ಬೆಂಗಳೂರು: ಎಸ್ಎಸ್ಎಲ್ಸಿ ಪರಿಕ್ಷೆಯ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಸೋಮವಾರ ಸಭೆ ಸೇರುತ್ತಿದ್ದೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.

ಕೊರೊನ ಪರಿಣಾಮದಿಂದ ಶಿಕ್ಷಣ ಇಲಾಖೆಗೆ ತೊಂದರೆಯಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆಯ ಬಗ್ಗೆ ನಾಳೆ ರಾಜ್ಯದ ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ಎಂಎಲ್ಸಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ಮಾಡಿ, ಸೋಮವಾರದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಸಾಧ್ಯವಾದರೆ ಪರಿಕ್ಷಾ ದಿನಾಂಕ ಮತ್ತು ವೇಳಾಪಟ್ಟಿಯನ್ನು ನಿಗದಿಮಾಡುತ್ತೇವೆ ಎಂದು ತಿಳಿಸಿದರು.

ಸರ್ಕಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆ ಮಾಡಬೇಕೆನ್ನುವ ಅಭಿಪ್ರಾಯವಿದೆ. ಹೀಗಾಗಿ ಹಲವು ಶಿಕ್ಷಣ ತಜ್ಞರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದರು.
ಎಸ್ಎಸ್ಎಲ್ಸಿ ಮಕ್ಕಳಿಗೆ ರಿವಿಷನ್ ತರಗತಿಗಳನ್ನು ದೂರದರ್ಶನ ಚಂದನ ವಾಹಿನಿಯಲ್ಲಿ ಮಾಡುತ್ತಿದ್ದೇವೆ ಎಂದರು.

Leave a Reply

Your email address will not be published. Required fields are marked *

You May Also Like

ಶಾಲೆ ಆರಂಭಕ್ಕೆ ಸಿದ್ದರಾಮಯ್ಯ ವಿರೋಧ

ರಾಜ್ಯ ಸರ್ಕಾರ ಶಾಲೆ ಆರಂಭಕ್ಕೆ ಚಿಂತನೆ ನಡೆಸಿದ್ದು ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ.

ಕಾನೂನು ಲೆಕ್ಕಕ್ಕಿಲ್ಲ ಲಕ್ಕುಂಡಿ ಗ್ರಾಮ ಪಂಚಾಯತಿಗೆ..?: ಜನರ ಆರೋಗ್ಯ ಒತ್ತೆ ಇಡಲು ಹೊರಟಿತ್ತಾ ಗ್ರಾಪಂ..!

ಗದಗ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿರಬೇಕಿದ್ದ ಗ್ರಾಮ ಪಂಚಾಯತಿ ಆಡಳಿತ ಮಂಡಳಿ ಗ್ರಾಮವನ್ನೆ ಮಾರಾಟ ಮಾಡಲು ಹಿಂಜರಿಯುವುದಿಲ್ಲ…

ಸಮಾಜ ಸಂಘಟನೆಗೆ ಕೈ ಜೋಡಿಸಿ: ಬಸವರಾಜ

ಉತ್ತರಪ್ರಭ ಸುದ್ದಿಶಿರಹಟ್ಟಿ: ರಾಜ್ಯ ವೀರಶೈವ ಲಿಂಗಾಯಿತ ಪಂಚಮಸಾಲಿ ಸಂಘ ತಾಲೂಕು ಘಟಕ ಆಶ್ರಯದಲ್ಲಿ ತಾಲೂಕಿನ ಕಡಕೋಳ…