ಮುಂಬಯಿ: ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ಮಹಾಮಾರಿಯ ಹಾವಳಿ ಮಿತಿ ಮೀರುತ್ತಿದೆ. ಕೊರೊನಾ ವಾರಿಯರ್ಸ್ ನ್ನು ಅದು ಬಿಡುತ್ತಿಲ್ಲ. ಇಲ್ಲಿಯವರೆಗೆ ಒಟ್ಟು 1061 ಜನ ಪೊಲೀಸರಲ್ಲಿ ಸೋಂಕು ಕಂಡು ಬಂದಿದೆ.

1061 ಜನ ಪೊಲೀಸ್ ಸಿಬ್ಬಂದಿಗಳ ಪೈಕಿ 112 ಜನ ಪೊಲೀಸ್ ಅಧಿಕಾರಿಗಳೂ ಇದ್ದಾರೆ. ಇಲ್ಲಿಯವರೆಗೆ 174 ಜನ ಸೋಂಕಿನಿಂದ ಗುಣವಾಗಿದ್ದಾರೆ. ಅಲ್ಲದೇ, ಮಹಾಮಾರಿಗೆ 9 ಜನ ಬಲಿಯಾಗಿದ್ದಾರೆ.

ಕೊರೊನಾ ಮಟ್ಟಹಾಕಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರ ಮೇಲೆ ಹಲ್ಲೆ ಪ್ರಕರಣಗಳು ಮುಂದುವರೆದಿದ್ದು, ಮಹಾರಾಷ್ಟ್ರದಲ್ಲಿ ಇಲ್ಲಿಯವರೆಗೆ 85 ಜನ ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ 803ಕ್ಕೂ ಹೆಚ್ಚು ಜನ ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ಪುರಸಭೆ ಸದಸ್ಯನಿಗೆ ಕೊರೊನಾ ಪಾಸಿಟಿವ್

ಪಟ್ಟಣದ ಪುರಸಭೆ ಸದಸ್ಯರೊಬ್ಬರಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಇದರಿಂದ ಮಾಸಂಗಿಪುರದ ನಾಗರಿಕರಲ್ಲಿ ಆತಂಕ ಮನೆಮಾಡಿದೆ.

ಅಬುದಾಬಿಯಿಂದ ರಾಜ್ಯಕ್ಕೆ ಬಂದ 179 ಜನ – ಬೆಂಗಳೂರಿಗರಲ್ಲಿ ಆತಂಕ!

ಕೊರೊನಾ ಲಾಕ್ ಡೌನ್ ನಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನ ರಾಜಧಾನಿ ಅಬುದಾಬಿಯಿಂದ 179 ಜನ ಭಾರತೀಯರು ಬೆಂಗಳೂರಿಗೆ ಬಂದಿದ್ದಾರೆ.

ಲಾಕ್ ಡೌನ್ : ಸೀಜ್ ಆದ ವಾಹನ ಮಾಲಿಕರಿಗೆ ಸಿಹಿ ಸುದ್ದಿ

ಈಗಾಗಲೇ ದೇಶಾದ್ಯಂತ ಮಾ.24 ರಿಂದಲೇ ಲಾಕ್ ಡೌನ್ ಆರಂಭವಾಗಿದೆ. ಪೊಲೀಸರು ವಶಪಡಿಸಿಕೊಂಡ ವಾಹನಗಳನ್ನು ಮೇ.1 ರಂದು ಮಾಲಿಕರಿಗೆ ಮರಳಿ ನೀಡುವ ಬಗ್ಗೆ ನಿರ್ಧರಿಸಲಾಗಿದೆ.