ಬೆಂಗಳೂರು: ಜುಲೈ 30 ಮತ್ತು 31 ರಂದು ಸಿಇಟಿ ಪರೀಕ್ಷೆ ನಡೆಸಲಾಗುತ್ತಿದ್ದು, ಎಂದಿನಂತೆ ಆಫ್ ಲೈನ್ ನಲ್ಲಿ ಈ ಬಾರಿಯೂ ಪರೀಕ್ಷೆ ನಡೆಯಲಿದೆ ಎಂದಿದ್ದಾರೆ. ಪರೀಕ್ಷಾ ಕೊಠಡಿಗಳಲ್ಲಿ ಮುಂಜಾಗೃತ ಕ್ರಮವಾಗಿ ಎಲ್ಲಾ ಸಿದ್ಧತೆಗಳಿಗೆ ಸೂಚಿಸಲಾಗಿದ್ದು, ಅಗತ್ಯ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಸಚಿವ ಅಶ್ವಥ್ ನಾರಾಯಣ್ ಹೆಳಿದರು.

ಜೊತೆಗೆ ಸಿಇಟಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕೊಠಡಿಯಲ್ಲಿ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಕೂರಿಸಲು ಸೂಚಿಸಲಾಗಿದೆ. ಇದರಿಂದಾಗಿ ಈ ಬಾರಿ ಪರೀಕ್ಷಾ ಕೇಂದ್ರಗಳ ಸಂಖ್ಯೆ ಕೂಡ ಅಧಿಕವಾಗುವ ಸಾಧ್ಯತೆಗಳು ಇವೆ. ಈ ವೇಳೆ  ಎಂಜಿನಿಯರಿಂಗ್ ಸೀಟ್ ಶುಲ್ಕ ಹೆಚ್ಚಳ ವಿಚಾರದ ಬಗ್ಗೆ ಮಾತನಾಡಿದ ಅವರು, ಕೊರೊನಾ ಇರುವ ಕಾರಣ ಈ ಬಾರಿ ಅಡ್ಮಿಷನ್ ಆಗುವುದೇ ದೊಡ್ಡ ವಿಷಯವಾಗಲಿದೆ. ಶುಲ್ಕ ಹೆಚ್ಚಳದ ಬಗ್ಗೆ ವೈಜ್ಞಾನಿಕ ದೃಷ್ಟಿಯಿಂದ ಚಿಂತನೆ ಮಾಡಿ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದರು.

ಡಿಗ್ರಿ ಕಾಲೇಜ್ ಗಳು ಈ ವರ್ಷದ ಸೆಪ್ಟೆಂಬರ್ ಮೊದಲ ವಾರದಲ್ಲಿ ಆರಂಭವಾಗಲಿದೆ. ಪರೀಕ್ಷೆ, ಫಲಿತಾಂಶ ವಿಚಾರಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು. ಮೆಡಿಕಲ್ ಸೀಟ್ ಬ್ಲಾಕಿಂಗ್ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ, ಈಗಾಗಲೇ ಕಮಿಟಿ ರಚನೆ ಮಾಡಿ ವರದಿ ನೀಡಿದೆ. ವರದಿ ಏನಿದೆ ಅಂತ ಸಚಿವರು ನೋಡಿ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಅಶ್ವಥ್ ನಾರಾಯಣ್ ಉತ್ತರಿಸಿದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು 12 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 12 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 116…

ಕೋವಿಡ್ ಸೋಂಕು ನಿಯಂತ್ರಣ:ಹೆಚ್ಚುವರಿ ನಿಯಂತ್ರಣ ಕ್ರಮಗಳ ಪಾಲನೆಗೆ ಜಿಲ್ಲಾಧಿಕಾರಿಗಳ ಆದೇಶ

ಗದಗ : ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ಜಿಲ್ಲಾದ್ಯಂತ…

ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ನಿಗದಿ: ಎರಡು ಹಂತದಲ್ಲಿ ಚುನಾವಣೆ

ರಾಜ್ಯದಲ್ಲಿ ಈಗಾಗಲೇ ಹಳ್ಳಿ ಫೈಟ್ ಗೆ ದಿನಾಂಕ ಯಾವಾಗ ಎನ್ನುವ ಕುತೂಹಲ ಬಹುತೇಕರಲ್ಲಿತ್ತು. ಆದರೆ ಇಂದು ಕೊನೆಗೂ ಚುನಾವಣಾ ಆಯೋಗ ಮೂಹುರ್ತ ಫಿಕ್ಸ್ ಮಾಡಿದ್ದು, ಚುನಾವಣೆ ದಿನಾಂಕಕ್ಕೆ ಎದುರು ನೋಡುತ್ತಿದ್ದವರ ಸಂತಸಕ್ಕೆ ಕಾರಣವಾಗಿದೆ

24 ಗಂಟೆಗಳಲ್ಲಿ ರಾಜ್ಯದಲ್ಲಿ 37 ಕೋವಿಡ್ ಪಾಸಿಟಿವ್

ಮೇ 03 ಸಂಜೆ 5 ರಿಂದ ಮೇ 04 ಸಂಜೆ 5ರ ವರೆಗೆ 37 ಹೊಸ ಕೋವಿಡ್-19 ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದೆ.