ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ರೋಗ ನಿಯಂತ್ರಿಸಲು ಎಲ್ಲ ಮಾರ್ಗಸೂಚಿಗಳನ್ನು ಅತ್ಯಂತ ಕಟ್ಟು ನಿಟ್ಟಾಗಿ ಪಾಲಿಸಬೇಕೆಂದು ಕೇಂದ್ರ ಸರ್ಕಾರ, ರಾಜ್ಯಗಳಿಗೆ ಮತ್ತೆ ಸೂಚಿಸಿದೆ.

ಲಾಕ್ ಡೌನ್ ಗೆ ಸಂಬಂಧಿಸಿದ ಗೃಹ ಸಚಿವಾಲಯದ ಮಾರ್ಗಸೂಚಿ ಜಾರಿಗೊಳಿಸಲು ಸ್ಥಳೀಯ ಆಡಳಿತಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದೆ. ಕೇಂದ್ರೀಯ ಮಾರ್ಗಸೂಚಿಗಳ ಉಲ್ಲಂಘನೆ ಸಂಬಂಧ ಮಾಧ್ಯಮಗಳ ವರದಿ ಹಾಗೂ ಇತರ ಮೂಲಗಳನ್ನು ಉಲ್ಲೇಖಿಸಿ ರಾಜ್ಯ ಸರ್ಕಾರಗಳ ಮುಖ್ಯಕಾರ್ಯದರ್ಶಿಗಳಿಗೆ ಈ ಸಂಬಂಧ ಪತ್ರ ಬರೆದಿರುವ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ, ಕೋವಿಡ್-19 ನಿಯಂತ್ರಿಸುವ ಕ್ರಮಗಳ ಜಾರಿ ಖಾತರಿ ಪಡಿಸಲು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಕಂಟೈನ್ ಮೆಂಟ್ ಪ್ರದೇಶಗಳನ್ನು ಸೂಕ್ತವಾಗಿ ಗುರುತಿಸಿ, ಈ ವಲಯಗಳಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಹಾಗೂ ನಿರ್ಬಂಧ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ರಾತ್ರಿ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ರಾತ್ರಿ ಕರ್ಪ್ಯೂ ಅಥವಾ ಎಲ್ಲ ಅಗತ್ಯೇತರ ಚಟುವಟಿಕೆಗಳ ನಿಷೇಧಿಸಬೇಕೆಂದು ಸೂಚಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಸ್ಪಾ ಹೆಸರಿನಲ್ಲಿ ಸೆಕ್ಸ್ ದಂಧೆ…ಗ್ರಾಹಕರ ವೇಷದಲ್ಲಿ ಹೋಗಿದ್ದ ಪೊಲೀಸರಿಗೆ ಶಾಕ್!

ಜೈಪುರ : ಸ್ಪಾ, ಮಸಾಜ್ ಶಾಪ್ ಗೆ ದಾಳಿ ಮಾಡಿದ ಪೊಲೀಸರು, ವೇಶ್ಯಾವಾಟಿಕೆಯ ಜಾಲ ಬಯಲಿಗೆ ಎಳೆದಿದ್ದಾರೆ.

ಗದಗ ಜಿಲ್ಲೆಯಲ್ಲಿಂದು 2 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 2 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 176…

ಮಣಿಪುರ ವಿದ್ಯಾರ್ಥಿ ಸಂಘದಿಂದ ಸಚಿವ ಸಿ.ಸಿ.ಪಾಟೀಲ್ ಸಹಾಯಕ್ಕೆ ಕೃತಜ್ಞತೆ

ಮಣಿಪುರ ರಾಜ್ಯದ ವಿದ್ಯಾರ್ಥಿಗಳ ಸಂಘಕ್ಕೆ ಸಹಾಯ ಮಾಡಿದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ ಅವರಿಗೆ ಮಣಿಪುರ ವಿದ್ಯಾರ್ಥಿ ಸಂಘ ಟ್ವೀಟ್ ಮೂಲಕ ಅಭಿನಂದಿಸಿದೆ.