ಬೆಂಗಳೂರು: ಎಸ್ಎಸ್ಎಲ್ಸಿ ಪರಿಕ್ಷೆಯ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಸೋಮವಾರ ಸಭೆ ಸೇರುತ್ತಿದ್ದೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.

ಕೊರೊನ ಪರಿಣಾಮದಿಂದ ಶಿಕ್ಷಣ ಇಲಾಖೆಗೆ ತೊಂದರೆಯಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆಯ ಬಗ್ಗೆ ನಾಳೆ ರಾಜ್ಯದ ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ಎಂಎಲ್ಸಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ಮಾಡಿ, ಸೋಮವಾರದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಸಾಧ್ಯವಾದರೆ ಪರಿಕ್ಷಾ ದಿನಾಂಕ ಮತ್ತು ವೇಳಾಪಟ್ಟಿಯನ್ನು ನಿಗದಿಮಾಡುತ್ತೇವೆ ಎಂದು ತಿಳಿಸಿದರು.

ಸರ್ಕಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆ ಮಾಡಬೇಕೆನ್ನುವ ಅಭಿಪ್ರಾಯವಿದೆ. ಹೀಗಾಗಿ ಹಲವು ಶಿಕ್ಷಣ ತಜ್ಞರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದರು.
ಎಸ್ಎಸ್ಎಲ್ಸಿ ಮಕ್ಕಳಿಗೆ ರಿವಿಷನ್ ತರಗತಿಗಳನ್ನು ದೂರದರ್ಶನ ಚಂದನ ವಾಹಿನಿಯಲ್ಲಿ ಮಾಡುತ್ತಿದ್ದೇವೆ ಎಂದರು.

Leave a Reply

Your email address will not be published. Required fields are marked *

You May Also Like

ಸಾಧುಗಳ ಹತ್ಯೆ ಪ್ರಕರಣ: ಓರ್ವ ಆರೋಪಿಗೆ ಕೊರೋನಾ ಪಾಸಿಟಿವ್

ಪಾಲ್ಘರ್ ನಲ್ಲಿನ ಇಬ್ಬರು ಸಾಧುಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ 115 ಜನರ ಪೈಕಿ ಓರ್ವ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಗದಗನಲ್ಲಿಂದು 18 ಕೊರೊನಾ ಪಾಸಿಟಿವ್: ಸೋಂಕಿತರ ಸಂಖ್ಯೆ 78 ಕ್ಕೆ ಏರಿಕೆ

ಗದಗ: ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 78…

ಬಂಜಾರ ಭಾಷೆ, ಸಂಸ್ಕೃತಿ ಉಳುವಿಗಾಗಿ ಸಮನ್ವಯ ಮಹಾಸಭೆ

ಉತ್ತರಪ್ರಭ ಸುದ್ದಿ ವಿಜಯಪುರ: ಜಿಲ್ಲೆಯ ಕೋಲ್ಹಾರ ತಾಲೂಕಿನ ಕೂಡಗಿ ತಾಂಡಾದ ಸದಾ ಸಮಾಜದ ಬಗ್ಗೆ ಚಿಂತಿಸುವ…