ಗದಗನಲ್ಲಿ ಮತ್ತೆ ಇಬ್ಬರಿಗೆ ಕೊರೋನಾ ಪಾಸಿಟಿವ್

ಗದಗ: ಜಿಲ್ಲೆಯಲ್ಲಿ ಮತ್ತೆ ಎರಡು ಕೊರೋನಾ ಪಾಸಿಟಿವ್ ದೃಢಪಟ್ಟಿವೆ‌. ಈ ಮೂಲಕ ಸೋಂಕಿತರ ಸಂಖ್ಯೆ 20 ಕ್ಕೆ ಏರಿಕೆಯಾಗಿದೆ. ಇದರಲ್ಲಿ 17 ಪ್ರಕರಣಗಳು ಚಿಕಿತ್ಸೆಯಲ್ಲಿವೆ. ಛತ್ತಿಸಗಡದಿಂದ ಬಂದ 38 ವಯಸ್ಸಿನ ಪಿ-1567 ಹಾಗೂ ಮಹಾರಾಷ್ಟ್ರದಿಂದ ಬಂದಿದ್ದ 32 ವರ್ಷದ 1566 ಪಾಸಿಟಿವ್ ಕೇಸ್ ಗಳಾಗಿವೆ.
ದಿನದಿಂದ ದಿನಕ್ಕೆ ಪಾಸಿಟಿವ್ ಕೇಸ್ ಗಳು ಹೆಚ್ಚಾಗುತ್ತಿದ್ದು ಜನರ ಆತಂಕ ಹೆಚ್ಚಿಸಿದೆ. ಮುಖ್ಯವಾಗಿ ನಗರಕ್ಕೆ ಸೀಮಿತವಾಗಿದ್ದ ಕೊರೋನಾ ಸೋಂಕು ಗ್ರಾಮೀಣ ಭಾಗಕ್ಕೂ ವ್ಯಾಪಿಸುತ್ತಿರುವುದು ಆತಂಕ ಹೆಚ್ಚಿಸಿದೆ

Exit mobile version