ಬೆಂಗಳೂರು: ರಾಜ್ಯದಲ್ಲಿಂದು ಕೊರೋನಾ ಸೋಂಕಿತ 127 ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 1,373ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಪತ್ತೆಯಾಗಿರುವ 127 ಪ್ರಕರಣಗಳಲ್ಲಿ 91 ಪ್ರಕರಣಗಳಿಗೆ ಮಹಾರಾಷ್ಟ್ರದ ನಂಟಿದೆ.
ಮಂಡ್ಯ-62, ದಾವಣಗೆರೆಯಲ್ಲಿ-19, ಶಿವಮೊಗ್ಗ-12, ಕಲಬುರಗಿ-11, ಬೆಂಗಳೂರು-5, ಉಡುಪಿ-4, ಹಾಸನ-3, ಚಿಕ್ಕಮಗಳೂರು-2, ಗದಗ, ಯಾದಗಿರಿ, ವಿಜಯಪುರ ಮತ್ತು ಚಿತ್ರದುರ್ಗ ತಲಾ 1 ಪ್ರಕರಣ ಸೇರಿದಂತೆ ಒಟ್ಟು 127 ಹೊಸ ಪ್ರಕರಣಗಳು ಪತ್ತೆಯಾಗಿದ್ದು ದಾಖಲೆಯಾಗಿದೆ. ಜೊತೆಗೆ ಕೊರೋನಾ ಸೋಂಕಿತರ ಸಾವಿನ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಒಂದೇ ದಿನ ಗಣನೀಯ ಪ್ರಮಾನದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು ಸಹಜವಾಗಿ ಜನರಲ್ಲಿ ಆತಂಕ ಮೂಡಿಸಿದೆ.
ಮಂಡ್ಯ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೋಂಕಿತರು ಕಂಡು ಬಂದಿದ್ದಾರೆ.
