ಬೆಂಗಳೂರು: ಅಪ್ಪಟ ಸುಳ್ಳು, ಅತಿರಂಜಿತ ವಿಷಯಗಳನ್ನೇ ಮುಂದಿಟ್ಟುಕೊಂಡು ಜನರನ್ನು ವಂಚಿಸುವ ಆಡಳಿತದ ಮುಂದುವರಿದ ಭಾಗವಾಗಿ @narendramodi ಅವರ ಕೋರೋನ ಪರಿಹಾರ ಪ್ಯಾಕೇಜ್ ನಮ್ಮ ಮುಂದಿದೆ. ಹೀಗಾಗಿ 20 ಲಕ್ಷ ಕೋಟಿಯಲ್ಲಿರುವ 13 ಸೊನ್ನೆಗಳಲ್ಲಿ ಯಾರಿಗೆ ಯಾವ ‘ಸೊನ್ನೆ’ ಸಿಗಲಿದೆ ಎನ್ನುವುದು ಈಗ ಮೂಡಿರುವ ಪ್ರಶ್ನೆಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಕೇಂದ್ರ ಸರ್ಕಾರದ ಕೊರೊನಾ ಪ್ಯಾಕೇಜ್ ವಿರುದ್ಧ ಕಿಡಿಕಾರಿದ್ದಾರೆ.
20 ಲಕ್ಷ ಕೋಟಿ ಪ್ಯಾಕೇಜ್ ಅನ್ನು ಕೊರೊನಗೆ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು. ಈ ಕುರಿತು ತಕರಾರು ತೆಗೆದಿರುವ ಸಿದ್ದರಾಮಯ್ಯ 20 ಲಕ್ಷ ಕೋಟಿ ಮೊತ್ತದಲ್ಲಿ ಇರುವ 13 ಸೊನ್ನೆಗಳಲ್ಲಿ ಯಾರಿಗೆ ಯಾವ ಸೊನ್ನೆ ಸಿಗಲಿದೆ ಎನ್ನುವುದು ಪ್ರಶ್ನೆಯಾಗಿದೆ ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದು, #6MahineKaNyayDoModiJi ಹ್ಯಾಷ್ ಟ್ಯಾಗ್ ನಡಿ ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಸರ್ಕಾರದ ಸಪ್ತಪದಿ ಯೋಜನೆಯಡಿ ಮದುವೆ ಆಗ್ಬೇಕಾ..? ಇಲ್ಲಿದೆ ಪೂರ್ಣ ಮಾಹಿತಿ

2019-20 ನೇ ಸಾಲಿನಿಂದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಅಧಿಸೂಚಿತ ದೇವಾಲಯಗಳಲ್ಲಿ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ನಡೆಸಲು ಸೂತ್ತೋಲೆಗಳನ್ನು ಹೊರಡಿಸಲಾಗಿದೆ.

ರಾಜ್ಯದಲ್ಲಿ ಇಂದು 4 ಸಾವಿರ ಗಡಿಯೊಳಗೆ ಬಂದ ಮಹಾಮಾರಿ!

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇಂದು 4 ಸಾವಿರಕ್ಕಿಂತಲೂ ಕಡಿಮೆ ಜನರಲ್ಲಿ ಮಹಾಮಾರಿ ಕಾಣಿಸಿಕೊಂಡಿದೆ.

ಜೂ.14ರವರೆಗೆ ರಾಜ್ಯಾದ್ಯಂತ ಲಾಕ್ ಡೌನ್ ವಿಸ್ತರಣೆ!

ಕೋವಿಡ್ ಸಾಂಕ್ರಾಮಿಕ ಸೋಂಕನ್ನು ಸಂಪೂರ್ಣ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸೂಕ್ತವೆಂದು ಪರಿಗಣಿಸಿ ಈ ಹಿಂದೆ ಜೂನ್ 7ರವರೆಗೆ ಜಾರಿಗೊಳಿಸಲಾಗಿತ್ತು. ಪ್ರಸ್ತುತ ಕೋವಿಡ್ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದರೂ ಕೂಡ, ವೈರಾಣು ಹರಡುವಿಕೆ ಮುಂದುವರೆದಿದೆ. ಆರೋಗ್ಯ ಪರಿಣಿತರ ಸಲಹೆಯ ಮೇರೆಗೆ ಮುಂದುವರೆಸೋದು ಸೂಕ್ತ ಎಂದು ಪರಿಗಣಿಸಿ 14-06-2021ರವರೆಗೆ ಒಂದು ವಾರ ಕಾಲ ವಿಸ್ತರಿಸಲು ನಿರ್ಧರಿಸಲಾಗಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

ಲಾಕ್ ಡೌನ್ ಅವಧಿ ವಿಸ್ತರಣೆ: ಜೂ.7ರವರೆಗೆ ಗದಗ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಕೆ

ಜೂನ್ ಒಂದರವರೆಗೂ ಇದ್ದ ಲಾಕ್ ಡೌನ್ 7 ನೇ ತಾರೀಖಿನವರೆಗೂ ಮುಂದುವರಿಸಲಾಗುವುದು. ಕೆಲ ಸಡಿಲಿಕೆಯೊಂದಿಗೆ ಗದಗ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಕೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.