ ಇಲ್ಲ. ನಿರ್ಬಂಧಗಳು ಮುಂದುವರಿಯಲಿ. ಸದ್ಯಕ್ಕೆ ಬೆಂಗಳೂರಿಗೆ ವಿಮಾನ ಸೇವೆ ಬೇಡ. ಮಾಲ್, ಸಿನಿಮಾ ಹಾಲ್, ಹೋಟೆಲ್‌ಗಳನ್ನು ಇನ್ನೂ ಕೆಲವು ದಿನ ಬಂದ್ ಮಾಡಬೇಕು. ಪ್ರತಿಯೊಬ್ಬರನ್ನು ಚಿಕಿತ್ಸೆಗೆ ಒಳಪಡಿಸಲು ಖಾಸಗಿ ಆಸ್ಪತ್ರೆಗಳನ್ನು ತೆರೆಯಬೇಕು. ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. 60 ವರ್ಷ ಮೇಲ್ಪಟ್ಟವರು ಮತ್ತು 10 ವರ್ಷ ಕೆಳಗಿನ ವಯಸ್ಸಿನವರು ಮನೆಯಿಂದ ಹೊರಬರಬಾರದು ಎಂದು ಪ್ರಧಾನಿಗಳೊಂದಿಗಿನ ವಿಡಿಯೋ ಸಂವಾದದಲ್ಲಿ ಯಡಿಯೂರಪ್ಪ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಜಿಲ್ಲಾವಾರು ಕೆಂಪು, ಕಿತ್ತಳೆ ಮತ್ತು ಹಸಿರು ವಲಯಗಳನ್ನು ಗುರುತಿಸಬಾರದು. ಕಂಟೈನ್ಮೆಂಟ್ ವಲಯಗಳನ್ನು ಮಾತ್ರ ಕಟ್ಟುನಿಟ್ಟಾಗಿ ನಿರ್ಬಂಧಿಸಬೇಕು. ಕ್ಲಸ್ಟರುಗಳ ಸುತ್ತಲಿನ 50 ರಿಂದ 100 ಮೀಟರ್ ಪ್ರದೇಶವನ್ನು ಕಂಟೈನ್ಮೆಂಟ್ ವಲಯ ಎಂದು ಘೋಷಿಸಬೇಕು. ಇತರ ಸ್ಥಳಗಳಲ್ಲಿ ವಾಣಿಜ್ಯ ಚಟುವಟಿಕೆಗಳು ಹಾಗೂ ಸಾರ್ವಜನಿಕ ಸಾರಿಗೆಗೆ ಅನುಮತಿ ನೀಡಬೇಕು. ಇದರಿಂದ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ದೊರತಂತಾಗುತ್ತದೆ. ಅಲ್ಲದೇ ರಾಜ್ಯಗಳು ಹಣಕಾಸು ಬಿಕ್ಕಟ್ಟಿನಿಂದ ಹೊರಬರಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದ್ದಾರೆ.

ರೋಗಲಕ್ಷಣಗಳಿಲ್ಲದ ಅಥವಾ ತೀವ್ರವಲ್ಲದ ಪ್ರಕರಣಗಳಲ್ಲಿ ಮನೆಯಲ್ಲಿಯೇ ಕಟ್ಟು ನಿಟ್ಟಿನ ಐಸೋಲೇಷನ್ನಲ್ಲಿ ಇರುವ ಮೂಲಕ ಹಾಗೂ ಟೆಲಿ ಮೆಡಿಸಿನ್ ಮೂಲಕ ಚಿಕಿತ್ಸೆ ಪಡೆಯಬಹುದು ಎಂದು ಪ್ರಧಾನಿ ಮೋದಿ ಅವರಿಗೆ ಸಿಎಂ ಯಡಿಯೂರಪ್ಪ ಅವರು ಸಾಕಷ್ಟು ಸಲಹೆಗಳನ್ನು ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೋರಿಯಾದಿಂದ ಕೋಲಾರಕ್ಕೂ ಬಂದಿವೆ ಸೋಂಕು ಟೆಸ್ಟ್ ಕಿಟ್ ಗಳು

ಕೊರೋನಾ ಸೋಂಕು ತುರ್ತಾಗಿ ಪತ್ತೆ ಹಚ್ಚಲು ಕೋರಿಯಾದಿಂದ ಕೋಲಾರ ಜಿಲ್ಲೆಯ ಆರೋಗ್ಯ ಇಲಾಖೆಗೆ ರ್ಯಾಪಿಡ್ ಆಂಟಿ ಬಾಡಿ ಟೆಸ್ಟಿಂಗ್ ಕಿಟ್ ಗಳು ಬಂದಿವೆ. ಈ ಮೂಲಕ ಇಪ್ಪತ್ತು ನಿಮಿಷದೊಳಗಾಗಿ ಕೊರೋನಾ ಸೇರಿ ಯಾವುದೇ ಸೋಂಕಿದ್ದರೂ ಪತ್ತೆ ಹಚ್ಚಬಹುದಾಗಿದೆ. ಇದು ದೇಶದಲ್ಲಿ ಮೊದಲ ಪ್ರಯತ್ನ ಎಂದು ಹೇಳಲಾಗುತ್ತಿದೆ.

ಚಾಮುಂಡೇಶ್ವರಿ ತಾಯಿಗೆ ಹರಕೆ ತೀರಿಸಿದ ಜಿಲ್ಲಾಧಿಕಾರಿ ರೋಹಿಣಿ!

ಮೈಸೂರು : ತಾಯಿ ಚಾಮುಂಡೇಶ್ವರಿಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಹರಿಕೆ ತೀರಿಸಿದ್ದಾರೆ.

ಕ್ವಾರಂಟೈನಲ್ಲಿ ಮೊಬೈಲ್ ಸ್ವಿಚ್ ಆಫ್: ಮುಂಡರಗಿಯಲ್ಲಿ 2 ವರ್ಷದ ಮಗುವಿಗೆ ನೋಟಿಸ್!

ಹೋಂ ಕ್ವಾರಂಟೈನ್ನಲ್ಲಿರುವಾಗ ಮೊಬೈಲ್ ಸ್ವಿಚ್ ಆಫ್ ಮಾಡಿದ್ದು ಶಿಕ್ಷಾರ್ಹ. ಮತ್ತೆ ಹೀಗೆ ಮಾಡಬೇಡಿ ಎಂಬ ತಹಸೀಲ್ದಾರ್ ಸೂಚನೆ ಸರಿಯಾಗಿಯೇ ಇದೆ. ಆದರೆ ಅದನ್ನು 2 ವರ್ಷದ ಮಗುವಿನ ಹೆಸರಿಗೆ ಕಳುಹಿಸಿದ್ದಾರೆ.

ಊರಿಗೊಂದು ಸ್ಮಶಾನಕ್ಕೆ ಆದ್ಯತೆ: ಸಚಿವ ಆರ್.ಅಶೋಕ್

ಗದಗ: ರಾಜ್ಯ ಸರ್ಕಾರ ಊರಿಗೊಂದು ಸ್ಮಶಾನಕ್ಕೆ ಆದ್ಯತೆ ನೀಡಿದ್ದು, ಈ ಬಗ್ಗೆ ಅನುದಾನದ ವ್ಯವಸ್ಥೆ ಕೂಡ…