ಎಸ್.ಎಸ್.ಎಲ್.ಸಿ-ಪಿಯುಸಿ ಪರೀಕ್ಷೆ ವೇಳಾಪಟ್ಟಿ: ಪಾಲಕ, ವಿದ್ಯಾರ್ಥಿಗಳಿಗೆ ಸಂಪೂರ್ಣ ಮಾಹಿತಿ..

ಬೆಂಗಳೂರು: ರಾಜ್ಯದಲ್ಲಿ ಜೂನ್ 25 ರಿಂದ ಜುಲೈ 4 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಹಾಗೂ ಜೂನ್ 18 ಕ್ಕೆ ಪಿಯುಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

8,48,169 ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗೆ 2879 ಪರೀಕ್ಷಾ ಕೇಂದ್ರಗಳು, 40320 ಕೊಠಡಿಗಳ ಅವಶ್ಯಕತೆ ಇದೆ. ಆರೋಗ್ಯ ಇಲಾಖೆ ಅಧಿಕಾರಿಗಳ ಸಲಹೆ ಪಡೆದು ವಿದ್ಯಾರ್ಥಿಗಳ ನಡುವೆ ಶಾರೀಕ ಅಂತರ ಜೊತೆಗೆ ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು, ಒಬ್ಬ ವಿದ್ಯಾರ್ಥಿಗೆ ಎರಡು ಮಾಸ್ಕ್ ವಿತರಿಸಲಾಗುತ್ತಿದೆ. ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸ್ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗುತ್ತದೆ. ಅನಾರೋಗ್ಯದಿಂದ ಬಳಲುತ್ತಿದ್ದರೆ ಅಂತಹ ವಿದ್ಯಾರ್ಥಿಗೆ ಪರೀಕ್ಷಾ ಕೇಂದ್ರದಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು. ಪರೀಕ್ಷೆ ಬರೆಯಲು ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಇರಲಿದೆ.

ಹಾಸ್ಟೆಲ್ ಗಳಲ್ಲಿದ್ದ ವಿದ್ಯಾರ್ಥಿಗಳಿಗೆ  ಹತ್ತಿರದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ, ಈ ತಿಂಗಳ 25 ರೊಳಗೆ ಸಮೀಪದ ಪರೀಕ್ಷಾ ಕೇಂದ್ರದ ಮುಖ್ಯಸ್ಥರನ್ನು ಸಂಪರ್ಕಿಸಿದರೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತಿದೆ. ವಲಸೆ ಕಾರ್ಮಿಕರ ಮಕ್ಕಳು ಪರೀಕ್ಷಾ ಕೇಂದ್ರ ಬದಲಾವಣೆಗೂ ಅವಕಾಶ ನೀಡಲಾಗಿದೆ.

ಚಂದನ ವಾಹಿನಿಯಲ್ಲಿ ಮಾದರಿ ಪ್ರಶ್ನೆ ಪತ್ರಿಕೆಗಳ ಮೂಲಕ ಉತ್ತರ ಬರೆಯವ ತರಬೇತಿ ನೀಡಲಾಗುತ್ತದೆ. ಇಂಗ್ಲೀಷ್, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳಿಗೆ ಸಂಬಂಧಿಸಿದಂತೆ ಮದ್ಯೆದಲ್ಲಿ ಒಂದೋಂದು ದಿನ ಗ್ಯಾಪ್ ಮೂಲಕ ಪರೀಕ್ಷೆ ನಡೆಸಲಾಗುತ್ತದೆ.
ಪಿಯುಸಿಯ ಇಂಗ್ಲೀಷ್ ಪತ್ರಿಕೆಯ ಪರೀಕ್ಷೆ ಜೂನ್ 18 ಕ್ಕೆ ನಡೆಯಲಿದೆ. ಮೌಲ್ಯ ಮಾಪನಕ್ಕೆ ಒಂದು ತಿಂಗಳು ಕಾಲಾವಕಾಶ ಇರಲಿದೆ. ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ತಮ್ಮ ಸಮೀಪದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.

Exit mobile version