ಬೆಂಗಳೂರು: ದೇಶದ ಜನರ ದೇಣಿಗೆಯ ಪಿಎಂ ಕೇರ್ಸ್ ಫಂಡ್ (PMCaresFund) ಯಾರೊಬ್ಬರ ಮನೆಯ ಆಸ್ತಿ ಅಲ್ಲ. ಅದು ಈ ದೇಶದ ಪ್ರಜೆಗಳ ದುಡ್ಡು, ಅದು ಸದುಪಯೋಗವಾಗಬೇಕು ಎಂದು ಹೇಳುವ ಅಧಿಕಾರ ಪ್ರತಿಯೊಬ್ಬರಿಗೆ ಇದೆ. ಅದನ್ನೇ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಸೋನಿಯಾಗಾಂಧಿಯವರು ಹೇಳಿದ್ದಾರೆ ತಪ್ಪೇನಿದೆ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ನಮ್ಮ ಅಧ್ಯಕ್ಷರಾದ ಸೋನಿಯಾಗಾಂಧಿಯವರ ವಿರುದ್ಧ ದುರುದ್ದೇಶದಿಂದ ಎಫ್ಐಆರ್ ದಾಖಲಿಸಿದ ಸಾಗರದ ಪೊಲೀಸ್ ಅಧಿಕಾರಿ ಹದ್ದು ಮೀರಿ ವರ್ತಿಸಿದ್ದಾರೆ. ಕರ್ನಾಟಕದ ಸಿಎಂ ಬಿ.ಎಸ್.ಯಡಿಯೂರಪಪ್ಪ ಅವರೇ, ಅನಗತ್ಯ ರಾಜಕೀಯ ಸಂಘರ್ಷಕ್ಕೆ ಅವಕಾಶ ನೀಡದೆ ತಕ್ಷಣ ಈ ಎಫ್ಐಆರ್ ರದ್ದುಪಡಿಸಿ ಮತ್ತು ಅಧಿಕಾರಿಯನ್ನು ಅಮಾನತ್ ನಲ್ಲಿರಿಸಿ ಎಂದು ಅವರು ಒತ್ತಾಯಿಸಿದ್ದಾರೆ.
ಇತ್ತೀಚೆಗೆ ಕರ್ನಾಟಕ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಅಲ್ಲಲ್ಲಿ ಪೊಲೀಸರು ಮೊಕದ್ದಮೆ ದಾಖಲಿಸುತ್ತಿರುವುದು ನಡೆದಿದೆ. ಈ ರೀತಿ ನಮ್ಮ ಬಾಯಿ ಮುಚ್ಚಿಸಬಹುದು ಎಂದು ತಿಳಿದುಕೊಂಡಿದ್ದರೆ ಅದು ಮೂರ್ಖತನ. ಮುಂದಿನ ದಿನಗಳಲ್ಲಿ ನಮ್ಮ ಪ್ರಶ್ನೆಗಳು ಇನ್ನಷ್ಟು ಹರಿತವಾಗಲಿವೆ. ಸಂಘರ್ಷ ಇನ್ನಷ್ಟು ಬಿರುಸು ಪಡೆಯಲಿದೆ ಎಂದು ಅವರು ಹೇಳಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಸಮಯ ಮತ್ತು ಶ್ರಮವನ್ನು ಕೋವಿಡ್ -19 ಸೋಂಕನ್ನು ಎದುರಿಸಲು ಮತ್ತು ನೊಂದವರಿಗೆ ನೆರವಾಗಲು ವ್ಯಯ ಮಾಡಲಿ. ಈ ಕಷ್ಟದ ದಿನಗಳ ಅವಕಾಶವನ್ನು ದುರುಪಯೋಗ ಮಾಡಿಕೊಂಡು ವಿರೋಧ ಪಕ್ಷಗಳ ನಾಯಕರನ್ನು ಕಾರ್ಯಕರ್ತರನ್ನು ಹಣಿಯಲು ದುರುಪಯೋಗ ಮಾಡಿಕೊಳ್ಳಬೇಡಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮ ಅಧ್ಯಕ್ಷರಾದ ಸೋನಿಯಾಗಾಂಧಿಯವರು ವಿರೋಧ ಪಕ್ಷದ ನಾಯಕಿಯಾಗಿ ಜನಾಭಿಪ್ರಾಯವನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಇದಕ್ಕೆ ಸ್ಪಂದಿಸುವುದು ಜವಾಬ್ದಾರಿಯುತ ಸರ್ಕಾರದ ಕರ್ತವ್ಯ ಎಂದು ಅವರು ಪ್ರತಿಪಾದಿಸಿದರು.
ಸೋನಿಯಾ ಗಾಂಧಿಯವರ ವಿರುದ್ಧ ದೂರು ನೀಡಿದವನು ರಾಜ್ಯ ಬಿಜೆಪಿ ಕಾರ್ಯಕರ್ತನಾಗಿದ್ದು, ರಾಜಕೀಯ ದುರುದ್ದೇಶದಿಂದಲೇ ಇದನ್ನು ಮಾಡಲಾಗಿದೆ ಎಂಬ ಬಗ್ಗೆ ಅನುಮಾನ ಇಲ್ಲ. ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಈ ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸದಿದ್ದಲ್ಲಿ ರಾಜಕೀಯ ಹೋರಾಟ ಅನಿವಾರ್ಯವಾಗಬಹುದು ಎಂದು ಅವರು ಸವಾಲೆಸೆದಿದ್ದಾರೆ.

Leave a Reply

Your email address will not be published. Required fields are marked *

You May Also Like

ರೈತರ ಸಾಲ ಮರುಪಾವತಿಗೆ ಆಗಸ್ಟ್ ವರೆಗೆ ಗಡುವು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಇಂತಿವೆ.

ವಿದ್ಯಾರ್ಥಿಗಳಿಗೆ ಬಸ್ ಪಾಸ್ ಅವಧಿ ಫೆ.28 ರವರೆಗೆ ವಿಸ್ತರಣೆ

ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭದ ನಂತ್ರ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಅವಧಿ ಮುಕ್ತಾಯಗೊಂಡಿದ್ದರೂ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಜ.31 ರ ವರೆಗೆ ಅವಕಾಶ ನೀಡಿ ಕೆಎಸ್‌ಆರ್‌ಟಿಸಿ ಆದೇಶ ನೀಡಿತ್ತು.

ಕಷ್ಟಾ ಮಾಡೋದು ಭಾಳ್ ಕಷ್ಟ ಅಂತ ಕಷ್ಟದ ಅಂಗಡಿನಾ ಬಂದ್ ಮಾಡಿದ ತಿಪ್ಪಾ..!

ಅನೌನು ಎರಡ್ ತಿಂಗಳ್ ಹೊತ್ತಾತು ಗಡ್ಡದಾಗೂ ಸೀರ ಸೇರುವಂಗಾಗ್ಯಾವು, ಕೆರದ್ , ಕೆರದ್ ತಲಿ ಕೆಟ್ ಹೋಗೈತಿ. ಅದಕ್ ಇವತ್ತು ಕಷ್ಟದ ಅಂಗಡಿ ಚಾಲೂ ಅಂದಿದ್ದಕ್ಕ ನಾನು ದುಡಿಕಿಲೇ ಬಂದೇ ಅಷ್ಟರಾಗ್ ನೀನಾ ಅಂಗಡಿ ಕದಾ ಹಾಕ್ಕೊಂಡು ಹೊಂಟ್ಯಲ್ಲಾ ಅಂದ ಯಲ್ಲಾ.

ಪೊಲೀಸ್ ಠಾಣೆಯೇ ದೇವಸ್ಥಾನವಿದ್ದಂತೆ : ಪೂಜೆ ಸಲ್ಲಿಸಿ ಗೌರವ

ಪೊಲೀಸರೆ ದೇವರು, ಪೊಲೀಸ್ ಠಾಣೆಯೇ ದೇವಸ್ಥಾನ ಎನ್ನುವ ಕಲ್ಪನೆಯೊಂದಿದೆ ಪೊಲೀಸ್ ಠಾಣೆಗೆ ಪೂಜೆ ಸಲ್ಲಿಸಿ ಈ ಮೂಲಕ ಕೊರೋನಾ ವಾರಿಯರ್ಸ್ ಗೆ ಗೌರವ ಸಲ್ಲಿಸಲಾಯಿತು.