ನವದೆಹಲಿ: ದೇಶದಾದ್ಯಂತ ಸದ್ಯ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮಹಾಮಾರಿ ಕೊರೊನಾ ವಿರುದ್ಧ ಹೋರಾಡಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

ಈ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ಅವರು, ಕಂಟೈನ್ಮೆಂಟ್ ಝೋನ್ ಗಳಲ್ಲಿ ಲಾಕ್ ಡೌನ್ ಸಡಿಲಗೊಳಿಸುವುದು ಬೇಡ. ಆದರೆ, ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಉಳಿದೆಲ್ಲಾ ಪ್ರದೇಶಗಳಲ್ಲಿಯೂ ಆರ್ಥಿಕ ಚಟುವಟಿಕೆಗಳು ಪುನರಾರಂಭಗೊಳ್ಳಲು ಅನುಮತಿ ನೀಡಬೇಕಿದೆ. ಇಂತಹ ಸಂದರ್ಭದಲ್ಲಿಯೂ ವೈರಸ್ ಹೆಚ್ಚಾಗುವ ಸಾಧ್ಯತೆಗಳಿವೆ. ಇದಕ್ಕಾಗಿ ನಾವು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆಂದು ಹೇಳಿದ್ದಾರೆ.

ಖಾಸಗಿ ಕಚೇರಿಗಳು ಹಾಗೂ ಇತರೆ ಆರ್ಥಿಕ ಚಟುವಟಿಕೆಗಳನ್ನು ಪುನರಾರಂಭಿಸಲು ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರಿಗೆ ಸೇವೆಗಳನ್ನು ಆರಂಭಿಸಲು ಚಿಂತನೆ ನಡೆಸಲಾಗಿದ್ದು, ಬಸ್ ನಲ್ಲಿ ಕೇವಲ 20 ಜನರು ಮಾತ್ರ ಪ್ರಯಾಣಿಸಲು ಅನುಮತಿ ನೀಡಲಾಗುತ್ತದೆ. ಬಸ್ ಗಳ ಪ್ರವೇಶ ದ್ವಾರ ಹಾಗೂ ನಿರ್ಗಮನ ದ್ವಾರಗಳಲ್ಲಿ ಒಬ್ಬೊಬ್ಬರು ಅಧಿಕಾರಿಗಳನ್ನು ನಿಯೋಜನೆಗೊಳಿಸಲಾಗುತ್ತಿದ್ದು, ಬಸ್ ನಲ್ಲಿ ಸಾಮಾಜಿಕ ಅಂತರ ಕಾಪಾಡಲಿದ್ದಾರೆಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗನಲ್ಲಿ ಅಲ್ಪಸಂಖ್ಯಾತ ನಿಗಮದ ಅಧಿಕಾರಿ ಎಸಿಬಿ ಬಲೆಗೆ

ಗದಗ: ನಗರದ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಹಾಗೂ ಕಂಪ್ಯೂಟರ್ ಆಪರೇಟರ್ ಇಂದು ಎಸಿಬಿ…

ಪಿಎಂ ಕೇರ್ಸ್ ಅಡಿ ಸಂಗ್ರಹವಾದ ಮೊತ್ತದ ಲೆಕ್ಕ ಕೊಡಿ: ಸಿದ್ದರಾಮಯ್ಯ

ಬೆಂಳೂರು: ಪ್ರತಿಪಕ್ಷ ನಾಯಕರಾಗಿ ಅಧಿಕಾರಿಗಳ ಸಭೆಯನ್ನೇ ನಡೆಸಿಲ್ಲ ಎಂದು ಬಿಜೆಪಿ ಮುಖಂಡ ಬಿ.ಎಲ್.ಸಂತೋಷ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿರುವ…

ರಾಜಸ್ಥಾನದಲ್ಲಿ ಸೋಂಕಿತರ ಸಂಖ್ಯೆ ವಿಪರೀತ ಹೆಚ್ಚಳ – ಗಡಿ ಬಂದ್!!

ಜೈಪುರ: ಮಹಾಮಾರಿಯ ಅಟ್ಟಹಾಸ ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಗಡಿ ಬಂದ್…