3 ಲಕ್ಷ ಕೋಟಿ ಜಾಮೀನು ರಹಿತ ಸಾಲಕ್ಕೆ ಮೀಸಲು: ಕೇಂದ್ರ ಸಚಿವೆ ನಿರ್ಮಲಾ ಸಿತಾರಾಮನ್

ನವದೆಹಲಿ: ಸಣ್ಣ, ಅತಿಸಣ್ಣ, ಮಧ್ಯಮ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂಪಾಯಿ ಜಾಮೀನು ರಹಿತ ಸಾಲ ನೀಡಲು ಮೀಸಲಿರಿಸಲಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಈ ಕುರಿತು ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು 18 ಸಾವಿರ ಕೋಟಿ ರೂಪಾಯಿ ಆದಾಯ ತೆರಿಗೆಯನ್ನು ವಾಪಸ್ ನೀಡಲಾಗುವುದು.ಇನ್ನು ಮುಖ್ಯವಾಗಿ ದೇಶದಲ್ಲಿ ಮುಂದಿನ ಮೂರು ತಿಂಗಳುಗಳ ಕಾಲ ಭಾರತದಲ್ಲಿರುವ 80 ಕೋಟಿ ಜನರಿಗೆ ಐದು ಕೆಜಿ ಅಕ್ಕಿ ಅಥವಾ ಗೋಧಿ ಉಚಿತವಾಗಿ ನೀಡಲಾಗುವುದು. ಉಳಿದ ಎಲ್ಲ ಕುಟುಂಬದವರಿಗೆ ಮೂರು ತಿಂಗಳ ಕಾಲ ಒಂದು ಕೆಜಿ ಧವಸ-ಧಾನ್ಯ ಉಚಿತವಾಗಿ ನೀಡುವುದಾಗಿ ಸರ್ಕಾರ ತಿಳಿಸಿದೆ. ಜೊತೆಗೆ ಮುಂದಿನ ಮೂರು ತಿಂಗಳ ಕಾಲ 8 ಕೋಟಿ ಬಡ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ನೀಡಲು ತೀರ್ಮಾನಿಸಲಾಗಿದೆ ಎಂದರು.

15,000 ರೂಪಾಯಿ ಒಳಗಿನ ವೇತನದಾರರಿಗೆ ತಕ್ಷಣ ಇಪಿಎಫ್ ವಾಪಸ್ ನೀಡಲಾಗುವುದು. ಆಗಸ್ಟ್ ವರೆಗೆ ಇಪಿಎಫ್ ಹಣವನ್ನು ಸರ್ಕಾರವೇ ಪಾವತಿಸಲಿದೆ ಎಂದು ತಿಳಿಸಿದರು. ನಿನ್ನೆಯಷ್ಟೆ ಪ್ರಧಾನಿ ನರೇಂದ್ರ ಮೋದಿ ಅವರು 20 ಲಕ್ಷ ಕೋಟಿ ರೂ. ಆರ್ಥಿಕ ಪ್ಯಾಕೇಜ್ ಅನ್ನು ಘೋಷಣೆ ಮಾಡಿದ್ದರು. ಈ ವಿಶೇಷ ಪ್ಯಾಕೇಜಿನಲ್ಲಿ ಯಾವುದಕ್ಕೆ ಆದ್ಯತೆ ನೀಡಲಾಗಿದೆ ಎನ್ನುವ ಕುರಿತು ಇಂದು ಪತ್ರಿಕಾಗೋಷ್ಟಿಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ವಿವರಿಸಿದರು.

ಇದೇ ವೇಳೆ ಪ್ರದಾನಿ ನರೇಂದ್ರ ಮೋದಿ ಘೋಷಿಸಿದ 20 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ಕುರಿತು ಪ್ರತಿಕ್ರಿಯಿಸಿದ ನಿರ್ಮಲಾ ಸೀತಾರಾಮನ್, ಪ್ರಧಾನಿ ಘೋಷಣೆಯ ಪ್ಯಾಕೇಜ್ ನಿಂದ ಸ್ವಾವಲಂಭಿ ಭಾರತ ನಿರ್ಮಾಣ ಹಾಗೂ ದೇಶದ ಅಭಿವೃದ್ಧಿಗೆ ಉತ್ತೇಜನ ನೀಡುವಂತಹದ್ದಾಗಿದೆ.

Exit mobile version