ಎಪಿಎಂಸಿ ಕಾಯ್ದೆ ತಿದ್ದುಪಡಿ ರೈತರಿಗೆ ಮಾರಕ: ಪ್ರತಿಪಕ್ಷಗಳ ವಿರೋಧ

ಬೆಂಗಳೂರು: ರಾಜ್ಯ ಸರ್ಕಾರ ಇದೀಗ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದೆ. ಆದರೆ ಇದಕ್ಕೆ ರೈತಪರ ಸಂಘಟನೆ ಹಾಗೂ ಪ್ರತಿಪಕ್ಷಗಳಿಂದ ಸರ್ಕಾರದ ಈ ನಡೆ ವಿರೋಧಕ್ಕೆ ಕಾರಣವಾಗಿದೆ.
ಎಪಿಎಂಸಿ ತಿದ್ದುಪಡಿ ಕಾಯ್ದೆ ರೈತರಿಗೆ ಮಾರಕವಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ.
ಕೊರೋನಾ ಸಂಕಷ್ಟದಲ್ಲಿರುವ ರೈತರಿಗೆ ಎಪಿಎಂಸಿ ತಿದ್ದುಪಡಿ ಕಾಯ್ದೆ ಮತ್ತಷ್ಟು ಸಂಕಷ್ಟಕ್ಕೀಡು ಮಾಡಿದೆ.
ಮೇ 5ರಂದು ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ಪತ್ರ ಬರೆದು ಎಪಿಎಂಸಿ ಕಾಯಿದೆ ತಿದ್ದುಪಡಿ ಕುರಿತು ಮಾದರಿ ಪತ್ರ ಕಳುಹಿಸುತ್ತೇವೆ. ಅದನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತನ್ನಿ ಎಂದು ಹೇಳಿದೆ. ಈ ಬಗ್ಗೆ ಕೇಂದ್ರವು ರಾಜ್ಯ ಸರ್ಕಾರಗಳಿಗೆ ಈ ರೀತಿಯ ಆದೇಶ ನೀಡಲು ಹೇಗೆ ಸಾಧ್ಯ? ಇದು ಬಹುರಾಷ್ಟ್ರೀಯ ಕಂಪನಿಗಳಿಗೆ ಅನುಕೂಲ ಮಾಡಿಕೊಡಲು ನಡೆಸಿರುವ ಸಂಚು. ಹಾಗೂ ಬಹು ರಾಷ್ಟ್ರೀಯ ಕಂಪನಿಗಳಿಗೆ ಒತ್ತಡಕ್ಕೆ ಮಣಿದು ಕೇಂದ್ರ ಸರ್ಕಾರ ಈ ಕೆಲಸಕ್ಕೆ ಕೈ ಹಾಕಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಕಾಯ್ದೆಯಿಂದ ರೈತರಿಗೆ ಪ್ರಯೋಜನವಿಲ್ಲ. ಬದಲಾಗಿ ಸರ್ಕಾರಕ್ಕೆ 600 ಕೋಟಿ ಲಾಸ್ ಆಗುತ್ತದೆ. ಈಗಾಗಲೇ ಮಹಾರಾಷ್ಟ್ರ ಸರ್ಕಾರ ಈ ಕಾಯ್ದೆ ಜಾರಿಗೆ ತರಲು ಹೋಗಿ ಎಡವಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಜೊತೆಗೆ ರೈತಪರ ಸಂಘಟನೆಗಳಿಂದಲೂ ಇದಕ್ಕೆ ವಿರೋಧ ವ್ಯಕ್ತವಾಗಿದೆ.

Exit mobile version