ಮುಂಬಯಿ: ಕೊರೊನಾ ಮಹಾಮಾರಿಗೆ ಇಡೀ ಮಹಾರಾಷ್ಟ್ರವೇ ಕಂಗಾಲಾಗಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 41 ಸಾವಿರ ಗಡಿ ದಾಟಿದೆ.

ಮುಂಬಯಿ ನಗರವೊಂದರಲ್ಲಿಯೇ ಬರೋಬ್ಬರಿ 25 ಸಾವಿರ ಜನರಲ್ಲಿ ಸೋಂಕು ಪತ್ತೆಯಾಗಿದೆ. ಹೀಗಾಗಿ ಜನರಲ್ಲಿ ದಿನದಿಂದ ದಿನಕ್ಕೆ ಆತಂಕ ಹೆಚ್ಚಾಗುತ್ತಿದೆ. ಹೆಮ್ಮಾರಿ ವೈರಸ್ ಆರ್ಭಟಕ್ಕೆ ಕಳೆದ 24 ಗಂಟೆಗಳಲ್ಲಿ 1,382 ಜನರಲ್ಲಿ ಸೋಂಕು ಪತ್ತೆಯಾಗಿದೆ. 41ಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ.

ಈ ನಡುವೆ 285 ಜನ ಸೋಂಕಿನಿಂದ ಗುಣಮುಖರಾಗಿದ್ದು, ಈ ವರೆಗೂ ಗುಣಮುಖರಾದವರ ಸಂಖ್ಯೆ 6,751ಕ್ಕೆ ಏರಿಕೆಯಾಗಿದೆ. ಇದರಲ್ಲಿ 5,524 ಜನ ಸರ್ಕಾರಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, 1,227 ಮಂದಿ ಖಾಸಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆಂದು ಬಿಎಂಸಿ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

You May Also Like

ಅಪರೂಪದ ಕರಿನಾಗರ ಪ್ರತ್ಯಕ್ಷ, ಕುತೂಹಲ ಮೂಡಿಸೊದ ಕಪ್ಪು ಬಣ್ಣದ ಉರಗ..!

ಉತ್ತರಪ್ರಭ ಸುದ್ದಿ ಗದಗ: ಜಿಲ್ಲೆಯ ನರಗುಂದ ತಾಲೂಕಿನ ಹೊರವಲಯದಲ್ಲಿರುವ ಜ್ಞಾನಮುದ್ರಾ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಅಪರೂಪದ…

ಉತ್ತಮ ಆಡಳಿತ ನಡೆಸುತ್ತಿರುವ ರಾಜ್ಯ ಯಾವುದು ಗೊತ್ತಾ?

ಬೆಂಗಳೂರು : ದೇಶದಲ್ಲಿ ಉತ್ತಮ ಆಡಳಿತ ನಡೆಸುತ್ತಿರುವ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದೆ ಈ ಪೈಕಿ ಕೇರಳ ಹಾಗೂ ಗೋವಾ ರಾಜ್ಯಗಳು ಮೊದಲ ಸ್ಥಾನ ಗಳಿಸಿವೆ.

ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ವಿಫಲ: ರಾಹುಲ್ ಟ್ವೀಟ್!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ಯಡವಿದೆ ಎಂದು…

ದೇಶದಲ್ಲಿ ಕೊರೊನಾ ಕಸ ಸೃಷ್ಟಿಯಾಗಿದ್ದು ಎಷ್ಟು ಗೊತ್ತಾ?

ನವದೆಹಲಿ : ದೇಶದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದರಿಂದಾಗಿ ಆಸ್ಪತ್ರೆಯಲ್ಲಿ ಕೂಡ ತ್ಯಾಜ್ಯ ಹೆಚ್ಚಾಗುತ್ತಿದೆ. ಜೂನ್ ನಿಂದ ಸೆಪ್ಟೆಂಬರ್ ವರೆಗೆ ದೇಶದಲ್ಲಿ 18 ಸಾವಿರಕ್ಕೂ ಅಧಿಕ ಟನ್ ವೈದ್ಯಕೀಯ ತ್ಯಾಜ್ಯ ಸಂಗ್ರಹವಾಗಿದೆ ಎಂದು ತಿಳಿದು ಬಂದಿದೆ.