ನವದೆಹಲಿ: ಸಣ್ಣ, ಅತಿಸಣ್ಣ, ಮಧ್ಯಮ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂಪಾಯಿ ಜಾಮೀನು ರಹಿತ ಸಾಲ ನೀಡಲು ಮೀಸಲಿರಿಸಲಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಈ ಕುರಿತು ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು 18 ಸಾವಿರ ಕೋಟಿ ರೂಪಾಯಿ ಆದಾಯ ತೆರಿಗೆಯನ್ನು ವಾಪಸ್ ನೀಡಲಾಗುವುದು.ಇನ್ನು ಮುಖ್ಯವಾಗಿ ದೇಶದಲ್ಲಿ ಮುಂದಿನ ಮೂರು ತಿಂಗಳುಗಳ ಕಾಲ ಭಾರತದಲ್ಲಿರುವ 80 ಕೋಟಿ ಜನರಿಗೆ ಐದು ಕೆಜಿ ಅಕ್ಕಿ ಅಥವಾ ಗೋಧಿ ಉಚಿತವಾಗಿ ನೀಡಲಾಗುವುದು. ಉಳಿದ ಎಲ್ಲ ಕುಟುಂಬದವರಿಗೆ ಮೂರು ತಿಂಗಳ ಕಾಲ ಒಂದು ಕೆಜಿ ಧವಸ-ಧಾನ್ಯ ಉಚಿತವಾಗಿ ನೀಡುವುದಾಗಿ ಸರ್ಕಾರ ತಿಳಿಸಿದೆ. ಜೊತೆಗೆ ಮುಂದಿನ ಮೂರು ತಿಂಗಳ ಕಾಲ 8 ಕೋಟಿ ಬಡ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ನೀಡಲು ತೀರ್ಮಾನಿಸಲಾಗಿದೆ ಎಂದರು.

15,000 ರೂಪಾಯಿ ಒಳಗಿನ ವೇತನದಾರರಿಗೆ ತಕ್ಷಣ ಇಪಿಎಫ್ ವಾಪಸ್ ನೀಡಲಾಗುವುದು. ಆಗಸ್ಟ್ ವರೆಗೆ ಇಪಿಎಫ್ ಹಣವನ್ನು ಸರ್ಕಾರವೇ ಪಾವತಿಸಲಿದೆ ಎಂದು ತಿಳಿಸಿದರು. ನಿನ್ನೆಯಷ್ಟೆ ಪ್ರಧಾನಿ ನರೇಂದ್ರ ಮೋದಿ ಅವರು 20 ಲಕ್ಷ ಕೋಟಿ ರೂ. ಆರ್ಥಿಕ ಪ್ಯಾಕೇಜ್ ಅನ್ನು ಘೋಷಣೆ ಮಾಡಿದ್ದರು. ಈ ವಿಶೇಷ ಪ್ಯಾಕೇಜಿನಲ್ಲಿ ಯಾವುದಕ್ಕೆ ಆದ್ಯತೆ ನೀಡಲಾಗಿದೆ ಎನ್ನುವ ಕುರಿತು ಇಂದು ಪತ್ರಿಕಾಗೋಷ್ಟಿಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ವಿವರಿಸಿದರು.

ಇದೇ ವೇಳೆ ಪ್ರದಾನಿ ನರೇಂದ್ರ ಮೋದಿ ಘೋಷಿಸಿದ 20 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ಕುರಿತು ಪ್ರತಿಕ್ರಿಯಿಸಿದ ನಿರ್ಮಲಾ ಸೀತಾರಾಮನ್, ಪ್ರಧಾನಿ ಘೋಷಣೆಯ ಪ್ಯಾಕೇಜ್ ನಿಂದ ಸ್ವಾವಲಂಭಿ ಭಾರತ ನಿರ್ಮಾಣ ಹಾಗೂ ದೇಶದ ಅಭಿವೃದ್ಧಿಗೆ ಉತ್ತೇಜನ ನೀಡುವಂತಹದ್ದಾಗಿದೆ.

Leave a Reply

Your email address will not be published. Required fields are marked *

You May Also Like

ವಿಜಯ ನಗರ ಶುಗರ್ಸ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಕೊಲೆ!

ತಲೆಯ ಮೇಲೆ ಕಲ್ಲು ಎತ್ತಿಹಾಕಿ ಸೆಕ್ಯೂರಿಟಿ ಗಾರ್ಡ್ ನನ್ನು ಕೊಲೆ ಮಾಡಿದ ಘಟನೆ ತಡರಾತ್ರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ನಾಳೆ ನಡೆಯುವ ಜನಸಂಪರ್ಕ ಯಾತ್ರೆಗೆ ಬಿಎಸ್‌ವೈ, ಸಿಎಂ ಬೊಮ್ಮಾಯಿ

ಉತ್ತರಪ್ರಭ ಸುದ್ದಿ ಗದಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸೇರಿದಂತೆ ಅನೇಕ…

ಇಂದು ರಾಜ್ಯದಲ್ಲಿ 75 ಕೊರೋನಾ ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು..?

ಇಂದು ರಾಜ್ಯದಲ್ಲಿ 75 ಕೊರೋನಾ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕು ತಗುಲಿದವರ ಸಂಖ್ಯೆ 2493 ಆಗಿದೆ.

ರಾಜ್ಯದಲ್ಲಿಂದು 947 ಕೊರೊನಾ ಪಾಸಿಟಿವ್! : ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 946 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 15242…