ಚಾಮರಾಜನಗರ: ಲಾಕ್ ಡೌನ್ ನಿಂದಾಗಿ ಮಲೆ ಮಹದೇಶ್ವರನಿಗೆ ರೂ. 15 ಕೋಟಿಗೂ ಹೆಚ್ಚು ನಷ್ಟ ಉಂಟಾಗಿದೆ.

ಚಾಮರಾಜನಗರ ಜಿಲ್ಲೆಯ ಹನೀರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿನ ದೇವಾಲಯ ಕಳೆದ ಎರಡು ತಿಂಗಳಿಂದ ಮುಚ್ಚಿದೆ. ಹೀಗಾಗಿ ಭಕ್ತರಿಲ್ಲದೆ ಮಹದೇಶ್ವರನ ಆದಾಯದಲ್ಲಿ ಹೆಚ್ಚಿನ ನಷ್ಟ ಅನುಭವಿಸಿದೆ.

ಹುಂಡಿಯೊಂದರಲ್ಲಿಯೇ ಪ್ರತಿ ತಿಂಗಳು ಕೋಟಿ ರೂ.ಗೂ ಹೆಚ್ಚು ಸಂಗ್ರಹವಾಗುತ್ತಿತ್ತು. ಚಿನ್ನದ ತೇರು, ವಿವಿಧ ಸೇವೆ ಲಾಡು ಮಾರಾಟ ಹಾಗೂ ವಸತಿ ಗೃಹ ಮೊದಲಾದ ಮೂಲಗಳಿಂದ ಬರುತ್ತಿದ್ದ ಆದಾಯದಲ್ಲಿ ಇದೀಗ ಕೋಟಿಗಟ್ಟಲೆ ಕಡಿತವಾಗಿದೆ.

ಆದರೆ, ದೇವಸ್ಥಾನದಲ್ಲಿ 200 ಜನ ಖಾಯಂ ನೌಕರಸ್ಥರು ಸೇರಿದಂತೆ 475ಕ್ಕೂ ಹೆಚ್ಚು ಜನರಿಗೆ ಪ್ರತಿ ತಿಂಗಳು ಸಂಬಳ ನೀಡಲಾಗುತ್ತಿದೆ. ಸದ್ಯ ಯರಿಗೂ ಕಡಿತ ಮಾಡದೆ ಸಂಬಳ ನೀಡಲಾಗುತ್ತಿದೆ. ವೇತನ, ವಿದ್ಯುತ್ ಬಿಲ್, ಸ್ವಚ್ಚತೆ, ಸೇರಿದಂತೆ ಪ್ರತಿ ತಿಂಗಳು ರೂ. 2 ಕೋಟಿಗೂ ಅಧಿಕ ಖರ್ಚಾಗುತ್ತಿದೆ. ಅಭಿವೃದ್ಧಿ ಕೆಲಸಗಳಿಗೆ ಮೀಸಲಿಟ್ಟಿದ್ದ ಹಣದಲ್ಲಿ ಪ್ರಾಧಿಕಾರ ಖರ್ಚು ವೆಚ್ಚ ಸರಿದೂಗಿಸುತ್ತಿದೆ.

Leave a Reply

Your email address will not be published. Required fields are marked *

You May Also Like

ಬಿಸಿಯೂಟದ ಬದಲು ಅಹಾರ ನೀಡಿ : ಹೈಕೋರ್ಟ್ ಸೂಚನೆ

ಕೊರೊನಾ ಸೋಂಕು ಮಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟದ ಬದಲಿಗೆ ಅಹಾರ ಧಾನ್ಯ ವಿತರಿಸಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಕಾರ್ಮಿಕ ಮುಖಂಡ ಮಹೇಶ್ ಹಿರೇಮಠ ಆಕ್ರೋಶ: ಸರ್ಕಾರದ ಕೆಟ್ಟ ಧೋರಣೆ ನಿಲ್ಲುವವರೆಗೂ ನಮ್ಮ ಹೋರಾಟ ನಿಲ್ಲದು

ಸರ್ಕಾರದ ಕೆಟ್ಟ ಧೋರಣೆಗಳು ಎಲ್ಲಿಯವರೆಗೆ ನಡೆಯುತ್ತವೇಯೋ ಅಲ್ಲಿಯವರೆಗೆ ನಮ್ಮ ಹೋರಾಟ ನಿಲ್ಲುವದಿಲ್ಲ ನಮ್ಮ ಕಾರ್ಮಿಕ ವರ್ಗದವರು ಅನುಭವಿಸುವ ನೋವು ಸರ್ಕಾರಕ್ಕೆ ಗೊತ್ತಾಗುತ್ತಿಲ್ಲ ಎಂದು ಕಾರ್ಮಿಕ ಮುಖಂಡ ಮಹೇಶ್ ಹಿರೇಮಠ ಸರ್ಕಾರದ ವಿರುದ್ಧ ಕಿಡಿಕಾರಿದರು.

ಮುಂಬೈನ 800 ಚದರ ಅಡಿ ಜಾಗಕ್ಕೆ ತಿಂಗಳಿಗೆ 1 ರೂಪಾಯಿ!: ಪತ್ನಿಗೆ ಲೀಸ್ ಕೊಟ್ಟ ಬ್ಯಾಂಕ್ ಚೇರ್ಮನ್

ಖಾಸಗಿ ಬ್ಯಾಂಕಿನ ಮುಖ್ಯಸ್ಥರೊಬ್ಬರು ತಮ್ಮ ಪತ್ನಿಯ ಎನ್.ಜಿ.ಒ.ಗೆ ತಮ್ಮ ಬ್ಯಾಂಕಿನ ಪಕ್ಕದ ಜಾಗವನ್ನು ಬಳಸಿಕೊಳ್ಳಲು ನೀಡಿದ್ದ ವಿಷಯ ಈಗ ಬೆಳಕಿಗೆ ಬಂದಿದೆ. ತಿಂಗಳಿಗೆ ನಾಮಕಾವಸ್ಥೆ ಒಂದೇ ಒಂದು ರೂಪಾಯಿ ಬಾಡಿಗೆಯಷ್ಟೇ ಎಂದು ಎನ್.ಡಿ.ಟಿ.ವಿ ವರದಿ ಮಾಡಿದೆ. ಯೆಸ್ ಬ್ಯಾಂಕ್ ಸೇರಿದಂತೆ ಕೆಲವು ಬ್ಯಾಂಕ್ ಗಳು ದಿವಾಳಿ ಹೊಂದಿದ್ದರ ಹಿಂದೆ ಬ್ಯಾಂಕ್ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಸದಸ್ಯರ ಸ್ವಾರ್ಥವಿತ್ತು ಎನ್ನುವುದನ್ನು ನೋಡಿದ್ದೇವೆ.

ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ: ಆಕಾಂಕ್ಷಿಗಳಿಗೆ ಅಚ್ಚರಿ

ಇದೇ 19 ರಂದು ರಾಜ್ಯದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.