ಬೆಂಗಳೂರು: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಅವರಿಗೆ ವಿಜಯ್ ದೇವರಕೊಂಡ ಸಂದೇಶ ಕಳುಹಿಸಿದ್ದಾರೆ.

ಹೈದರಾಬಾದ್ಗೆ ಬಾ ಚಿಲ್ ಮಾಡೋಣ ಎಂದು ನಟ ವಿಜಯ್ ದೇವರಕೊಂಡ ಫನ್ನಿಯಾಗಿ ಸಂದೇಶ ಕಳುಹಿಸಿದ್ದಾರೆ. ಸದ್ಯ ದೇಶದಲ್ಲಿ ಕೊರೊನಾ ಲಾಕ್ ಡೌನ್ ಘೋಷಣೆಯಾಗಿದೆ. ಈ ನಿಟ್ಟಿನಲ್ಲಿ ಸಿನಿಮಾ ಕೆಲಸಗಳು ಕೂಡ ನಿಂತಿವೆ. ಹೀಗಾಗಿಯೇ ರಶ್ಮಿಕ ಕೊಡಗಿನ ತಮ್ಮ ಮನೆಯಲ್ಲಿಯೇ ಉಳಿದುಕೊಂಡಿದ್ದಾರೆ. ಇತ್ತ ವಿಜಯ್ ಹೈದರಾಬಾದ್ ನಲ್ಲಿ ಲಾಕ್ ಆಗಿದ್ದಾರೆ. ಈ ಸಮಯದಲ್ಲಿ ಒಬ್ಬರನೊಬ್ಬರು ಮಿಸ್ ಮಾಡಿಕೊಳ್ಳುತ್ತಿರುವ ಅವರು ಈ ರೀತಿಯ ಸಂದೇಶ ಕಳುಹಿಸಿದ್ದಾರೆ.

ಇತ್ತೀಚೆಗೆ ನಟ ವಿಜಯ್ ದೇವರಕೊಂಡ ಹುಟ್ಟುಹಬ್ಬ ಇತ್ತು. ಅಂದು ರಶ್ಮಿಕಾ ನನ್ನ ಕಾಮ್ರೇಡ್ ವಿಜಯ್ ದೇವರಕೊಂಡಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಟ್ವೀಟ್ ಮಾಡುವ ಮೂಲಕ ಶುಭಾಶಯ ತಿಳಿಸಿದ್ದರು. ಇದೀಗ ಆ ಟ್ವೀಟ್ಗೆರ ವಿಜಯ್ ದೇವರಕೊಂಡ ರಿಪ್ಲೈ ಮಾಡಿದ್ದು, ಮಂದಣ್ಣ ಬೇಗ ಹೈದರಾಬಾದ್ಗೆ ಬಾ ಚಿಲ್ ಮಾಡೋಣ. ನಮ್ಮ ಗ್ಯಾಂಗ್ ನಿನ್ನನ್ನು ತುಂಬ ಮಿಸ್ ಮಾಡಿಕೊಳ್ಳುತ್ತಿದೆ” ಎಂದು ಹಾರ್ಟ್ ಮತ್ತು ನಗುವ ಎಮೋಜಿ ಹಾಕಿ ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಹುಬ್ಬಳ್ಳಿ ಗುರುಸ್ವಾಮಿ ಬೆತ್ತಲೆ ವಿಡಿಯೋಗೆ ಸಿಕ್ಕ ಸ್ಪಷ್ಟನೆ!

ಶಬರಿ ನಗರದ ಅಯ್ಯಪ್ಪ ಸ್ವಾಮೀಜಿ ಮಠದ ಪೀಠಾದೀಶನ ಬೆತ್ತಲೆ ಪುರಾಣದ ಬಗ್ಗೆ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ.

ನೌಕರರ ವಲಯದಲ್ಲಿ ನಿರಾಸೆ ಕಾಮೋ೯ಡ ಮೂಡಿಸಿದ ಬಜೆಟ್-ಚಂದ್ರಶೇಖರ ನುಗ್ಲಿ

ಆಲಮಟ್ಟಿ : ಮುಖ್ಯ ಮಂತ್ರಿಗಳು ಇಂದು ಮಂಡಿಸಿದ ಬಜೆಟ್ ರಾಜ್ಯದ ನೌಕರರಿಗೆ ಹಾಗೂ ಶಿಕ್ಷಕರ ಸಮೂಹಕ್ಕೆ…

ಗದಗ ಜಿಲ್ಲೆಯಲ್ಲಿಂದು 06 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 6 ಕೊರೊನಾ ಪಾಸಿಟಿವ್ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 243…

ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು!

ಹಾಸನ: ಶತಾಯುಷಿ ಸಾಲುಮರದ ತಿಮ್ಮಕ್ಕನವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಹೊಟ್ಟೆ ನೋವು, ವಾಂತಿ,…