ಬೆಂಗಳೂರು: ಕೊರೋನಾ ಸೋಂಕು ತಪಾಸಣೆಗೆ ಒಳಪಡುವ ಸಾರ್ವಜನಿಕರು ತಾವು ಬಳಸುವ ತಮ್ಮದೇ ಮೊಬೈಲ್ ಸಂಖ್ಯೆಯನ್ನು ಅಧಿಕೃತ ನಮೂನೆಯಲ್ಲಿ ದಾಖಲಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾಕ್ಟರ್ ಕೆ.ಸುಧಾಕರ್ ಮನವಿ ಮಾಡಿದ್ದಾರೆ .
ತಪಾಸಣೆಗೆ ಒಳಪಡುವ ಎಲ್ಲರೂ ಕಡ್ಡಾಯವಾಗಿ ಆರೋಗ್ಯ ಸೇತು ಆ್ಯಪ್ ಅನ್ನು ಡೌನ್ಲೋಡ್ ಮಾಡಿಕೊಂಡಿರಬೇಕು. ಜೊತೆಗೆ ತಮ್ಮದೇ ಮೊಬೈಲ್ ಸಂಖ್ಯೆ ದಾಖಲಿಸಬೇಕು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ತಮ್ಮದಲ್ಲದ ಮೊಬೈಲ್ ಸಂಖ್ಯೆ ದಾಖಲಿಸಿದರೆ ಸೋಂಕು ತಪಾಸಣೆ ಮತ್ತು ಇತರೆ ಮಾಹಿತಿಗಳು ಅವರಿಗೆ ತಲುಪುವುದಿಲ್ಲ. ಜೊತೆಗೆ ತಪಾಸಣೆಗೆ ಒಳಪಟ್ಟವರಿಗೆ ಆರೋಗ್ಯ ಸೇತು ಆ್ಯಪ್ ಮೂಲಕ ನಿಯಮಿತವಾಗಿ ರವಾನಿಸುವ ಯಾವುದೇ ಮಾಹಿತಿ ಸಿಗುವುದಿಲ್ಲ. ಹೀಗಾಗಿ ತಾವು ಬಳಸುವ ಮೊಬೈಲ್ ಸಂಖ್ಯೆಯನ್ನು ಮಾತ್ರವೇ ನಮೂದಿಸಬೇಕು ಎಂದು ಹೇಳಿಕೆಯಲ್ಲಿ ವಿವರಿಸಿದ್ದಾರೆ.
ಈ ಹಿಂದೆ ಕೊರೋನಾ ಸೋಂಕು ತಪಾಸಣೆಗೆ ಒಳಗಾದ ಕೆಲವರು ತಮ್ಮ ಸಂಬಂಧಿಗಳ ಮೊಬೈಲ್ ಸಂಖ್ಯೆಯನ್ನು ನೀಡಿದ್ದರು. ಇದರಿಂದ ಅಧಿಕೃತ ಮಾಹಿತಿ ಅವರಿಗೆ ತಲುಪದೇ ಸಾಕಷ್ಟು ಗೊಂದಲಗಳು ಎದುರಾದವು. ಅದೇ ರೀತಿಯ ತಪ್ಪುಗಳು ಪುನರಾವರ್ತನೆ ಆಗದಂತೆ ತಪ್ಪಿಸುವ ಉದ್ದೇಶದಿಂದ ಸರಿಯಾದ, ತಾವೇ ಬಳಸುವ ಮೊಬೈಲ್ ಸಂಖ್ಯೆ ನಮೂದಿಸುವಂತೆ ಹೇಳಿಕೆಯಲ್ಲಿ ಸಚಿವ ಸುಧಾಕರ್ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು 2 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 2 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 176…

ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ಸಿದ್ದರಾಮಯ್ಯ ವಿರೋಧ

ಬೆಂಗಳೂರು: ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ 79ಎ, ಬಿ, ಸಿ, 80 ಹಾಗೂ 63…

ಜನ ದೇಣಿಗೆ ನೀಡಿದ್ದು ಮಂದಿರಕ್ಕಾಗಿ, ಬಿಜೆಪಿಗಲ್ಲ: ಸಿದ್ದರಾಮಯ್ಯ ಟೀಕೆ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಜನರು ದೇಣಿಗೆ ನೀಡುತ್ತಿದ್ದಾರೆ ಅದು ಬಿಜೆಪಿಗಾಗಿ ಅಲ್ಲ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಮಕ್ತುಮಸಾಬ ಮುಧೋಳ ಒತ್ತಾಯ

ಕೂಡಲೇ ಸರ್ಕಾರಗಳು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ, ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ಜೆಡಿಎಸ್ ತಾಲೂಕಾಧ್ಯಕ್ಷ ಮಕ್ತುಮಸಾಬ ಮುಧೋಳ ಒತ್ತಾಯಿಸಿದ್ದಾರೆ.