ನವದೆಹಲಿ: ಲಾಕ್ಡೌನ್ ನಿಂದ ಸ್ಥಗಿತಗೊಂಡಿದ್ದ ನಾಗರಿಕ ವಿಮಾನಯಾನ ಸೇವೆ ಮೇ.25 ರಿಂದ ಮತ್ತೆ ಆರಂಭವಾಗಲಿದೆ. ದೇಶೀಯ ವಿಮಾನಯಾನ ಸೇವೆಗಳನ್ನು ಪುನಾರಂಭಿಸುತ್ತಿರುವುದಾಗಿ ನಾಗರಿಕ ವಿಮಾನಯಾನ ಖಾತೆ ಸಚಿವ ಹರ್ದಿಪ್ ಸಿಂಗ್ ಪುರಿ ತಮ್ಮ ಟ್ವಿಟರ್ ನಲ್ಲಿ ಪ್ರಕಟಣೆ ನೀಡಿದ್ದಾರೆ.
ಸೋಮವಾರದಿಂದ ನಾಗರಿಕ ವಿಮಾನ ಯಾನ ಸೇವೆಗಳನ್ನು ಹಂತಹಂತವಾಗಿ ಆರಂಭಿಸಲು ತೀರ್ಮಾನಿಸಲಾಗಿದೆ. ಅದಕ್ಕಾಗಿ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ರವಾನಿಸಲಾಗಿದೆ ಎಂದು ಪುರಿ ಹೇಳಿದ್ದಾರೆ. ಇದೇ ವೇಳೆ ವಿಮಾನ ನಿಲ್ದಾಣಗಳಲ್ಲಿ, ವಿಮಾನಗಳಲ್ಲಿ ಅನುಸರಿಸಬೇಕಾದು ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾರ್ಗಸೂಚಿಯನ್ನು ಸಹ ಕಳುಹಿಸಿಕೊಡಲಾಗಿದೆ.
ಅಲ್ಲದೇ ವಿಮಾನಗಳಲ್ಲಿ ಪ್ರಯಾಣ ಮಾಡ ಬಯಸುವವರು ಅನುಸರಿಸಬೇಕಾದ ಕ್ರಮಗಳ ಬಗ್ಗೆಯೂ ಸ್ಪಷ್ಟ ಮಾರ್ಗಸೂಚಿಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದೂ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಮುಳಗುಂದ ಅರ್ಬನ್ ಬ್ಯಾಂಕ ಚುನಾವಣೆ 7 ನಾಮಪತ್ರ ಸಲ್ಲಿಕೆ

ಮುಳಗುಂದ : ಇಲ್ಲಿನ ದಿ.ಮುಳಗುಂದ ಅರ್ಬನ್ ಸೌಹಾರ್ದ ಕೋ-ಆಪ್ ಬ್ಯಾಂಕನ ನಿರ್ದೇಶಕ ಮಂಡಳಿಯ 2 ಸ್ಥಾನಗಳಿಗೆ…

ಪುರಸಭೆ ಸದಸ್ಯನಿಗೆ ಕೊರೊನಾ ಪಾಸಿಟಿವ್

ಪಟ್ಟಣದ ಪುರಸಭೆ ಸದಸ್ಯರೊಬ್ಬರಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಇದರಿಂದ ಮಾಸಂಗಿಪುರದ ನಾಗರಿಕರಲ್ಲಿ ಆತಂಕ ಮನೆಮಾಡಿದೆ.

ಕೊರೊನಾ ಸೋಂಕು: ಗದಗನಲ್ಲಿಂದು ಇಬ್ಬರು ಬಿಡುಗಡೆ

ಗದಗ: ಜಿಲ್ಲೆಯಲ್ಲಿ ಕೊವಿಡ್-19 ಸೋಂಕಿನಿಂದ ಗುಣಮುಖರಾಗಿ ಇಂದು ಮತ್ತಿಬ್ಬರು ಬಿಡುಗಡೆ ಹೊಂದಿದರು. ಪಿ-1745(17 ವರ್ಷ), ಪಿ-1795 (16 ವರ್ಷ) ಇಬ್ಬರು ಯುವಕರು ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು.

ಶಿರಹಟ್ಟಿ ತಾಲೂಕಿನ ಕೇರಹಳ್ಳಿ ಗ್ರಾಮದಲ್ಲಿ ಜೋಡಿ ಹತ್ಯೆ

ಕನ್ಯಾ ನೋಡಲು ಬಂದವನು ತನ್ನ ಜೊತೆಗೊಬ್ಬನನ್ನು ಸ್ಮಶಾನಕ್ಕೆ ಕರೆದೋಯ್ದ. ಕನ್ನ್ಯೆ ಯನ್ನು ನೋಡಿ ಬಂದು ನಗುನಗುತ್ತಲೆ…