ಮತ್ತೊಬ್ಬ ಸಚಿವರಿಗೆ ಕೊರೋನಾ ಸೋಂಕು..!

ಮುಂಬಯಿ:ಮಹಾರಾಷ್ಟ್ರದ ವಸತಿ ಸಚಿವ ಜಿತೇಂದ್ರ ಅವ್ಹಾದ್ ಅವರ ನಂತರ ಮತ್ತೊಬ್ಬ ಸಚಿವರಿಗೆ ಕೊರೊನಾ ಸೋಂಕು ತಗುಲಿದೆ. ಕಾಂಗ್ರೆಸ್ ನಾಯಕ ಹಾಗೂ ಲೋಕೋಪಯೋಗಿ ಸಚಿವ ಅಶೋಕ್ ಚವ್ಹಾಣ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಕ್ಯಾಬಿನೆಟ್‍ನ ಇಬ್ಬರು ಸಚಿವರಿಗೆ ಕೊರೊನಾ ಸೋಂಕು ತಗುಲಿದಂತಾಗಿದ್ದು, ಈ ಹಿಂದೆ ವಸತಿ ಸಚಿವ ಜಿತೇಂದ್ರ ಅವ್ಹಾದ್ ಅವರಿಗೆ ಸೋಂಕು ತಗುಲಿತ್ತು. ನಂತರ ಅವರು ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. ಇದೀಗ ಲೋಕೋಪಯೋಗಿ ಸಚಿವ ಅಶೋಕ್ ಚವ್ಹಾಣ್ ಅವರಿಗೆ ಸೋಂಕು ತಗುಲಿದೆ. ಅಶೋಕ್ ಅವರನ್ನು ನಾಂದೇಡ್‍ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ಸಚಿವರು ಮುಂಬೈ ಹಾಗೂ ಅವರ ಜಿಲ್ಲೆ ಮಾರಥ್ವಾಡಕ್ಕೆ ಪದೇ ಪದೇ ಸಂಚರಿಸಿದ್ದಾರೆ. ಈ ವೇಳೆ ಅವರು ಸೋಂಕಿತನನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ.

Exit mobile version