ಕೊಲ್ಲಂ: ವ್ಯಕ್ತಿಯೊಬ್ಬ ತನ್ನ ಪತ್ನಿ ಮಲಗಿದ್ದಾಗ ನಾಗರಹಾವು ಬಿಟ್ಟು ಹತ್ಯೆ ಮಾಡಿದ ಭಯಾನಕ ಘಟನೆ ಕೇರಳದಲ್ಲಿ ನಡೆದಿದೆ. ಅಂಚಲ್ ನಿವಾಸಿ ಎಸ್.ಉತ್ತರ ಎಂಬ 25 ವರ್ಷದ ಮಹಿಳೆ ಹಾವು ಕಚ್ಚಿ ಸಾವನ್ನಪ್ಪಿದ್ದಾಳೆ. ಆದರೆ ಮಹಿಳೆ ಪೋಷಕರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಆಕೆಯ ಪತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಪತ್ನಿಯನ್ನು ಕೊಲೆ ಮಾಡಿದ ಪತಿ ಸೂರಜ್ ನನ್ನು ಬಂಧಿಸಿದ್ದಾರೆ. ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದ ಸೂರಜ್ ರೂ.10 ಸಾವಿರ ನೀಡಿ ಹಾವಾಡಿಗ ಸುರೇಶ್ ನಿಂದ ಹಾವನ್ನು ತರಿಸಿದ್ದ. ಬಳಿಕ ತನ್ನ ರೂಮ್ ನಲ್ಲಿ ಹಾವನ್ನು ಬಿಟ್ಟು ಪತ್ನಿಗೆ ಕಚ್ಚುವಂತೆ ಮಾಡಿದ್ದ. ಮೊದಲ ಬಾರಿಗೆ ಹಾವು ಕಚ್ಚಿದಾಗಲೇ ಪತ್ನಿ ಸಾಯುತ್ತಾಳೆ ಎಂದು ಸೂರಜ್ ಅಂದುಕೊಂಡಿದ್ದ. ಆದರೆ ಅದೃಷ್ಟವಶಾತ್ ಉತ್ತರ ಬದುಕುಳಿದಿದ್ದಳು. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುಣಮುಖಳಾಗಿ ತವರು ಮನೆಗೆ ತೆರಳಿದ್ದಳು. ಆದರೆ ಎರಡನೇ ಬಾರಿ ಸುರೇಶ್ ನಿಂದ ಹಾವನ್ನು ಬಾಡಿಗೆ ಪಡೆದು ಪತ್ನಿ ಮಲಗಿದ್ದಾಗ ಅದನ್ನು ಬಿಟ್ಟಿದ್ದಾನೆ. ಎರಡನೇ ಬಾರಿ ಹಾವು ಕಚ್ಚಿದ್ದರಿಂದ ಪತ್ನಿ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಳಿಯ ಸೂರಜ್ ವರದಕ್ಷಿಣೆಗಾಗಿ ನಮ್ಮ ಮಗಳಿಗೆ ಕಿರುಕುಳ ನೀಡುತ್ತಿದ್ದ. ಮದುವೆಯ ಸಮಯದಲ್ಲಿ ನೀಡಿದ್ದ ಕೆಲವು ಆಭರಣಗಳು ಲಾಕರ್ ನಿಂದ ಕಾಣೆಯಾಗಿವೆ ಎಂದು ಸಹ ಪೋಷಕರು ದೂರಿದ್ದಾರೆ.

1 comment
Leave a Reply

Your email address will not be published. Required fields are marked *

You May Also Like

ರಾಜಸ್ಥಾನದಲ್ಲಿ ಸೋಂಕಿತರ ಸಂಖ್ಯೆ ವಿಪರೀತ ಹೆಚ್ಚಳ – ಗಡಿ ಬಂದ್!!

ಜೈಪುರ: ಮಹಾಮಾರಿಯ ಅಟ್ಟಹಾಸ ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಗಡಿ ಬಂದ್…

ಸಚಿವ ಆರ್. ಅಶೋಕಗೆ ಕೋವಿಡ್ ಸೋಂಕು, ಆಸ್ಪತ್ರೆಗೆ ದಾಖಲು

ಬೆಂಗಳೂರು:  ಪದ್ಮನಾಭನಗರ ಕ್ಷೇತ್ರದ ಬಿಜೆಪಿ ಶಾಸಕ, ಕಂದಾಯ ಸಚಿವ ಆರ್. ಅಶೋಕಗೆ ಕೋವಿಡ್ ಸೋಂಕು ತಗುಲಿದೆ.…

ಮೋದಿ ವಿರುದ್ಧ ಗುಡುಗಿರುವ ಮಾಜಿ ಪ್ರಧಾನಿ!

ನವದೆಹಲಿ : ಚೀನಾ ಸಂಘರ್ಷದ ಕುರಿತು ಮಾತನಾಡಿರುವ ಪ್ರಧಾನಿ ತಾವು ಆಡುವ ಮಾತುಗಳ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಮತ್ತು ತಮ್ಮ ಸ್ಥಾನದ ಸಮರ್ಥನೆ ಮಾಡಿಕೊಳ್ಳಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.