ಮುಂಬಯಿ: ಕೊರೊನಾ ಲಾಕ್ ಡೌನ್ ನಿಂದಾಗಿ ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕರ್ನಾಟಕದ ನೂರಾರು ವಲಸೆ ಕಾರ್ಮಿಕರಿಗೆ ಅವರ ಊರುಗಳಿಗೆ ತಲುಪಿಸಲು ಬಾಲಿವುಡ್ ನಟ ಸೋನು ಸೂದ್ ಮುಖ್ಯ ಪಾತ್ರ ವಹಿಸಿದ್ದರು.

ತೆರಳಲು ಬಾಲಿವುಡ್ ನಟ ಸೋನು ಸೂದ್ ಬಸ್ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆದಿದ್ದಾರೆ. ಕಲಬುರಗಿಯಿಂದ ಮಹಾರಾಷ್ಟ್ರದ ಥಾಣೆಗೆ ಆಗಮಿಸಿದ್ದ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸುವ ನಿಟ್ಟಿನಲ್ಲಿ ಸೋನು ಸೂದ್ ಅವರು ಕರ್ನಾಟಕ ಮತ್ತು ಮಹಾರಾಷ್ಟ್ರ ಸರ್ಕಾರಗಳ ಜೊತೆಗೆ ಚರ್ಚಿಸಿ ಅನುಮತಿ ಪಡೆದಿದ್ದರು. ಈ ಮೂಲಕ ತಮ್ಮ ಸ್ವಂತ ಖರ್ಸಿನಲ್ಲಿ ಒಟ್ಟು ಹತ್ತು ಬಸ್ಗಗಳ ವ್ಯವಸ್ಥೆ ಮಾಡಿ ಸೋಮವಾರ ಥಾಣೆಯಿಂದ ಕಲಬುರಗಿಗೆ ತಾವೇ ಮುಂದೆ ನಿಂತು ಕಳುಹಿಸಿ ಕೊಟ್ಟಿದ್ದಾರೆ. ಅಷ್ಟೇ ಅಲ್ಲದೆ ವಲಸೆ ಕಾರ್ಮಿಕರಿಗೆ ಊಟದ ಕಿಟ್ಗಬಳನ್ನು ನೀಡಿ ಕನ್ನಡಿಗರ ಬಗ್ಗೆ ಕಾಳಜಿ ತೋರಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ನಟ ಸೋನು ಸೂದ್, ಪ್ರತಿಯೊಬ್ಬರು ತಮ್ಮ ಕುಟುಂಬ, ಆತ್ಮೀಯರೊಂದಿಗೆ ಇರಲು ಇಷ್ಟಪಡುತ್ತಾರೆ. ಆದ್ದರಿಂದ ವಲಸಿಗರು ಮನೆಗೆ ತಲುಪಲು ಸಹಾಯ ಮಾಡಲು ಮಹಾರಾಷ್ಟ್ರ- ಕರ್ನಾಟಕ ರಾಜ್ಯ ಸರ್ಕಾರಗಳಿಂದ ಅನುಮತಿ ಕೋರಿದ್ದೆ. ಅದರಂತೆ ವಲಸೆ ಕಾರ್ಮಿಕರನ್ನು ಕಳಿಸಿಕೊಟ್ಟಿದ್ದೇನೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ದೇಶದ ಜನತೆಯನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ!

ಫೋರ್ಬೆಸ್ ಗಂಜ್ : ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನ ಶಾಂತಿಯಿಂದ ನಡೆದಿದ್ದು, ದೇಶದ ಜನತೆಯನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.

ಕೊರೊನಾ ಸಂಕಷ್ಟ: ತುರ್ತು ಸಭೆ ಕರೆದ ಸಿಎಂ ಯಡಿಯೂರಪ್ಪ

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ತುರ್ತು ಸಭೆ…

ದಿನವೂ 24 ಕಿಮೀ ಸೈಕಲ್ ಹೊಡ್ದು ಕಲಿತಳು:10ನೇತರಗತಿಯಲ್ಲಿ ಶೇ. 98.75 ಗಳಿಸಿದಳು!

ಭೋಪಾಲ್: ಹತ್ತನೆ ಕ್ಲಾಸ್ ಪರೀಕ್ಷೆಯಲ್ಲಿ ಬರೊಬ್ಬರಿ 98.75 ಪರ್ಸೆಂಟು ಮಾಡಿದ ಈ ಛೋಟಿ, ರಾಜ್ಯಕ್ಕೆ 8ನೇ…