ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ

ಬೆಂಗಳೂರು: ಈಗಾಗಲೇ ಕೆಲವು ದಿನಗಳಿಂದ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆ ಇಡೇರಿಕೆಗಾಗಿ ಒತ್ತಾಯಿಸುತ್ತಲೇ ಇದ್ದರು. ಕೊನೆಗೂ ಸರ್ಕಾರ ಅತಿಥಿ ಉಪನ್ಯಾಸಕರಿಗೊಂದು ಸಿಹಿ ಸುದ್ದಿ ನೀಡಿದೆ. ಉಪನ್ಯಾಸಕರ ಗೌರವ ಧನವನ್ನು 5000 ರೂ, ಹೆಚ್ಚಳ ಮಾಡಲು ನಿರ್ಧರಿಸಿದೆ.  

ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಅತಿಥಿ ಉಪನ್ಯಾಸಕರ ಸಮಸ್ಯೆಯನ್ನು ಪದವಿಧರ ಕ್ಷೇತ್ರ ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯರು ಸಿಎಂ ಯಡಿಯೂರಪ್ಪ ಅವರ ಗಮನಕ್ಕೆ ತಂದಿದ್ದಾರೆ. ಈ ಕುರಿತು ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಡಿಸಿಎಂ ಅಶ್ವಥನಾರಾಯಣ ತಿಳಿಸಿದ್ದಾರೆ.   

ಸರ್ಕಾರದ ಈ ನಿರ್ಧಾರದಿಂದ ರಾಜ್ಯದ ಪದವಿ, ಡಿಪ್ಲೋಮಾ,ಐಟಿಐ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ 26,000 ಉಪನ್ಯಾಸಕರಿಗೆ ದೊರೆಯಲಿದೆ.

Exit mobile version