ನವದೆಹಲಿ: ಮಹಾಮಾರಿ ಕೊರೊನಾ ಭಾರತದಲ್ಲಿ ತನ್ನ ಉಗ್ರ ಪ್ರತಾಪ ಮುಂದುವರೆಸಿದ್ದು, ದೇಶದಲ್ಲಿ 24 ಗಂಟೆಗಳಲ್ಲಿ 3,904 ಜನರಲ್ಲಿ ಸೋಂಕು ಇರುವುದು ದೃಢ ಪಟ್ಟಿದೆ.

ಸದ್ಯ ದೇಶದಲ್ಲಿ ಸೋಂಕಿತರ ಸಂಖ್ಯೆ 85 ಸಾವಿರ ಗಡಿ ದಾಟಿದೆ. ಈ ಮೂಲಕ ವಿಶ್ವದಲ್ಲಿಯೇ ಮೊದಲ ಬಾರಿಗೆ ಕೊರೋನಾ ವೈರಸ್ ಕಾಣಿಸಿಕೊಂಡ ಚೀನಾವನ್ನು ಭಾರತ ಹಿಂದಿಕ್ಕಿದೆ.

ಇದರ ಜೊತೆಗೆ ಅತೀ ಹೆಚ್ಚು ಸೋಂಕಿತರು ಇರುವ ವಿಶ್ವದ ದೇಶಗಳ ಪೈಕಿ 11ನೇ ಸ್ಥಾನಕ್ಕೆ ಏರಿಕೆ ಕಂಡಿದೆ. 1.16ಲಕ್ಷ ಸೋಂಕಿತರು ಇರುವ ಇರಾನ್ 10ನೇ ಸ್ಥಾನದಲ್ಲಿದೆ. ಇದೇ ಪ್ರಮಾಣದಲ್ಲಿ ಸೋಂಕಿತರು ಪ್ರತಿನಿತ್ಯ ಪತ್ತೆಯಾಗುತ್ತ ಹೋದರೆ, ಇರಾನ್ ದೇಶವನ್ನೂ ಭಾರತ ಹಿಂದಿಕ್ಕುವ ದಿನಗಳು ತೀರಾ ದೂರವೇನೂ ಇಲ್ಲ.

2019ರ ನ.17ರಂದು ಚೀನಾದಲ್ಲಿ ಮೊದಲ ಕೊರೊನಾ ಕೇಸ್ ಪತ್ತೆಯಾಗಿತ್ತು. ಈ ನಡುವೆ ಮೃತರ ಸಂಖ್ಯೆಯಲ್ಲಿ ಭಾರತದ ಚೀನಾ ಮಟ್ಟಕ್ಕೆ ತಲುಪಿಲ್ಲ ಎಂಬುವುದು ತುಸು ಸಮಾಧಾನಕರ ವಿಚಾರವಾಗಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 317 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 317 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7530…

ರಾಜ್ಯದಲ್ಲಿಂದು 337 ಕೊರೊನಾ ಪಾಸಿಟಿವ್, ಮೃತ ಪಟ್ಟವರ ಸಂಖ್ಯೆ 10 : ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 337 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 8281…

ಅಕ್ಟೋಬರ್ ನಲ್ಲಿ ಗ್ರಾಮ ಪಂಚಾಯತಿ ಚುನಾವಣೆ?

ಬೆಂಗಳೂರು: ಕೊರೊನಾ ಕಾರಣದಿಂದ ಗ್ರಾಮ ಪಂಚಾಯತಿ ಚುನಾವಣೆ ಮುಂದೂಡಲಾಗಿತ್ತು. ಇದಕ್ಕೆ ವಿರೋಧ ಪಕ್ಷದಿಂದ ವ್ಯಾಪಕ ವಿರೋಧವು…

6 ತಿಂಗಳ ನಂತರವೂ ಕೇಂದ್ರಕ್ಕೆ ಗೊಂದಲವೇ?: ಕವಾಟವಿರುವ ಎನ್-95 ಮಾಸ್ಕ್ ಅಪಾಯಕಾರಿ’

ಕೇಂದ್ರ ಆರೋಗ್ಯ ಸೇವೆಗಳ ಡೈರೆಕ್ಟರ್ ಜನರಲ್ ಹೊರಡಿಸಿದ ಸುತ್ತೋಲೆ ಈಗ ಜನರನ್ನು ಗೊಂದಲಕ್ಕೆ ತಳ್ಳಿದೆ.ಸದ್ಯ ಬಳಕೆಯಲ್ಲಿರುವ ಕವಾಟ ಅಥವಾ ರಂಧ್ರಗಳಿರುವ ಎನ್-95 ಮಾಸ್ಕ್ ಸೋಂಕು ತಡೆಯಲಾರವು.