ಎಪಿಎಂಸಿ ಕಾಯ್ದೆ ಬದಲಾವಣೆ ಕಳ್ಳ ಸಂತೆಗೆ ಅನುಕೂಲ: ಶಾಸಕ ಎಚ್.ಕೆ.ಪಾಟೀಲ್

ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆಯಲ್ಲಿ ಬದಲಾವಣೆ ತರಲು ಮುಂದಾಗಿದೆ. ಇದಕ್ಕೆ ವಿರೋಧ ಪಕ್ಷ ಹಾಗೂ ರೈತಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಕೇಂದ್ರ ಸರ್ಕಾರದ ಸೂಚನೆಯಂತೆ ಈ ಕಾಯ್ದೆ ಬದಲಾವಣೆಗೆ ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಇದಕ್ಕೆ ಹಾಲಿ ಶಾಸಕ, ಮಾಜಿ ಸಚಿವ ಎಚ್.ಕೆ.ಪಾಟೀಲ್ ಕೂಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೃಷಿ ಉತ್ಪನ್ನ ಮಾರುಕಟ್ಟೆ ಕಾನೂನು ಬದಲಾವಣೆಯಿಂದ ಎಪಿಎಂಸಿಗಳಿಗಿದ್ದ ವಿಶೇಷ ಅಧಿಕಾರ ಮೊಟಕುಗೊಳಿಸಿದಂತಾಗುತ್ತದೆ. ಇರುವ ಕಾನೂನು ಬದಲಾವಣೆಗೆ ಸರ್ಕಾರ ಏಕೆ ಮುಂದಾಗಿದೆ. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರದಿಂದ ಎಪಿಎಂಸಿಗಳು ವಂಚಿತವಾಗುತ್ತವೆ. ಇದರಿಂದ ರೈತರ ಶೋಷಣೆ ಇನ್ನಷ್ಟು ಹೆಚ್ಚಾಗುವ ಸಾದ್ಯತೆ ಇದೆ. ರೈತ ವಿರೋಧಿಯಾಗಿ ನಡೆದುಕೊಂಡವರ ಮೇಲೆ ಕ್ರಮ ಕೈಗೊಳ್ಳಲು ಇದರಿಂದ ಸಾದ್ಯವಾಗುವದಿಲ್ಲ. ಈ ಕಾಯ್ದೆಯ ಬದಲಾವಣೆ ಕಳ್ಳ ಸಂತೆಗೆ ಅನುಕೂಲ ಮಾಡಿಕೊಟ್ಟಂತಾಗುತ್ತದೆ ಎಂದು ಕಿಡಿಕಾರಿದ್ರು.

Exit mobile version