ಬೆಂಗಳೂರು:ಕೊರೋನಾ ಸೋಂಕಿಗೆ ಸಂಬಂಧಿಸಿದಂತೆ ಉತ್ತಮ ಚಿಕಿತ್ಸೆ ಹಾಗೂ ಮರಣ ಪ್ರಮಾಣ ತಗ್ಗಿಸುವಲ್ಲಿ ನಮ್ಮ ಬೆಂಗಳೂರು ನಗರ ಮುಂಚೂಣಿಯಲ್ಲಿದೆ. ಹೀಗಾಗಿ ಈ ಕಾರ್ಯದಲ್ಲಿ ಬಹಳಷ್ಟು ಕಾಳಜಿಯಿಂದ ಸೇವೆ ಸಲ್ಲಿಸಿದ ಕೊರೋನಾ ಯೋಧರ ಇಡೀ ತಂಡಕ್ಕೆ ನನ್ನ ಅಭಿನಂದನೆಗಳು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಸಿಎಂ ಬಿ.ಎಸ್.ಯಡಿಯೂರಪ್ಪ ಕೊರೋನಾ ಯೋಧರಿಗೆ ಅಭಿನಂದಿಸಿ ಮಾಡಿರುವ ಟ್ವೀಟ್

ನಮ್ಮ ಕೊರೋನಾ ಯೋಧರ ಪರಿಶ್ರಮಕ್ಕೆ ಹೆಮ್ಮೆಯ ಅನುಮೋದನೆ ದೊರೆಕಿದೆ. ಕೋವಿಡ್19ನ್ನು ಪರಿಣಾಮಕಾರಿ ನಿರ್ವಹಣೆಗಾಗಿ 4 ಮಾದರಿ ನಗರಗಳನ್ನು ಕೇಂದ್ರ ಸರ್ಕಾರ ಗುರುತಿಸಿದೆ. ಇದರಲ್ಲಿ ನಮ್ಮ ಬೆಂಗಳೂರು ನಗರ ಕೂಡ ಒಂದಾಗಿದೆ. ಈ ನಿಟ್ಟಿನಲ್ಲಿ ಉತ್ತಮ ಸೇವೆಯನ್ನು ಮುಂದುವರೆಸೋಣ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.  

Leave a Reply

Your email address will not be published. Required fields are marked *

You May Also Like

ಗದಗ-ಯಲವಿಗಿ ರೈಲು ನಿರ್ಮಾಣ ಮಾಡಲು ಶಾಸಕ ರಾಮಣ್ಣ ಒತ್ತಾಯ

ಈ ಸಾಲಿನ ಅಯವ್ಯಯದಲ್ಲಿ ಗದಗ ಯಲವಿಗಿ ರೈಲ್ವೆ ಯೋಜನೆಗೆ ರಾಜ್ಯ ಸರಕಾರದಿಂದ ಅನುದಾನ ಮೀಸಲಿಡಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಮಾನ್ಯ ಬಿ.ಎಸ್.ಯಡಿಯೂರಪ್ಪರವರಿಗೆ ಮನವಿ ಸಲ್ಲಿಸಿದರು.

ಮುಂದಿನ ದಿನಗಳಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚಾಗುತ್ತಂತೆ

ಮುಂದಿನ ದಿನಗಳಲ್ಲಿ ಒಂದಿಷ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಬಹುದು. ಸಮಸ್ಯೆ ಎದುರಿಸಲು ಸರಕಾರ ಸಂಪೂರ್ಣ ಸಜ್ಜಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಹೇಳಿದರು.

ಪ.ಜಾ-ಪ.ಪಂ ಕುಂದುಕೊರತೆ ಸಭೆ

ನಗರದ ಡಿ.ಸಿ.ಮಿಲ್ ತಳಗೇರಿ ಓಣಿಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ ಆಯೋಜಿಸಲಾಯಿತು.