ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ದಾಖಲಾಗಿರುವ ಎಫ್.ಐ.ಆರ್ ಕೈಬಿಡಲು ಸಿಎಂ ಬಿ.ಎಸ್.ಯಡಿಯೂರಪ್ಪ ಮುಂದಾಗಿದ್ದು, ಈ ನಡೆ ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದ ನಿಯೋಗ ಸೋನಿಯಾ ವಿರುದ್ಧ ದಾಖಲಾಗಿರುವ ಎಫ್.ಐ.ಆರ್ ರದ್ದುಗೊಳಿಸುವಂತೆ ಮನವಿ ಮಾಡಿತ್ತು.
ಈ ಕುರಿತು ಪ್ರತಿಕ್ರಿಯಿಸಿದ್ದ ಬಿ.ಎಸ್.ವೈ. ಎಫ್.ಐ.ಆರ್. ಕೈಬಿಡುವ ಭರವಸೆಯನ್ನೂ ನೀಡಿದ್ದರು. ಆದರೆ ಇದರ ನಡುವೆ ಯಾವುದೇ ಕಾರಣಕ್ಕೂ ಎಫ್ ಐ ಆರ್ ಕೈಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.
ಕೊರೋನಾ ವಿರುದ್ಧದ ಹೋರಾಟದಲ್ಲಿ ಹಣಕಾಸಿನ ಮುಗ್ಗಟ್ಟನ್ನು ನಿವಾರಿಸಲು ಹಾಗೂ ಕಾಯಿದೆಗಳಿಗೆ ತಿದ್ದುಪಡಿ ತರಲು ವಿಪಕ್ಷಗಳ ಸಹಕಾರ ಅಗತ್ಯ ಎಂಬ ಸಂಗತಿಯನ್ನು ಸಿಎಂ ಅರಿತಿದ್ದಾರೆ. ಎಪಿಎಂಸಿ ಕಾಯಿದೆ ತಿದ್ದುಪಡಿ, ಭೂ ಸುಧಾರಣೆ ವಿರುದ್ಧ ಈಗಾಗಲೇ ಕಾಂಗ್ರೆಸ್, ಜೆಡಿಎಸ್ ವ್ಯಾಪಕ ವಿರೋಧ ವ್ಯಕ್ತಪಡಿಸಿವೆ. ಈ ಹಿನ್ನೆಲೆಯಲ್ಲಿ ಬಿಎಸ್ವೈಟ ಎಚ್ಚರಿಕೆಯ ಹೆಜ್ಜೆ ಇಡಲು ಮುಂದಾಗಿದ್ದಾರೆ. ಆದರೆ ಸ್ವಪಕ್ಷೀಯರು ಅವರ ನಡೆಗೆ ಮುಳ್ಳಾಗಿದ್ದಾರೆ ಎಂದು ಹೇಳಲಾಗುತ್ತಿದೆ.
