ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿಗೆ ಬಳ್ಳಾರಿ ಜಿಲ್ಲೆಯಲ್ಲಿ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ‌. ಈ ಮೂಲಕ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 38 ಕ್ಕೆ ಏರಿಕೆಯಾದಂತಾಗಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಸಂಭವಿಸಿದ ಮೊದಲ ಸಾವು ಇದಾಗಿದೆ. 61 ವರ್ಷದ ಈ ರೋಗಿ ಕಳೆದ ಒಂದು ವಾರದ ಹಿಂದೆಯಷ್ಟೇ ಬೆಂಗಳೂರಿನಲ್ಲಿ ತೆರೆದ ಹೃದಯ ಚಿಕಿತ್ಸೆಗೆ ಒಳಗಾಗಿದ್ದರು. ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಈತನಿಗೆ ಚಿಕಿತ್ಸೆ ನೀಡಲಾಗಿತ್ತು.
ಕೋಲಾರದಲ್ಲೂ ಶಂಕಿತ ಕೊರೊನಾ ರೋಗಿಯೊಬ್ಬರು ಮೃತಪಟ್ಟಿದ್ದಾರೆ. ಮಾಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿ ಸಾವಿಗೀಡಾಗಿದ್ದು, ಆತಂಕ ಹೆಚ್ಚಿಸಿದೆ. ಮೃತ ವ್ಯಕ್ತಿಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿಯ ಬಳಿಕ ಸಾವಿನ ನಿಖರ ಕಾರಣ ಪತ್ತೆಯಾಗಲಿದೆ. ಅಂದಹಾಗೆ ಈ ವ್ಯಕ್ತಿ ಮುಂಬೈನಿಂದ ಆಗಮಿಸಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *

You May Also Like

ಬೇಡಜಂಗಮ ಪ್ರಮಾಣಪತ್ರ ಸಿಗುವವರೆಗೆ ಹೋರಾಟ ; ಬಿ.ಡಿ. ಹಿರೇಮಠ

ಬೇಡ ಜಂಗಮ ಜಾತಿ ಪ್ರಮಾಣಪತ್ರ ಸಿಗುವವರೆಗೆ ಹೋರಾಟ ನಿಲ್ಲದು’ ಎಂದು ಬೇಡಜಂಗಮ ಸಂಟನೆಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಬಿ.ಡಿ.ಹಿರೇಮಠ ಎಚ್ಚರಿಸಿದರು.

ಗದಗ-ಬೆಟಗೇರಿಯಲ್ಲಿ ಹೋಳಿ ಹಬ್ಬ ಆಚರಣೆಗೆ ಮಾರ್ಗಸೂಚಿಗಳು

ಕೋವಿಡ್ ಸೋಂಕಿನ ಎರಡನೇ ಅಲೆಯು ವ್ಯಾಪಕವಾಗಿ ಹರಡುತ್ತಿರುವುದರಿಂದ ಜಿಲ್ಲಾಡಳಿತ ನೀಡಿದ ಕೊವಿಡ್-19 ರ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಗದಗ-ಬೆಟಗೇರಿ ಅವಳಿ ನಗರದಲ್ಲಿ ಏ.1 ರಂದು ಹೋಳಿ ಹಬ್ಬವನ್ನು ಶಾಂತ ರೀತಿಯಲ್ಲಿ ಸರಳವಾಗಿ ಆಚರಿಸಲು ಡಿವೈಎಸ್‌ಪಿ ಎಸ್.ಕೆ.ಪ್ರಲ್ಹಾದ ತಿಳಿಸಿದ್ದಾರೆ.

ಹರ್ನಾಜ್ ಕೌರ್ ಸಂಧು 2021ರ ನೂತನ ವಿಶ್ವ ಸುಂದರಿ!

ಉತ್ತರಪ್ರಭ ದೆಹಲಿ: 2021ರ 70ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತದ ಹರ್ನಾಜ್ ಕೌರ್ ಸಂಧು…

ಮನೆಯಲ್ಲಿಯೇ ಕುಳಿತ ಮಕ್ಕಳಲ್ಲಿ ಹೆಚ್ಚಾಗುತ್ತಿದೆ ಬೊಜ್ಜು ಸಮಸ್ಯೆ!

ಲಾಕ್ ಡೌನ್ ನಿಂದಾಗಿ ಸದ್ಯ ಮಕ್ಕಳು ಮನೆಯಲ್ಲಿಯೇ ತಮ್ಮ ಬಾಲ್ಯ ಕಳೆಯುತ್ತಿದ್ದಾರೆ. ಇದರಿಂದಾಗಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.