ಮುಂಬಯಿನ ಮೀನು ಮಾರುಕಟ್ಟೆಯಿಂದ ಬಂದ ಕೊರೊನಾ!

ಬಳ್ಳಾರಿ: ಮುಂಬಯಿನ ಮೀನದ ಮಾರುಕಟ್ಟೆಯಲ್ಲಿ ಮೀನು ಮಾರುಕಟ್ಟೆಯಲ್ಲಿ ಕೆಲಸ ಮಾಡಿ ಮರಳಿ ಬಂದಿದ್ದ ಜಿಲ್ಲೆಯ 11 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಮೂರು ಕುಟುಂಬಗಳ ಸೋಂಕಿತರಲ್ಲಿ ಏಳು ಮಹಿಳೆಯರು, ಮೂವರು ಪುರುಷರು ಮತ್ತು ಓರ್ವ ಅಲ್ಪಸಂಖ್ಯಾತರಿದ್ದಾರೆ. ಮಹಿಳೆಯರ ಪೈಕಿ ಒಬ್ಬರು ಎಂಟು ತಿಂಗಳ ಗರ್ಭಿಣಿ ಮತ್ತು ಒಬ್ಬ ಬಾಣಂತಿ ಇದ್ದಾರೆ. ಅವರೆಲ್ಲರನ್ನು ಬುಧವಾರ ರಾತ್ರಿಯೇ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಬಳ್ಳಾರಿ ನಗರದ 6, ಬಳ್ಳಾರಿ ತಾಲೂಕಿನ ರೂಪನಗುಡಿಯ 3 ಮತ್ತು ಚಾಗನೂರಿನ ಇಬ್ಬರಿಗೆ ಸೋಂಕು ತಗುಲಿದೆ. ಬಾಣಂತಿಯ 9 ತಿಂಗಳ ಹಸುಗೂಸಿನ ಜೊತೆ ಅಜ್ಜ-ಅಜ್ಜಿ ಬಳಿ ಇದ್ದರು. ಹೀಗಾಗಿ ಅವರ ಗಂಟಲ ದ್ರವದ ಮಾದರಿಯನ್ನು ತಜ್ಞರ ನೆರವಿನೊಂದಿಗೆ ತೆಗೆದು ಪ್ರಯೋಗಾಲಯಕ್ಕೆ ಕಳಿಸಲಾಗುವುದು. 11 ಸೋಂಕಿತರೊಂದಿಗೆ ಮೊದಲ ಹಂತದ ಸಂಪರ್ಕ ಹೊಂದಿದ್ದ 49 ಮಂದಿ ಸೇರಿದಂತೆ 187 ಮಂದಿಯನ್ನು ಕ್ವಾರಂಟೈನ್ ಕೇಂದ್ರಗಳಲ್ಲಿರಿಸಲಾಗಿದೆ ಎಂದು ನಕುಲ್ ವಿವರಿಸಿದ್ದಾರೆ.

Exit mobile version