ಅಮೃತಸರ : ಪಂಜಾಬ್ ರಾಜ್ಯದಲ್ಲಿ ಕೊರೊನಾ ವೈರಸ್ ಲಾಕ್ ಡೌನ್ ಮೇ. 31 ರ ವರೆಗೆ ಮುಂದುವರಿಯುತ್ತದೆ.

ಆದರೆ, ಸರ್ಕಾರ ಕರ್ಫ್ಯೂ ನಿರ್ಬಂಧವನ್ನು ತೆಗೆದುಹಾಕುತ್ತದೆ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹೇಳಿದ್ದಾರೆ.

ಮೇ. 18 ರಿಂದ ರಾಜ್ಯದಲ್ಲಿ ಯಾವುದೇ ಕರ್ಫ್ಯೂ ಇರುವುದಿಲ್ಲ. ಆದರೆ ಮೇ 31 ರವರೆಗೆ ಲಾಕ್ ಡೌನ್ ಇರುತ್ತದೆ ಎಂದು ಮುಖ್ಯಮಂತ್ರಿ ಸಿಂಗ್ ಹೇಳಿದ್ದಾರೆ.

ಮೂರನೇ ಹಂತದ ಲಾಕ್ ಡೌನ್ ಅವಧಿ ಮುಗಿದ ನಂತರ ಸೀಮಿತ ಸಾರ್ವಜನಿಕ ಸಾರಿಗೆ ಸೇವೆಗಳನ್ನು ಮತ್ತೆ ಆರಂಭಿಸಲಾಗುವುದು ಎಂದು ಸೂಚನೆ ನೀಡಿದ್ದಾರೆ. ಆದರೆ ರಾಜ್ಯದಲ್ಲಿ ಕೊರೊನಾ ಹರಡದಂತೆ ತಡೆಗೆ ಸಾರ್ವಜನಿಕರ ಬೆಂಬಲ ಕೋರಿದ್ದಾರೆ. ಮೇ 18 ರಿಂದ ಗರಿಷ್ಠ ಅಂಗಡಿಗಳು ಮತ್ತು ಸಣ್ಣ ಉದ್ಯಮಗಳನ್ನು ತೆರೆಯಲು ನಾನು ಅವಕಾಶ ನೀಡುತ್ತೇನೆ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಕಾಲಿಕೆ ಮಳೆಗೆ ಬೆಳೆ ಹಾನಿ, ಸಾಲದ ಬಾಧೆಯಿಂದ ರೈತ ಆತ್ಮಹತ್ಯೆ.

ಲಕ್ಷ್ಮೇಶ್ವರ:ಅಕಾಲಿಕ ಮಳೆ ಹಾಗೂ ಸಾಲದ ಹೊರೆ ತಾಲೂಕಿನಲ್ಲಿ ರೈತರೊಬ್ಬರ ಜೀವ ತೆಗೆದಿದೆ. ಬೆಳೆದ ಬೆಳೆ ಕಣ್ಣೆದುರೇ…

ರಾಜಧಾನಿಯಲ್ಲಿ ಮತ್ತೆ ಇಬ್ಬರು ಗರ್ಭಿಣಿಯರಲ್ಲಿ ಕಂಡು ಬಂದ ಮಹಾಮಾರಿ!

ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಮತ್ತೆ ಇಬ್ಬರು ಗರ್ಭಿಣಿಯರಿಗೆ ಕೊರೊನಾ ಸೋಂಕು ಕಂಡು ಬಂದಿದೆ.

ರೈತರ ಮೇಲೆ ಕಾನೂನು ಕ್ರಮದ ಬೆದರಿಕೆಗೆ ಕುಮಾರಸ್ವಾಮಿ ವಿರೋಧ

ರೈತರ ಮೇಲೆ ದೌರ್ಜನ್ಯ ಎಸಗುವ, ಗುಂಡಿಕ್ಕುವ, ಕಾನೂನು ಕ್ರಮದ ಅಸ್ತ್ರ ಪ್ರಯೋಗಿಸಲು ಈ ಸರ್ಕಾರ ತುದಿಗಾಲಿನ ಮೇಲೆ ನಿಂತಂತೆ ಕಾಣುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ದೇಶದ ಜನತೆಗೆ ಶುಭಾಶಯ ಕೋರಿದ ಮೋದಿ!

ನವದೆಹಲಿ : ಇಂದಿನಿಂದ ನವರಾತ್ರಿ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.