ಶಿವಾಜಿನಗರದಲ್ಲಿ ಮತ್ತೆ 14 ಜನರಲ್ಲಿ ಕಂಡು ಬಂದ ಸೋಂಕು!

ಬೆಂಗಳೂರು: ಇಲ್ಲಿಯ ಶಿವಾಜಿನಗರದಲ್ಲಿ ಮತ್ತೆ 14 ಜನರಲ್ಲಿ ಸೋಂಕು ಇರುವುದು ಬೆಳಕಿಗೆ ಬಂದಿದೆ.

ಹೌಸ್ ಕೀಪಿಂಗ್ ಜೊತೆ ದ್ವಿತೀಯ ಸಂಪರ್ಕದಲ್ಲಿದ್ದ ವ್ಯಕ್ತಿಗಳಿಗೆ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ 20 ಜನರ ಗಂಟಲು ದ್ರವ ಪರೀಕ್ಷೆ ನಡೆಸಿದ್ದು, ಇದರಲ್ಲಿ 14 ಜನರಲ್ಲಿ ಪಾಸಿಟಿವ್ ಕಂಡು ಬಂದಿದೆ.

ಶುಕ್ರವಾರ 22 ಜನರ ಗಂಟಲು ದ್ರವ ಪರೀಕ್ಷೆಯಲ್ಲಿ 11 ಜನರಿಗೆ ಸೋಂಕು ಇರುವುದು ಖಚಿತವಾಗಿತ್ತು. ಈ ನಿಟ್ಟಿನಲ್ಲಿ ಶಿವಾಜಿನಗರದಲ್ಲಿ ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ನಿನ್ನೆ 202 ಪ್ರಕರಣ ಪತ್ತೆಯಾಗಿದ್ದು, ಇಂದಿನ 14 ಪ್ರಕರಣ ಸೇರಿ 216ಕ್ಕೆ ಏರಿಕೆಯಾಗಿದೆ.

ಒಂದೇ ಬಿಲ್ಡಿಂಗ್ ನಲ್ಲಿ ಇದ್ದ 72 ಜನರನ್ನು ಕ್ವಾರಂಟೈನ್ ಮಾಡಲಾಗಿತ್ತು. ಅದರಲ್ಲಿ ನಿನ್ನೆ 22 ಜನರ ಗಂಟಲು ದ್ರವ ಪರೀಕ್ಷೆಯಲ್ಲಿ 11 ಪಾಸಿಟಿವ್ ದೃಢಪಟ್ಟಿತ್ತು. ಇಂದು 20 ಜನರ ಗಂಟಲು ದ್ರವ ಪರೀಕ್ಷೆಯಲ್ಲಿ 14 ಪಾಸಿಟಿವ್ ಬಂದಿದೆ.

Exit mobile version